Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಂಡಿಸಿಗೆ ಅನುದಾನ ಕಡಿತ ಮಾಡಿದ ರಾಜ್ಯ...

ಕೆಎಂಡಿಸಿಗೆ ಅನುದಾನ ಕಡಿತ ಮಾಡಿದ ರಾಜ್ಯ ಸರಕಾರ: ಅರಿವು ಶೈಕ್ಷಣಿಕ ಸಾಲ ಸಿಗದೆ ವಿದ್ಯಾರ್ಥಿಗಳು ಕಂಗಾಲು

ಅಮ್ಜದ್ ಖಾನ್ ಎಂ.ಅಮ್ಜದ್ ಖಾನ್ ಎಂ.22 Jan 2021 9:26 PM IST
share
ಕೆಎಂಡಿಸಿಗೆ ಅನುದಾನ ಕಡಿತ ಮಾಡಿದ ರಾಜ್ಯ ಸರಕಾರ: ಅರಿವು ಶೈಕ್ಷಣಿಕ ಸಾಲ ಸಿಗದೆ ವಿದ್ಯಾರ್ಥಿಗಳು ಕಂಗಾಲು

ಬೆಂಗಳೂರು, ಜ.22: ರಾಜ್ಯ ಸರಕಾರವು ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ಕ್ಕೆ 2020-21ನೆ ಸಾಲಿನ ಬಜೆಟ್‍ನಲ್ಲಿ ಹಂಚಿಕೆ ಮಾಡಿದ್ದ 125 ಕೋಟಿ ರೂ.ಗಳ ಅನುದಾನವನ್ನು ಎರಡು ಬಾರಿ ಪರಿಷ್ಕರಿಸಿ ಇದೀಗ 71.54 ಕೋಟಿ ರೂ.ಗಳಿಗೆ ಇಳಿಸಿರುವುದರಿಂದ, ಅರಿವು ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

125 ಕೋಟಿ ರೂ.ಗಳ ಬಜೆಟ್ ಅನ್ನು ಪರಿಷ್ಕರಿಸಿ 105.04 ಕೋಟಿ ರೂ.ಗಳಿಗೆ ಇಳಿಸಲಾಗಿತ್ತು. ಇದೀಗ ಪುನಃ ಎರಡನೆ ಬಾರಿ ಪರಿಷ್ಕರಿಸಿ 33 ಕೋಟಿ ರೂ.ಗಳನ್ನು ಕಡಿತ ಮಾಡಿ, 71.54 ಕೋಟಿ ರೂ.ಗಳಿಗೆ ಅನುದಾನ ಇಳಿಸಲಾಗಿದೆ. ಕೆಎಂಡಿಸಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ 14 ಯೋಜನೆಗಳು ಜಾರಿಯಲ್ಲಿವೆ. ಈಗಿರುವ ಸೀಮಿತ ಅನುದಾನದಲ್ಲಿಯೆ ಎಲ್ಲ ಯೋಜನೆಗಳನ್ನು ಮುನ್ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

2019-20ನೆ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಲ್ಲಿಸಿರುವ ಬಹುತೇಕ ಅರ್ಜಿಗಳು ಅನುದಾನದ ಕೊರತೆಯಿಂದಾಗಿ ಇನ್ನೂ ಇತ್ಯರ್ಥವಾಗದೆ ಬಾಕಿ ಉಳಿದಿವೆ. 2019-20ನೆ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 227.40 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, 2020-21ನೆ ಸಾಲಿನಲ್ಲಿ ಈ ಮೊತ್ತವನ್ನು 125.04 ಕೋಟಿ ರೂ.ಗಳಿಗೆ ಇಳಿಕೆ ಮಾಡಲಾಗಿದೆ.

ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಗಾಗಿ ಕೆಎಂಡಿಸಿಯಲ್ಲಿರುವ ಇತರ ಯೋಜನೆಗಳಲ್ಲಿ ಖರ್ಚಾಗದೆ ಉಳಿದಿದ್ದ ಅನುದಾನವನ್ನೆಲ್ಲ ಸೇರಿ ಸುಮಾರು 165 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು. ಆದರೆ, ಈ ಬಾರಿ ಅನುದಾನದ ಕೊರತೆಯಿಂದಾಗಿ ನೀಟ್ ಹಾಗೂ ಸಿಇಟಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಹೊಸದಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಮರೀಚಿಕೆಯಾಗಿದೆ.

