Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ನಲ್ಲಿ ಗದ್ದಲ ಪ್ರಕರಣ: ಸದನ...

ವಿಧಾನಪರಿಷತ್ ನಲ್ಲಿ ಗದ್ದಲ ಪ್ರಕರಣ: ಸದನ ಸಮಿತಿಯಿಂದ 84 ಪುಟಗಳ ಮಧ್ಯಂತರ ವರದಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ22 Jan 2021 7:25 PM IST
share
ವಿಧಾನಪರಿಷತ್ ನಲ್ಲಿ ಗದ್ದಲ ಪ್ರಕರಣ: ಸದನ ಸಮಿತಿಯಿಂದ 84 ಪುಟಗಳ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು, ಜ.22: ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿ.15ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ ಸದನ ಸಮಿತಿ ಶುಕ್ರವಾರ 84 ಪುಟಗಳ ಮಧ್ಯಂತರ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸಲ್ಲಿಸಿತು.

ವಿಧಾನಸೌಧದಲ್ಲಿರುವ ಸಭಾಪತಿಯ ಕೊಠಡಿಯಲ್ಲಿ ವರದಿ ಸಲ್ಲಿಸಿ ಮಾತನಾಡಿದ ಸದನ ಸಮಿತಿ ಅಧ್ಯಕ್ಷ ಮರಿತಿಬ್ಬೇಗೌಡ, ಸಮಿತಿಗೆ 20 ದಿನಗಳ ಕಾಲಾವಕಾಶ ನೀಡಲಾಗಿತ್ತು, ಈವರೆಗೆ ಸಮಿತಿ ಒಟ್ಟು ಐದು ಸಭೆಗಳನ್ನು ನಡೆಸಿದ್ದು, ಹೆಚ್ಚಿನ ಸಮಯಾವಕಾಶ ಬೇಕಾಗಿದೆ. ಆದುದರಿಂದ, ಸಮಿತಿಯ ಮೊದಲ ನಾಲ್ಕು ಸಭೆಗಳ ಮಾಹಿತಿಯನ್ನೊಳಗೊಂಡ ವರದಿ ಹಾಗೂ ಸಾಕ್ಷ್ಯಾದಾರಗಳನ್ನು ಸಿಡಿ ರೂಪದಲ್ಲಿ ಮಧ್ಯಂತರ ವರದಿಯಲ್ಲಿ ಸಲ್ಲಿಸಲಾಗಿದೆ, ಸಂಪೂರ್ಣ ವರದಿ ಸಲ್ಲಿಸಲು ಇನ್ನೂ ಹೆಚ್ಚಿನ ಸಮಯಾವಕಾಶ ಕೇಳಲಾಗುವುದು ಎಂದು ತಿಳಿಸಿದರು.

ಘಟನೆಯ ಕುರಿತು ಈವರೆಗೆ ನಡೆಸಿದ ಐದು ಸಭೆಗಳಲ್ಲಿ ಅಂದು ವಿಧಾನ ಪರಿಷತ್‍ನಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಕಾರ್ಯದರ್ಶಿ, ಮಾರ್ಷಲ್ಸ್ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಅವರಿಗೆ ನೋಟಿಸ್ ನೀಡಿ ಪ್ರಾಥಮಿಕ ಹೇಳಿಕೆ ಪಡೆಯಲಾಗಿದೆ. ಅಂದಿನ ಅಧಿವೇಶನದಲ್ಲಿ ಹಾಜರಿದ್ದು ಅಧಿವೇಶನದ ಕಲಾಪಗಳನ್ನು ಚಿತ್ರೀಕರಿಸಿರುವ ಖಾಸಗಿ ಸುದ್ದಿ ವಾಹಿನಿಗಳು, ವಿಧಾನ ಪರಿಷತ್‍ನ ವೆಬ್‍ಕಾಸ್ಟ್, ಲೋಕೋಪಯೋಗಿ ಇಲಾಖೆ ನಿರ್ವಹಿಸುವ ಸಿಸಿ ಕ್ಯಾಮೆರಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಘಟನೆ ಕುರಿತು ಮಾಹಿತಿ ಪಡೆಯುವ ಅಗತ್ಯವಿದೆ ಎಂದು ಸಮಿತಿ ತೀರ್ಮಾನಿಸಿದೆ ಎಂದು ಮರಿತಿಬ್ಬೇಗೌಡ ಹೇಳಿದರು.

