ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಶಿರ್ವ, ಜ. 26: ಅನಾರೋಗ್ಯದಿಂದ ಬಳಲುತ್ತಿದ್ದ ಶಿರ್ವ ಗ್ರಾಮದ ಮಟ್ಟಾರು ರವಿ ಪೂಜಾರಿ ಎಂಬವರ ಪತ್ನಿ ಲತಾ ಪೂಜಾರ್ತಿ(42) ಎಂಬವರು ಮಾನಸಿಕವಾಗಿ ನೊಂದು ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊಡವೂರು ಗ್ರಾಮದ ಮೂಡಬೆಟ್ಟು ನಿವಾಸಿ ರಾಜೀವ ಜತ್ತನ್ ಎಂಬವರ ಮಗ ವಿಶ್ವಾಸ್ ಎಂಬವರು ಜ.25 ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story