ಅನುದಾನದ ಲಭ್ಯತೆ ಇಲ್ಲದಿರುವುದರಿಂದ ಕೆಎಂಡಿಸಿ ವತಿಯಿಂದ ಕೇವಲ ನವೀಕರಣ ಪ್ರಕರಣ ವಿದ್ಯಾರ್ಥಿಗಳಿಗೆ ಮಾತ್ರ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತಿದೆ. ಸರಕಾರ ಅನುದಾನದ ಕಡಿತ ಮಾಡಿರುವುದರಿಂದ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಇದೀಗ ಈ ಯೋಜನೆಯ ಸೌಲಭ್ಯ ಪಡೆಯದೆ ವಂಚಿತರಾಗುವಂತಾಗಿದೆ.

ಪ್ರತಿದಿನ ವಿದ್ಯಾರ್ಥಿಗಳು, ಪೋಷಕರು ಕೆಎಂಡಿಸಿ ಕಚೇರಿಗೆ ನಿರಂತರವಾಗಿ ಅಲೆಯುತ್ತಿದ್ದಾರೆ. ಸರಕಾರದ ನಿರ್ಲಕ್ಷ್ಯದಿಂದಾಗಿ, ಖಾಸಗಿ ಕಾಲೇಜುಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸೇರಿರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಕಷ್ಟ ಹೇಳತೀರದಾಗಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂಬುದು ವಿದ್ಯಾರ್ಥಿಗಳು ಹಾಗೂ ಪೋಷಕರ ಆಗ್ರಹವಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ 2019-20ನೆ ಸಾಲಿನಲ್ಲಿ 2,020 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು 2020-21ನೆ ಸಾಲಿನಲ್ಲಿ 1,276 ಕೋಟಿ ರೂ.ಗಳಿಗೆ ಇಳಿಸಿತು. ಅಲ್ಲದೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮುಸ್ಲಿಮ್, ಕ್ರೈಸ್ತ, ಸಿಖ್, ಜೈನ, ಬೌದ್ಧ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ನೀಡುತ್ತಿದ್ದ ವಿದ್ಯಾರ್ಥಿವೇತನ, ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳು, ಬಿ.ಇಡಿ, ಡಿ.ಇಡಿ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹದ ಯೋಜನೆಯನ್ನು ಕೈಬಿಡಲಾಯಿತು.

ಅಲ್ಲದೆ, ಐಟಿಐ ತರಬೇತಿ, ಖಾಸಗಿ ವಸತಿ ನಿಲಯಗಳಿಗೆ ನೀಡುತ್ತಿದ್ದ ಅನುದಾನ, ಐಐಎಂ, ಐಐಟಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಟಡಿ ಕಿಟ್, ಸೇನೆಯಲ್ಲಿ ನೇಮಕಾತಿ ಪಡೆಯಲು ನೀಡುತ್ತಿದ್ದ ತರಬೇತಿ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ತರಬೇತಿ ಯೋಜನೆಗಳನ್ನು 2020-21ನೆ ಸಾಲಿನ ಬಜೆಟ್‍ನಲ್ಲಿ ಸರಕಾರ ಕೈ ಬಿಟ್ಟಿತು.

ಅರಿವು ಶೈಕ್ಷಣಿಕ ಸಾಲ ಯೋಜನೆಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 24 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದ್ದು, ಸಿಇಟಿ ಹಾಗೂ ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗಾಗಿ ರಾಜ್ಯ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ 10 ಕೋಟಿ ರೂ.ಗಳನ್ನು ಹಸ್ತಾಂತರಿಸಲಾಗಿದೆ. ಇನ್ನುಳಿದ 14 ಕೋಟಿ ರೂ.ಗಳಲ್ಲಿ 4 ಸಾವಿರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವ ಗುರಿ ಹಾಕಿಕೊಂಡಿದ್ದು, ಈಗಾಗಲೇ ಈ ಪೈಕಿ 13 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2021-22ನೆ ಸಾಲಿನ ಬಜೆಟ್‍ನಲ್ಲಿ ಕೆಎಂಡಿಸಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಕೋರಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

