ಸಂವಿಧಾನದ ಪೀಠಿಕೆ ಹಂಚಿ ದಸಂಸ ಗಣರಾಜ್ಯೋತ್ಸವ ಆಚರಣೆ
ಬೆಂಗಳೂರು, ಜ.26: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ವಿಧಾನಸೌಧದ ಮುಂಭಾಗ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ. ಈ ನಿಟ್ಟಿನಲ್ಲಿ ಜನರಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್-ಮಾಸ್ಕ್‍ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ದಸಂಸ ಮುಖಂಡ ರಘು ತಿಳಿಸಿದ್ದಾರೆ.
Next Story





