Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ತಾಲ್ಲೂಕು ಮಟ್ಟದ ಗಣರಾಜ್ಯೋತ್ಸವ

ಕಾಪು ತಾಲ್ಲೂಕು ಮಟ್ಟದ ಗಣರಾಜ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Jan 2021 5:02 PM IST
share
ಕಾಪು ತಾಲ್ಲೂಕು ಮಟ್ಟದ ಗಣರಾಜ್ಯೋತ್ಸವ

ಕಾಪು: ಮೂರು ವರ್ಷಗಳ ಹಿಂದೆ ರಚನೆಯಾದ ಕಾಪು ತಾಲ್ಲೂಕು ಭೂಮಿ ಮತ್ತು ಕಂದಾಯ ಸೇರಿದಂತೆ ಕಂದಾಯ, ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲಿ ಎಲ್ಲಾ ರೀತಿಯಲ್ಲಿಯೂ ಮುಂಚೂಣಿಯಲ್ಲಿದೆ ಎಂದು ಕಾಪು ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್  ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾಪು ತಾಲೂಕು ಆಡಳಿತದಿಂದ ಕಾಪು ಬಂಗ್ಲೆ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 72ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.

ಪ್ರಾಕೃತಿಕ ವಿಕೋಪ, ಕರೋನ ಹಗೂ ಸಾಮಾಜಿಕ ಪಿಡುಗುಗಳನ್ನು ಯಾವುದೇ ರೀತಿಯಲ್ಲೂ ಎದುರಿಸಲು ಪಣತೊಟ್ಟಿದ್ದೇವೆ. 3 ವರ್ಷಗಳ ಹಿಂದೆಯಷ್ಟೇ ರಚನೆಯಾಗಿರುವ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದೇವೆ. ಪ್ರಾಕೃತಿಕ ವಿಕೊಪ ನಿಧಿಯಿಂದ 64,38,045 ರೂ. ಪರಿಹಾರ ನೀಡಲಾಗಿದೆ.

ನಾವಿಂದು ಸ್ವತಂತ್ರ ಹಾಗೂ ಶಿಸ್ತಿನಿಂದ ಕೂರಲು ಸಂವಿಧಾನ ಕಾರಣ. ಸ್ವತಂತ್ರವಾಗಿ ಜೀವಿಸಲು, ಶಿಕ್ಷಣ, ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಅನುಸರಿಸಿಕೊಂಡು ಹೋಗಲು ಸಂವಿಧಾನವನ್ನು ಜಾರಿಗೆ ತಂದ ಎಲ್ಲರಿಗೂ ತಲೆಬಾಗಿಸಿ ನಮಿಸಿವುದು ನಮ್ಮೆಲ್ಲರ ಅದ್ಯ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಲಾಲಾಜಿ ಆರ್ ಮೆಂಡನ್  ಮಾತನಾಡಿ, ಕಾಪು ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಾದ ಹೆಜಮಾಡಿ ಬಂದರು ಹಾಗೂ ಮಿನಿ ವಿಧಾನಸೌಧಕ್ಕೆ ತಿಂಗಳೊಳಗೆ ಶಿಲಾನ್ಯಾಸ ಮಾಡಲಾಗಿದೆ. ಕಾಪುವಿನಲ್ಲಿ ನಿರ್ಮಾಣ ವಾಗಲಿರುವ ಸುಸಜ್ಜಿತ ಮಾರುಕಟ್ಟೆಗೆ ಮಾರ್ಚ್ ತಿಂಗಳೊಳಗೆ ಶಿಲಾನ್ಯಾಸ ನೆರವೇರಿಸಲಾಗುವುದು. ಪುರಸಭೆ ವ್ಯಾಪ್ತಿಗೆ ನೀರು ಪೂರೈಸುವ ಯೋಜನೆ ಟೆಂಡರ್ ಹಂತದಲ್ಲಿದ್ದು, ಶೀಘ್ರ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾಪು ಪೊಲೀಸ್ ಠಾಣೆ ಅಪರಾಧ ವಿಭಾಗದ ಎಸ್‍ಐ ಐ.ಆರ್. ಗಡ್ಡೇಕರ್ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್‍ಗಳನ್ನು ವಿತರಿಸಲಾಯಿತು. ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪೊಲಿಪು ಜ್ಯೂನಿಯರ್ ಕಾಲೇಜು, ದಂಡತೀರ್ಥ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ರಾಷ್ಟ್ರ ಗೀತೆ, ವಂದೇ ಮಾತರಂ, ಧ್ವಜ ಗೀತೆ, ನಾಡ ಗೀತೆಯನ್ನು ಹಾಡಿದರು.

ಜಿ.ಪಂ. ಸದಸ್ಯರಾದ ಗೀತಾಂಜಲಿ ಎಂ ಸುವರ್ಣ, ಶಿಲ್ಪಾ ಜಿ. ಸುವರ್ಣ, ಶಶಿಕಾಂತ್ ಪಡುಬಿದ್ರಿ, ಕಾಪು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಸದಸ್ಯೆ ನೀತಾ ಗುರುರಾಜ್, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷೆ ಮಾಲಿನಿ, ಸದಸ್ಯರಾದ ಶಾಂಭವಿ ಕುಲಾಲ್, ರಮಾ ವೈ. ಶೆಟ್ಟಿ, ಸುಧಾ ರಮೇಶ್, ವಿಜಯಲಕ್ಷ್ಮಿ ಕೋಟ್ಯಾನ್, ಮಮತಾ ಸುವರ್ಣ, ನವೀನ್ ಅಮೀನ್ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್ ಮೊದಲಾದವರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಸ್ವಾಗತಿಸಿದರು. ಉಪನ್ಯಾಸಕ ನಾಗರಾಜ್ ಜಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವಡ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X