Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರ ದಿಕ್ಕು ತಪ್ಪಿಸಲು ಸೌಮ್ಯಾರೆಡ್ಡಿ...

ಜನರ ದಿಕ್ಕು ತಪ್ಪಿಸಲು ಸೌಮ್ಯಾರೆಡ್ಡಿ ವಿರುದ್ಧ ಅಪಪ್ರಚಾರ: ಡಾ.ಬಿ.ಪುಷ್ಪಾ ಅಮರನಾಥ್ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Jan 2021 9:49 PM IST
share
ಜನರ ದಿಕ್ಕು ತಪ್ಪಿಸಲು ಸೌಮ್ಯಾರೆಡ್ಡಿ ವಿರುದ್ಧ ಅಪಪ್ರಚಾರ: ಡಾ.ಬಿ.ಪುಷ್ಪಾ ಅಮರನಾಥ್ ಆರೋಪ

ಬೆಂಗಳೂರು, ಜ.24: ರೈತ ಧ್ವನಿ ಬೃಹತ್ ಪ್ರತಿಭಟನೆಯಿಂದ ಕಂಗಾಲಾಗಿರುವ ರಾಜ್ಯ ಸರಕಾರ, ಜನರ ಆಕ್ರೋಶದ ದಿಕ್ಕು ತಪ್ಪಿಸಲು ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಕಿಡಿಗಾರಿದ್ದಾರೆ.

ದೇಶದ ಮತ್ತು ರಾಜ್ಯದ ರೈತರು ಮೂರು ಕೃಷಿ ಕಾಯ್ದೆಗಳ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಅಭೂತಪೂರ್ವ ಹೋರಾಟದಿಂದ ಗೊಂದಲಕ್ಕೆ ಸಿಲುಕಿ, ವಿಚಲಿತರಾಗಿರುವ ಮುಖ್ಯಮಂತ್ರಿ ತಮ್ಮ ಕೈ ಗೊಂಬೆಗಳಾಗಿರುವ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಪ್ರತಿಭಟನೆಯ ಯಶಸ್ಸನ್ನು ದಿಕ್ಕು ತಪ್ಪಿಸಲು ಈ ರೀತಿಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಪ್ರತಿಭಟನೆಗಳಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವುದು ಕಾನೂನಾತ್ಮಕವಾದ ಸಾಮಾನ್ಯ ಪ್ರಕ್ರಿಯೆ. ಬಿಜೆಪಿ ಸರಕಾರದ ಅನೇಕ ಜನ ಶಾಸಕರು, ಮಂತ್ರಿಗಳು ಇದೇ ರೀತಿ ಪ್ರತಿಭಟನೆಗಳನ್ನು ಮಾಡಿ ಅಭ್ಯಾಸ ಇರುವವರೇ. ಬಿಜೆಪಿ ಪಕ್ಷದ ಸಂಸದ ಪ್ರತಾಪ್ ಸಿಂಹ ಪೊಲೀಸ್ ನಾಕಾ ಬಂಧಿಯನ್ನು ಕಾಲಿನಲ್ಲಿ ಒದ್ದು ಪೊಲೀಸರ ಮೇಲೆ ವಾಹನವನ್ನು ಹತ್ತಿಸಿಕೊಂಡು ಹೋದ ಪ್ರಕರಣ ನಮ್ಮ ಕಣ್ಣ ಮುಂದಿದೆ ಎಂದು ಪುಷ್ಪಾ ಅಮರನಾಥ್ ನೆನಪಿಸಿದ್ದಾರೆ.

ಸಚಿವ ಜೆ.ಸಿ.ಮಾಧುಸ್ವಾಮಿ ಸರಕಾರಿ ಅಧಿಕಾರಿಗಳಿಗೆ ಕಪಾಳಕ್ಕೆ ಬಾರಿಸುವುದಾಗಿ ಹೇಳಿರುವುದು ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಬಿಜೆಪಿಯ ಮಂತ್ರಿಗಳು, ಶಾಸಕರು ಸ್ವತಃ ತಾವೇ ಕಾನೂನು ಉಲ್ಲಂಘನೆ ಮಾಡುವುದರಲ್ಲಿ ನಿಸ್ಸೀಮರಾಗಿದ್ದು, ತಮ್ಮ ಅನುಭವವವನ್ನು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಆರೋಪಿಸುವ ನೀಜ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಸಾಹಿತಿ ಹಂಪ ನಾಗರಾಜ್ ಅವರ ಮೇಲೆ ಯಾರೋ ಒಬ್ಬ ಮೂರನೇ ದರ್ಜೆ ವ್ಯಕ್ತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಕರೆಸಿಕೊಂಡಿರುವುದು ನಾಡಿನ ಸಾರಸ್ವತ ಲೋಕಕ್ಕೆ ಮಾಡಿರುವ ಅವಮಾನ. ಯಡಿಯೂರಪ್ಪ ಸರಕಾರ ಅಧಿಕಾರಿಗಳ ಮೇಲೆ, ಆಡಳಿತ ಯಂತ್ರದ ಮೇಲೆ ನಿಯಂತ್ರಣ ಹೊಂದಿಲ್ಲದೆ, ಜನರ ಧ್ವನಿಯನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಿಕೊಳ್ಳುತ್ತಿದೆ ಎಂದು ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ.

ಯಡಿಯೂರಪ್ಪ ಸರಕಾರ ರಾಜ್ಯವನ್ನು ಗೂಂಡಾಗಿರಿ ಮತ್ತು ಪೊಲೀಸ್ ಅಧಿಕಾರಿಗಳ ಮೂಲಕ ಹಿಡಿತದಲ್ಲಿಟ್ಟುಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿರುವುದನ್ನು ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ. ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ದಾಖಲಾಗಿರುವ ಪ್ರಕರಣ ಕಾನೂನಿನ ಮುಂದೆ ನ್ಯಾಯಾಲಯದಲ್ಲಿ ನಿಸ್ಸಂಶಯವಾಗಿ, ನಿರಪರಾಧಿಯಾಗಿ ಹೊರ ಬರುತ್ತಾರೆ. ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದ ದುರಾಡಳಿತಕ್ಕೆ ರಾಜ್ಯದ ಜನತೆ, ರೈತರು, ಕಾರ್ಮಿಕರು, ಮಹಿಳೆಯರು ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X