Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೀನಾದಂತೆ ಮಾತನಾಡುವುದನ್ನು ಮಹಾರಾಷ್ಟ್ರ...

ಚೀನಾದಂತೆ ಮಾತನಾಡುವುದನ್ನು ಮಹಾರಾಷ್ಟ್ರ ಬಿಡಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 Jan 2021 8:12 PM IST
share
ಚೀನಾದಂತೆ ಮಾತನಾಡುವುದನ್ನು ಮಹಾರಾಷ್ಟ್ರ ಬಿಡಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜ. 27: ‘ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು' ಎಂದು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಹೇಳಿದ್ದಾರೆ. ನಾವು ಬೆಳಗಾವಿಯನ್ನು 2ನೆ ರಾಜಧಾನಿಯಾಗಿ ಮಾಡಿ, ವಿಧಾನಸೌಧ ನಿರ್ಮಿಸಿ, ಅಧಿವೇಶನ ನಡೆಸಿರುವುದನ್ನು ತಪ್ಪು ಎಂದೂ ಹೇಳಿದ್ದಾರೆ. ಠಾಕ್ರೆ ಅವರೇ ಬೆಳಗಾವಿ ಮರಾಠಿಗರದ್ದಲ್ಲ, ವೀರ ಕನ್ನಡಿಗರದ್ದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಪಕ್ಷ ಬೆಳಗಾವಿ ವಿಚಾರದಲ್ಲಿ ಸಲ್ಲದ ಕಿತಾಪತಿ ಮಾಡುತ್ತವೆ ಎಂಬುದನ್ನು ಅರಿತೇ ನನ್ನ ಸರಕಾರದ ಅವಧಿಯಲ್ಲಿ ಅಲ್ಲಿ ವಿಧಾನಸೌಧ ನಿರ್ಮಿಸಲಾಯಿತು. ಅಧಿವೇಶನವನ್ನೂ ನಡೆಸಲಾಯಿತು. ಬೆಳಗಾವಿಯ ಸುವರ್ಣಸೌಧ ಮಹಾರಾಷ್ಟ್ರದ ವಿಸ್ತರಣಾವಾದವನ್ನು ವಿರೋಧಿಸಿ ನಿಂತಿರುವ, ಕನ್ನಡಿಗರ ಸ್ವಾಭಿಮಾನಿ ಸೌಧ' ಎಂದು ಹೇಳಿದ್ದಾರೆ.

‘ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನು ಒಪ್ಪದ ಮಹಾರಾಷ್ಟ್ರ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿರುವ ಪ್ರಕರಣವೊಂದರ ಬಗ್ಗೆ ಇಲ್ಲ ಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ ಠಾಕ್ರೆ, ವಿಚಾರಣೆಯ ದಿಕ್ಕನ್ನೇ ತಪ್ಪಿಸುವ ಹುನ್ನಾರ ಮಾಡುತ್ತಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.

‘ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು. ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದಾರೆ. ಅವರ ಮನಸ್ಸುಗಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಬಾರದು. ಗಡಿ ಎಂದ ಮೇಲೆ ಅದು ಎರಡು ಭಾಷೆ, ಎರಡೂ ರಾಜ್ಯಗಳ ಜನರ ಸಂಗಮ. ಅದರಲ್ಲಿ ನಮ್ಮವರೇ ಹೆಚ್ಚು, ನಾವೇ ಶಕ್ತಿವಂತರು ಎಂಬ ವಾದ ಸರಿಯಲ್ಲ' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್ ಪಕ್ಷ ಗಡಿ ವಿಚಾರದಲ್ಲಿ ಉದ್ಧವ ಠಾಕ್ರೆಗೆ ಬುದ್ಧಿ ಹೇಳಬೇಕು. ರಾಜ್ಯ ಕಾಂಗ್ರೆಸ್ ನಾಯಕರು ಬಾಯಿ ಉಪಚಾರಕ್ಕೆ ಠಾಕ್ರೆ ಮಾತುಗಳನ್ನು ಖಂಡಿಸಿದರೆ ಸಾಲದು. ಬದಲಿಗೆ ಬೆಳಗಾವಿ ನಮ್ಮದೇ ಎಂಬುದನ್ನು ಮನದಟ್ಟು ಮಾಡಬೇಕು. ಬೆಳಗಾವಿ ಬಗೆಗೆ ಠಾಕ್ರೆಗೆ ಇರುವ ಭ್ರಮೆಗೆ ಚಿಕಿತ್ಸೆ ಕೊಡಿಸಬೇಕು' ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

‘ಇನ್ನೊಂದು ವಿಷಯ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ ಎಂದಾಗ ಠಾಕ್ರೆಗೆ ಒಂದು ಸಲಹೆ ನೀಡಿದ್ದೆ. ಕರ್ನಾಟಕ-ಮಹಾರಾಷ್ಟ್ರದ ಇತಿಹಾಸ ಓದಬೇಕೆಂಬುದು ಆ ಸಲಹೆ ಆಗಿತ್ತು. ಚರಿತ್ರೆ ಓದಿದ್ದರೆ ಮಹಾರಾಷ್ಟ್ರವು ಕನ್ನಡರಸರಿಂದ ಆಳಿಸಿಕೊಂಡ ನಾಡು ಎಂಬುದು ಅವರಿಗೂ ತಿಳಿಯುತ್ತಿತ್ತು. ಅವರು ಓದಿದಂತೆ ಕಾಣುತ್ತಿಲ್ಲ. ಚರಿತ್ರೆ ಓದಿ' ಎಂದು ಅವರು ಸಲಹೆ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X