ಶಶಿಕಲಾ ಆರೋಗ್ಯ ಸ್ಥಿರ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು, ಜ.22: ಕೋವಿಡ್-19 ಸೋಂಕು ದೃಢಪಟ್ಟಿರುವ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಶಶಿಕಲಾ ಅವರು ತೀವ್ರ ರಕ್ತದೊತ್ತಡ, ಮಧುಮೇಹ ಮತ್ತು ಹೈಪೋ ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಎಲ್ಲ ಆರೋಗ್ಯ ಸಮಸ್ಯೆಯೊಂದಿಗೆ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದು ಕೋವಿಡ್ ಸೋಂಕಿನಿಂದ ಈ ಸಮಸ್ಯೆ ತೀವ್ರಗೊಂಡಿದೆ ಎನ್ನಲಾಗಿದೆ.
ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ.
Next Story





