Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ನದಾತರಿಗೆ ಬೇಡವಾದ ಕೃಷಿ ಮಸೂದೆಗಳನ್ನು...

ಅನ್ನದಾತರಿಗೆ ಬೇಡವಾದ ಕೃಷಿ ಮಸೂದೆಗಳನ್ನು ಕೇಂದ್ರ ಸರಕಾರ ಹಿಂಪಡೆಯಲಿ: ಕೆ.ಎಂ.ಅಬೂಬಕರ್ ಸಿದ್ದಿಕ್

ರೈತ ಹೋರಾಟ ಬೆಂಬಲಿಸಿ ಚಿಕ್ಕಮಗಳೂರಿನಲ್ಲಿ 'ಫ್ಲ್ಯಾಗ್ ಮಾರ್ಚ್'

ವಾರ್ತಾಭಾರತಿವಾರ್ತಾಭಾರತಿ26 Jan 2021 11:03 PM IST
share
ಅನ್ನದಾತರಿಗೆ ಬೇಡವಾದ ಕೃಷಿ ಮಸೂದೆಗಳನ್ನು ಕೇಂದ್ರ ಸರಕಾರ ಹಿಂಪಡೆಯಲಿ: ಕೆ.ಎಂ.ಅಬೂಬಕರ್ ಸಿದ್ದಿಕ್

ಚಿಕ್ಕಮಗಳೂರು, ಜ.26: ಭಾರತವು ಕೃಷಿ ಪ್ರಧಾನ ದೇಶವಾಗಿರುವುದರಿಂದ ಬಹುಸಂಖ್ಯಾತರು ರೈತರೇ ಆಗಿದ್ದಾರೆ. ಇಲ್ಲಿನ ಪ್ರಜಾಪ್ರಭುತ್ವವು ಬಹುತೇಕ ರೈತ ಪ್ರಭುತ್ವವೇ ಆಗಿದೆ. ಇಂತಹ ರೈತ ಪ್ರಭುಗಳು ತಮ್ಮ ಹಿತರಕ್ಷಣೆಗಾಗಿ ಬೀದಿಗೆ ಬೀಳಬೇಕಾಗಿ ಬಂದಿರುವುದು ಅತ್ಯಂತ ದುರದೃಷ್ಟಕರ ಎಂದು ಸುನ್ನೀ ಯುವಜನ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಅಬೂಬಕರ್ ಸಿದ್ದಿಕ್ ಮೊಂಟುಗೋಳಿ ಹೇಳಿದರು.

ಎಸ್‍ವೈಎಸ್ ಸಂಘಟನೆಯ ಜಿಲ್ಲಾ ಸಮಿತಿಯು ಗಣರಾಜ್ಯೋತ್ಸವ ದಿನದಂದು ರೈತ ಹೋರಾಟಗಾರರ ಬೆಂಬಲಾರ್ಥ ನಡೆಸಿದ 'ಫ್ಲ್ಯಾಗ್ ಮಾರ್ಚ್' ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಸಮೃದ್ಧವಾಗಿ ಬೆಳೆದರೆ ಮಾತ್ರ ದೇಶದಲ್ಲಿ ಸುಭಿಕ್ಷೆ ನೆಲೆಸುತ್ತದೆ. ಹೊಲಗಳಲ್ಲಿ ದುಡಿಯಬೇಕಾದ ಕೃಷಿಕರು ಹೋರಾಟದ ಬೀದಿಗಿಳಿದರೆ ದೇಶದ ಜನ ಅನ್ನ ತಿನ್ನಲು ಸಾಧ್ಯವಿಲ್ಲ. ದಿಲ್ಲಿಯಲ್ಲಿ ಪ್ರತಿಕೂಲ ವಾತಾವರಣವನ್ನೂ ಲೆಕ್ಕಿಸದೆ ಹೋರಾಟ ನಿರತರಾಗಿರುವ ರೈತರ ಜೊತೆ ಹತ್ತು ಸುತ್ತಿನ ಮಾತುಕತೆ ನಡೆಸಿದರೂ ಸಮಸ್ಯೆಯನ್ನು ಪರಿಹರಿಸಲು ಸರಕಾರಕ್ಕೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದರು. 

ಅನ್ನದಾತರಿಗೆ ಅಗತ್ಯವಿಲ್ಲದ ಮಸೂದೆಯನ್ನು ಯಾರ ಹಿತಕ್ಕಾಗಿ ಜಾರಿಗೊಳಿಸಬೇಕು. ಇನ್ನಾದರೂ ಪ್ರತಿಷ್ಠೆಯನ್ನು ಬದಿಗಿಟ್ಟು ವಿವಾದಾತ್ಮಕ ಮಸೂದೆಯನ್ನು ಹಿಂಪಡೆಯುವ ಮೂಲಕ ರೈತರ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲು ಸರಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಇದಕ್ಕೂ ಮುನ್ನ 72 ರಾಷ್ಟ್ರಧ್ವಜಗಳೊಂದಿಗೆ ತಾಲೂಕು ಕಚೇರಿಯಿಂದ ಆಜಾದ್ ವೃತ್ತದವರೆಗೆ ಸಂಘಟನೆಯ ಸದಸ್ಯರು ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಬೂಬಕರ್, ರಾಜ್ಯ ಕಾರ್ಯದರ್ಶಿ ಸಯ್ಯದ್ ತಂಙಲ್, ಜಿಲ್ಲಾ ಸಂಯುಕ್ತ ಜಮಾತ್ ಅಧ್ಯಕ್ಷ ಯೂಸುಫ್ ಹಾಜಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಫ್ವಾನ್ ಸಖಾಫಿ ಶಾಂತಿಪುರ, ಮುನೀರ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X