ಘಟನೆಯ ನಂತರ ನಡೆದ ಉಪಸಭಾಪತಿ ಧರ್ಮೆಗೌಡ ಅವರ ಸಾವಿನ ಕುರಿತು ಅವರು ಬರೆದಿಟ್ಟಿದ್ದಾರೆ ಎನ್ನಲಾಗಿರುವ ಪತ್ರವನ್ನು ಒದಗಿಸಲು ಕೋರಿ ಗೃಹ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಆದುದರಿಂದ, 20 ದಿನಗಳ ಒಳಗಾಗಿ ಪೂರ್ಣ ವರದಿಯನ್ನು ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಇಂತಹ ಘಟನೆಗಳು ನಡೆದಿರುವ ಕುರಿತು ಮಾಹಿತಿಯನ್ನು ಪಡೆಯಲು ಸಮಿತಿ ತೀರ್ಮಾನಿಸಿದ್ದು, ಇನ್ನೂ ಎಷ್ಟು ಸಮಯ ಬೇಕಾಗಬಹುದು ಎನ್ನುವುದರ ಸ್ಪಷ್ಟತೆ ಸಿಕ್ಕಮೇಲೆ ಸಭಾಪತಿಗಳಿಗೆ ಪತ್ರ ಬರೆದು ಹೆಚ್ಚಿನ ಸಮಯಾವಕಾಶವನ್ನು ಲಿಖಿತವಾಗಿ ಕೇಳಲಾಗುವುದು ಎಂದು ಮರಿತಿಬ್ಬೇಗೌಡ ತಿಳಿಸಿದರು.

ಸಮಿತಿಯ ಮಧ್ಯಂತರ ವರದಿಯನ್ನು ಸ್ವೀಕರಿಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮಾತನಾಡಿ, ಅಂದು ನಡೆದ ಅಹಿತಕರ ಘಟನೆ ಕುರಿತು ಐದು ಸದಸ್ಯರನ್ನೊಳಗೊಂಡ ಸದನ ಸಮಿತಿಯನ್ನು ಸರಕಾರ ರಚಿಸಿ ಆದೇಶ ಹೊರಡಿಸಿತ್ತು. ಆದರೆ, ಅದರಲ್ಲಿ ಎಚ್.ವಿಶ್ವನಾಥ್ ಮತ್ತು ಸಂಕನೂರು ಖಾಸಗಿ ಕಾರಣಗಳಿಂದ ಸಮಿತಿಗೆ ರಾಜಿನಾಮೆ ನೀಡಿದ್ದು, ಪ್ರಸ್ತುತ ಸಮಿತಿಯಲ್ಲಿ 3 ಸದಸ್ಯರಿದ್ದಾರೆ ಎಂದರು.

ಸಮಿತಿಗೆ 20 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು, ಸಮಿತಿಗೆ ಕಾಲಾವಕಾಶ ಸಾಕಾಗುತ್ತಿಲ್ಲವೆಂದು ಇಂದು ಮಧ್ಯಂತರ ವರದಿಯನ್ನು ಸಲ್ಲಿಸಿ ಹೆಚ್ಚಿನ ಸಮಯವನ್ನು ಕೋರಿದೆ. ಸಮಿತಿ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು ಎಂದು ಪ್ರತಾಪ್ ಚಂದ್ರ ಶೆಟ್ಟಿ ಹೇಳಿದರು.

ಈ ಸಂದರ್ಭದಲ್ಲಿ ಸದನ ಸಮಿತಿಯ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಹಾಗೂ ಆರ್.ಬಿ.ತಿಮ್ಮಾಪುರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X