Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂಢನಂಬಿಕೆಗೆ ಬಲಿ ಬಿದ್ದು ಪುತ್ರಿಯರನ್ನೇ...

ಮೂಢನಂಬಿಕೆಗೆ ಬಲಿ ಬಿದ್ದು ಪುತ್ರಿಯರನ್ನೇ ಹೊಡೆದು ಸಾಯಿಸಿದ ಹೆತ್ತವರು

ಹೆತ್ತವರಿಂದಲೇ ದುರಂತ ಅಂತ್ಯ ಕಂಡ ಮಕ್ಕಳು

ವಾರ್ತಾಭಾರತಿವಾರ್ತಾಭಾರತಿ25 Jan 2021 12:11 PM IST
share
ಮೂಢನಂಬಿಕೆಗೆ ಬಲಿ ಬಿದ್ದು ಪುತ್ರಿಯರನ್ನೇ ಹೊಡೆದು ಸಾಯಿಸಿದ ಹೆತ್ತವರು

ಚಿತ್ತೂರ್,ಜ.25: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲೆ ಎಂಬಲ್ಲಿನ ಶಿವನಗರ್ ಪ್ರದೇಶದ ನಿವಾಸಿಗಳಾಗಿರುವ ದಂಪತಿ ಮೂಢನಂಬಿಕೆಗೆ ಬಲಿ ಬಿದ್ದು ರವಿವಾರ ತಡ ರಾತ್ರಿ ತಮ್ಮ ಇಬ್ಬರು ಯುವ ಪುತ್ರಿಯರನ್ನು  ಹೊಡೆದು ಸಾಯಿಸಿದ್ದಾರೆ.

ಆರೋಪಿ ದಂಪತಿಯನ್ನು ಪದ್ಮಜಾ ಹಾಗೂ ಪುರುಷೋತ್ತಮ್ ನಾಯ್ಡು ಎಂದು ಗುರುತಿಸಲಾಗಿದೆ. ಪದ್ಮಜಾ  ಖಾಸಗಿ ಶಾಲೆಯೊಂದರ ಸಂಚಾಲಕಿಯಾಗಿದ್ದರೆ, ನಾಯ್ಡು ನಗರದ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲನಾಗಿದ್ದಾನೆ.

ಹೆತ್ತವರ ಕೈಯ್ಯಲ್ಲಿಯೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯ (27) ಹಾಗೂ ಸಾಯಿ ದಿವ್ಯಾ (22) ಎಂದು ಗುರುತಿಸಲಾಗಿದೆ. ಅವರನ್ನು ಡಂಬೆಲ್ ಬಳಸಿ ಸಾಯಿಸಲಾಗಿದೆ ಎಂದು ಶಂಕಿಸಲಾಗಿದೆ. ಅಲೇಖ್ಯಾ ಭೋಪಾಲದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿದ್ದರೆ ಸಾಯಿ ದಿವ್ಯಾ ಬಿಬಿಎ ಮುಗಿಸಿ ಮುಂಬೈಯ ಎ.ಆರ್ ರೆಹಮಾನ್ ಮ್ಯೂಸಿಕ್ ಸ್ಕೂಲ್‍ನಲ್ಲಿ ಶಿಕ್ಷಣ ಪಡೆಯುತ್ತಿದ್ದಳು. ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ನಂತರ ಇಬ್ಬರು ಯುವತಿಯರೂ ಮನೆಯಲ್ಲಿಯೇ ಇದ್ದರು.

ಈ ಕುಟುಂಬ ಸಾಂಕ್ರಾಮಿಕ ಸಂದರ್ಭ ವಿಚಿತ್ರವಾಗಿ ವರ್ತಿಸುತ್ತಿತ್ತು ಹಾಗೂ ಸದಸ್ಯರು ಹೆಚ್ಚಾಗಿ ಮನೆಯೊಳಗಡೆಯೇ ಇದ್ದರು ಎಂದು ಪೊಲೀಸರು ಹೇಳಿದ್ದಾರೆ. ಅವರ ಮನೆಯಿಂದ ವಿಚಿತ್ರ ಸದ್ದು ಕೇಳುತ್ತಿದ್ದುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಆರಂಭದಲ್ಲಿ ಪೊಲೀಸರಿಗೆ ಮನೆಯೊಳಗೆ ಪ್ರವೇಶಿಸಲು ದಂಪತಿ ಅನುಮತಿಸಿರಲಿಲ್ಲ. ಆದರೆ ನಂತರ ಮನೆ ಪ್ರವೇಶಿಸಿದ ಪೊಲೀಸರಿಗೆ ಒಬ್ಬಳು ಯುವತಿ ದೇವರ ಕೋಣೆಯಲ್ಲಿ ಶವವಾಗಿ ಬಿದಿದ್ದು ಕಂಡರೆ ಇನ್ನೊಬ್ಬಳ ಮೃತದೇಹ ಇನ್ನೊಂದು ಕೊಠಡಿಯಲ್ಲಿ ಕಂಡು ಬಂದಿತ್ತು. ಆಕೆಯ ದೇಹವನ್ನು  ಕೆಂಪು ಬಟ್ಟೆಯಿಂದ ಮುಚ್ಚಲಾಗಿತ್ತಲ್ಲದೆ ಹತ್ತಿರದಲ್ಲಿ ಪೂಜಾ ಸಾಮಗ್ರಿ ಇರಿಸಲಾಗಿತ್ತು.

ತಮ್ಮ ಪುತ್ರಿಯರು ಮತ್ತೆ ಜೀವಂತವಾಗುತ್ತಾರೆ ಎಂದು ಈ ದಂಪತಿ ನಂಬಿದ್ದರೆಂದು ಪೊಲೀಸರು ತಿಳಿಸಿದ್ದಾರೆ.  ಕಲಿಯುಗ ಇಂದು ರಾತ್ರಿ ಕೊನೆಗೊಳ್ಳುವುದರಿಂದ ಪುತ್ರಿಯರನ್ನು ಬಲಿ ನೀಡುವಂತೆ ದೈವೀ ಸಂದೇಶ ಬಂದಿತ್ತು. ನಾಳೆ ಸತ್ಯ ಯುಗ ಆರಂಭಗೊಳ್ಳಲಿರುವುದರಿಂದ ಅವರು ಬದುಕಿ ಬರುತ್ತಾರೆ ಎಂದು  ಅವರು ಹೇಳಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಯನ್ನು ಬಂಧಿಸಲಾಗಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X