-ಸೈಯ್ಯದಾ ಆಯಿಶಾ, ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕಿ

ಅಲ್ಪಸಂಖ್ಯಾತ ಸಮುದಾಯದವರಷ್ಟೇ ಅಲ್ಲ, ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಜೊತೆಯೂ ಸರಕಾರ ಚೆಲ್ಲಾಟವಾಡುತ್ತಿದೆ. ಕಳೆದ ಅಧಿವೇಶನದ ಸಂದರ್ಭದಲ್ಲೆ ಈ ವಿಚಾರದ ಬಗ್ಗೆ ಗಮನ ಸೆಳೆಯಲು ಬಯಸಿದ್ದೆವು. ಅಧಿವೇಶನ ಮೊಟಕುಗೊಂಡಿದ್ದರಿಂದ ಸಾಧ್ಯವಾಗಿರಲಿಲ್ಲ. ಇದೀಗ ಜ.28ರಿಂದ ಆರಂಭವಾಗುವ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸುತ್ತೇವೆ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಬೇಕೆಂದು ರಾಷ್ಟ್ರೀಯ ಮಟ್ಟದಲ್ಲೆ ಪ್ರಯತ್ನ ನಡೆಯುತ್ತಿವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸತತವಾಗಿ ಕಳೆದ ಆರು ವರ್ಷಗಳಿಂದ ಈ ವರ್ಗದ ಕಲ್ಯಾಣಕ್ಕಾಗಿ ಬಜೆಟ್ ಅನ್ನು ಕಡಿತ ಮಾಡಿಕೊಂಡೆ ಬರುತ್ತಿದೆಯೇ, ಹೊರತು ಹೆಚ್ಚಳ ಮಾಡಿಲ್ಲ.

-ರಿಝ್ವಾನ್ ಅರ್ಶದ್, ಕಾಂಗ್ರೆಸ್ ಶಾಸಕ

ಅಲ್ಪಸಂಖ್ಯಾತರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಏಳಿಗೆಗಾಗಿ ಹಿಂದಿನ ಸರಕಾರಗಳು ಮೀಸಲಿಡುತ್ತಿದ್ದ ಅನುದಾನವನ್ನು ಪ್ರತಿವರ್ಷದ ಆಯವ್ಯಯ ಮಂಡನೆಯಲ್ಲಿ ರಾಜ್ಯ ಬಿಜೆಪಿ ಸರಕಾರ ಅನುದಾನವನ್ನು ಕಡಿತಗೊಳಿಸಿ ಅಲ್ಪಸಂಖ್ಯಾತರ ಮೇಲಿನ ಮಲತಾಯಿ ಧೋರಣೆಯನ್ನು ಸ್ಪಷ್ಟಪಡಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಲಭಿಸುವಿಕೆಗಾಗಿ ವಾರ್ಷಿಕ 10 ರಿಂದ 75 ಸಾವಿರ ರೂ.ವರೆಗೆ ಅರಿವು ಯೋಜನೆಯ ಮೂಲಕ ಸಾಲ ಸೌಲಭ್ಯವನ್ನು ನೀಡಲಾಗುತ್ತಿತ್ತು. ಇದರಿಂದ ಅನೇಕ ಫಲಾನುಭವಿ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸುತ್ತಿದ್ದರು. ಆದರೆ ಈಗ ಸರಕಾರ ಅನುದಾನವನ್ನು ಕಡಿತ ಮಾಡಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕಲಿಕೆಯಿಂದ ವಂಚಿತರಾಗುವ ಆತಂಕ ಎದುರಾಗಿದೆ. ಸರಕಾರ 2021-22ರ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನವನ್ನು ಘೋಷಣೆ ಮಾಡಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸಿದೆ.

share
ಅಮ್ಜದ್ ಖಾನ್ ಎಂ.
ಅಮ್ಜದ್ ಖಾನ್ ಎಂ.
Next Story
X