Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತಿಥಿ ಉಪನ್ಯಾಸಕರ ಬಗ್ಗೆ ಸರಕಾರದ...

ಅತಿಥಿ ಉಪನ್ಯಾಸಕರ ಬಗ್ಗೆ ಸರಕಾರದ ಅಮಾನವೀಯ ನಡೆ : ಮಂಜಪ್ಪ ಗೋಣಿ

'ಸೇವಾ ಸಕ್ರಮಾತಿಗೆ ಆಗ್ರಹ'

ವಾರ್ತಾಭಾರತಿವಾರ್ತಾಭಾರತಿ22 Jan 2021 9:23 PM IST
share

ಉಡುಪಿ, ಜ.22: ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದುಡಿಯುತ್ತಿರುವ 14,183 ಮಂದಿ ಅತಿಥಿ ಉಪನ್ಯಾಸಕರ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಕೊರೋನದ ಸಂಕಷ್ಟದ ಸಮಯದಲ್ಲಿ ಅತ್ಯಂತ ಅಮಾನವೀಯ ಧೋರಣೆಯನ್ನು ತಳೆದಿದ್ದು, ಎರಡು ತಿಂಗಳ ಮಟ್ಟಿಗೆ ಶೇ.50ರಷ್ಟು ಮಂದಿಯ ಸೇವೆಯನ್ನು ಮಾತ್ರ ಬಳಸಿಕೊಳ್ಳುವಂತೆ ಆದೇಶ ಹೊರಡಿಸಿದೆ ಎಂದು ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜಪ್ಪ ಗೋಣಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಈ ಆದೇಶದಿಂದಾಗಿ 8000ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಕುಟುಂಬಗಳು ನಿರುದ್ಯೋಗದ ಕಾರಣಕ್ಕಾಗಿ ಬೀದಿಗೆ ಬೀಳುವಂತಾಗಿದೆ. ಉಪನ್ಯಾಸಕರನ್ನು ಅಮಾನವೀಯ ವಾಗಿ ಬೀದಿಗೆ ತಳ್ಳುವುದು ಮತ್ತು ಲಕ್ಷಾಂತರ ಪದವಿ ವಿದ್ಯಾರ್ಥಿಗಳ ಭವಿಷ್ಯವನ್ನು ಸಂಕಷ್ಟಕ್ಕೆ ಈಡು ಮಾಡುವುದು ಸ್ವಸ್ಥ ಸಮಾಜದ ಲಕ್ಷಣವೂ ಅಲ್ಲ, ಅಭಿವೃದ್ಧಿಯ ಸೂಚಕವೂ ಅಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 14ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸ್ನಾತಕೋತ್ತರ ಪದವಿ, ಎಂಫಿಲ್, ಪಿಎಚ್‌ಡಿ, ನೆಟ್, ಸ್ಲೆಟ್‌ಗಳಂತಹ ಉನ್ನತ ಪದವಿಯೊಂದಿಗೆ ಕಳೆದ ಮೂರು ದಶಕಗಳಿಂದ ಕೇವಲ 11,000ರೂ. ಹಾಗು 13,000ರೂ. ಗೌರವಧನಕ್ಕೆ ವರ್ಷದ 10 ತಿಂಗಳು ದುಡಿಯುತಿದ್ದು, ಕೆಲವರು ನಿವೃತ್ತಿಯ ಅಂಚಿಗೆ ತಲುಪಿದ್ದಾರೆ. ಇವರಿಗೆ ಸೇವಾ ಭದ್ರತೆಯಾಗಲೀ, ಯಾವುದೇ ವಿಧದ ಸೌಲಭ್ಯಗಳನ್ನಾಗಲಿ ಸರಕಾರ ಸತತವಾಗಿ ನಿರಾಕರಿಸುತ್ತಾ ಬಂದಿದೆ. ದೇಶದಲ್ಲೇ ಅತ್ಯಂತ ಕಡಿಮೆ ಗೌರವಧನಕ್ಕೆ ದುಡಿಯುವ ಉಪನ್ಯಾಸಕರು ಕರ್ನಾಟಕದವರು ಎಂದು ಮಂಜಪ್ಪ ಗೋಣಿ ತಿಳಿಸಿದರು.

