Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಗಣಿಗಾರಿಕೆ ಸಕ್ರಮಗೊಳಿಸಲು...

ಅಕ್ರಮ ಗಣಿಗಾರಿಕೆ ಸಕ್ರಮಗೊಳಿಸಲು ಕಾಯ್ದೆಗೆ ತಿದ್ದುಪಡಿ: ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ26 Jan 2021 11:14 PM IST
share
ಅಕ್ರಮ ಗಣಿಗಾರಿಕೆ ಸಕ್ರಮಗೊಳಿಸಲು ಕಾಯ್ದೆಗೆ ತಿದ್ದುಪಡಿ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಜ.26: ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಿ ರಾಜ್ಯದಲ್ಲಿ ಹೊಸದಾಗಿ ಗಣಿ ಕಾಯ್ದೆ ಜಾರಿ ಮಾಡುವ ಸಂಬಂಧ ಜ.27 ಮತ್ತು 28ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ಅಧಿಕೃತ ಮಾಡಲು ಹೊಸ ನಿಯಮ ಜಾರಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಕರ್ನಾಟಕದಲ್ಲಿ ಮಾತ್ರ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿಲ್ಲ. ದೇಶಾದ್ಯಂತ ಇದು ನಡೆಯುತ್ತಿದೆ. ಇದನ್ನು ಯಾವ ರೀತಿ ತಡೆಗಟ್ಟಬೇಕು ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅಭಿಪ್ರಾಯವನ್ನು ಪಡೆಯಲಿದ್ದೇವೆ ಎಂದು ತಿಳಿಸಿದ್ದಾರೆ.

ದೇಶದ ಇತರೆ ರಾಜ್ಯಗಳಲ್ಲಿ ಯಾವ ರೀತಿ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಕಾಯ್ದೆಯನ್ನು ಜಾರಿ ಮಾಡಿದ್ದಾರೆ ಎಂಬುದರ ಬಗ್ಗೆಯೂ ನಾವು ಅಧ್ಯಯನ ನಡೆಸುತ್ತಿದ್ದೇವೆ. ಗಣಿಗಾರಿಕೆ ಮಾಡುವುದು ತಪ್ಪಲ್ಲ. ಆದರೆ, ಅಕ್ರಮವಾಗಿ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ. ಅಭಿವೃದ್ದಿಗಾಗಿ ಗಣಿಗಾರಿಕೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದ ಹಾಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್ ರ್ಯಾಲಿ ವಿರೋಧ ಪಕ್ಷಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ. ವಿರೋಧ ಪಕ್ಷದವರು ರೈತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರೈತರು ಟ್ರ್ಯಾಕ್ಟರ್ ರ್‍ಯಾಲಿ ರಾಜಕೀಯ ದುರದ್ದೇಶದಿಂದ ಕೂಡಿದೆ. ಇದರಲ್ಲಿ ನಿಜವಾದ ಕಳಕಳಿ ಇಲ್ಲ. ರ್‍ಯಾಲಿ ಮುಗಿದ ಬಳಿಕ ಇದರ ಹಿಂದೆ ಯಾರಿದ್ದಾರೆ. ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು ಎಂಬುದು ಗೊತ್ತಾಗಲಿದೆ. ಕೆಲವರು ತಮ್ಮ ರಾಜಕೀಯಕ್ಕಾಗಿ ರೈತರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಖಾತೆ ವಿಚಾರದಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ. ನಮ್ಮಲ್ಲಿ ಇರುವ ಸಚಿವರು ಬಿಟ್ಟ ಖಾತೆಯನ್ನು ನಾನು ತೆಗೆದುಕೊಳ್ಳಲು ಸಿದ್ಧನಿದ್ದೇನೆ. ಇದರಲ್ಲಿ ಯಾವುದೇ ಬೇಸರವಿಲ್ಲ.

-ಮುರುಗೇಶ್ ನಿರಾಣಿ, ಗಣಿಗಾರಿಕೆ ಮತ್ತು ಭೂವಿಜ್ಞಾನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X