ಕೋವಿಡ್-19ರ ಈ ಸಂಕಷ್ಟದ ವೇಳೆ ಅತಿಥಿ ಉಪನ್ಯಾಸಕರ ದಯನೀಯ ಆರ್ಥಿಕ ಸ್ಥಿತಿ ಅರಿತು ಸರಕಾರ ಬಾಕಿ ಇದ್ದ ಐದು ತಿಂಗಳ ಗೌರವಧನ ಬಿಡುಗಡೆ ಮಾಡಿದೆ. ಆದರೆ ಕಳೆದ ಆಗಸ್ಟ್ ಬಳಿಕ ಇವರನ್ನು ಇನ್ನೂ ಉದ್ಯೋಗಕ್ಕೆ ತೆಗೆದುಕೊಂಡಿಲ್ಲ. ಇದೀಗ ಕಾಲೇಜುಗಳು ಪ್ರಾರಂಭಗೊಂಡರೂ ಕೇವಲ ಪೂರ್ಣಕಾಲಿಕ ಉಪನ್ಯಾಸಕರು ಮಾತ್ರ ಕಾಲೇಜಿಗೆ ಬರುತಿದ್ದು, ಅತಿಥಿ ಉಪನ್ಯಾಸಕರಿಗೆ ಕೆಲಸಕ್ಕೆ ಬರಲು ಇನ್ನೂ ಸೂಚಿಸಿಲ್ಲ ಎಂದವರು ದೂರಿದರು.

ಇದೀಗ ಕಾಲೇಜು ಶಿಕ್ಷಣ ಇಲಾಖೆ ಜ.19ರಂದು ಆದೇಶವೊಂದನ್ನು ಹೊರಡಿಸಿ ಈಗಿರುವ 14,183 ಅತಿಥಿ ಉಪನ್ಯಾಸಕರಲ್ಲಿ ಶೇ.50ರಷ್ಟು (7091) ಅತಿಥಿ ಉಪನ್ಯಾಸಕರನ್ನು ಮಾತ್ರ ತುರ್ತಾಗಿ ನೇಮಿಸಿಕೊಂಡು ಮಾರ್ಚ್‌ವರೆಗೆ ಇವರ ಸೇವೆ ಬಳಸಿಕೊಳ್ಳು ವಂತೆ ಸೂಚಿಸಿದೆ. ಗುರುವಾರ ಇನ್ನೊಂದು ಆದೇಶ ಹೊರಡಿಸಿ ಈ ಸಂಖ್ಯೆಯನ್ನೂ ಕಡಿತಗೊಳಿಸಿದೆ ಎಂದು ಗೋಣಿ ತಿಳಿಸಿದರು.

ಬೇಡಿಕೆ: ನಮ್ಮ ತುರ್ತು ಬೇಡಿಕೆ ಏನೆಂದರೆ ಇಲಾಖೆ ಜ.19ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆದು, 2020ರ ನ.17ರಿಂದಲೇ ಅತಿಥಿ ಉಪನ್ಯಾಸಕರ ಸೇವೆ ಅನ್ವಯವಾಗುವಂತೆ 2019-20ನೇ ಸಾಲಿನಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪ್ಯಾಸಕರನ್ನು 2020-21ನೇ ಸಾಲಿಗೂ ಮುಂದುವರಿಸು ವಂತೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಹಾಗೂ ಕೋವಿಡ್-19 ಮಾರ್ಗಸೂಚಿಯಂತೆ ಪ್ರತಿ ತರಗತಿಯಲ್ಲಿ 40-50 ವಿದ್ಯಾರ್ಥಿ ಗಳಿಗೆ ಸೀಮಿತ ಗೊಳಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದು. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸಿ ಅವರ ಮೂರು ದಶಕಗಳ ಸುದೀರ್ಘ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸಂಘದ ಕಾನೂನು ಸಲಹೆಗಾರ ರಫೀಕ್ ಖಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X