Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ಗೆ...

‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ಗೆ ಬ್ರಹ್ಮಾವರದಲ್ಲಿ ಪೈಲೆಟ್ ಕಾರ್ಯಕ್ರಮ

ಜ.30ರಂದು ನೆಂಚಾರು, ನಾಲ್ಕೂರು ಗ್ರಾಮಗಳಲ್ಲಿ ಡಿಸಿ ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ27 Jan 2021 8:41 PM IST
share
‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ಗೆ ಬ್ರಹ್ಮಾವರದಲ್ಲಿ ಪೈಲೆಟ್ ಕಾರ್ಯಕ್ರಮ

ಉಡುಪಿ, ಜ.27: ಕಂದಾಯ ಇಲಾಖೆಯಲ್ಲಿರುವ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಕಂದಾಯ ಇಲಾಖೆಯ ನೂತನ ಕಾರ್ಯಕ್ರಮ ‘ಜಿಲ್ಲಾದಿಕಾರಿಗಳ ನಡೆ ಗ್ರಾಮದ ಕಡೆ’ಯ ಪೈಲಟ್ ಯೋಜನೆಗೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೆಂಚಾರು ಹಾಗೂ ನಾಲ್ಕೂರು ಗ್ರಾಮಗಳಲ್ಲಿ ಜ.30ರಂದು ಚಾಲನೆ ನೀಡಲಾಗುವುದು.

ಜ.30ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗ ಳೊಂದಿಗೆ ಭೇಟಿ ನೀಡಿ, ಅಲ್ಲೇವಾಸ್ತವ್ಯ ಮಾಡಿ, ಆ ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳ ದಲ್ಲೇ ಪರಿಹಾರ ಒದಗಿಸಲಿದ್ದಾರೆ.ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಅಪರ ಜ್ಲಿಾಧಿಕಾರಿ ಸದಾಶಿವ ಪ್ರಭು ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತುಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜ.30ರಂದು ಗ್ರಾಮ ವಾಸ್ತವ್ಯ ನಡೆಯುವ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳ ಸಾರ್ವಜನಿಕರ ಕುಂದುಕೊರತೆಗಳ ಕುರಿ ತಂತೆ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು ಮೂರು ದಿನ ಮುಂಚಿತವಾಗಿಯೇ ಅರ್ಜಿಗಳನ್ನು ಸ್ವೀಕರಿಸಿ,ಅಗತ್ಯ ಕ್ರಮ ಕೈಗೊಳ್ಳಿ. ಗ್ರಾಮ ವಾಸ್ತವ್ಯದ ದಿನ ಫಲಾನುಭವಿಗಳಿಗೆ ಅರ್ಜಿಗೆ ಸಂಬಂಧಿಸಿದಂತೆ ಸೂಕ್ತ ಸೌಲಭ್ಯ ಒದಗಿಸುವ ಕುರಿತು ಕ್ರಮ ಕೈಗೊಳ್ಳಿ. ಸಂಬಂಧ ಪಟ್ಟ ತಾಲೂಕಿನ ತಹಶೀಲ್ದಾರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿ ಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಗ್ರಾಮಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಗ್ರಾಮದಲ್ಲಿರುವ ಎಲ್ಲಾ ಪಹಣಿಯ ಲೋಪದೋಷಗಳು ಮತ್ತು ಆಕಾರ್ ಬಂದ್ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು ನೈಜ ವಾರಿಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ, ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಲಾಗುವುದು ಎಂದರು.

ಗ್ರಾಮದಲ್ಲಿ ಸ್ಮಶಾನ ಲ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಜಮೀನು ಕಾದಿರಿಸಲು ಕ್ರಮ ಕೈಗೊಳ್ಳುವುದು, ಸರಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವು, ಆಧಾರ್ ಕಾರ್ಡ್ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ/ಅನಾವೃಷ್ಠಿ ಎದುರಿಸಲು ಮುಂಜಾಗ್ರತಾ ಕ್ರಮಗಳು, ಬರ/ಪ್ರವಾಹ ಇದ್ದಲ್ಲಿ ಪರಿಹಾರ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ, ಆಹಾರ, ಕಲಿಕಾ ಕ್ರಮಗಳ ಬಗ್ಗೆ ಪರಿಶೀಲನೆ, ಗ್ರಾಮದ ವಸತಿ ನಿಲಯಗಳಿಗೆ ಭೇಟಿ ನೀಡಿ ಅವು ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲನೆ, ಗ್ರಾಮದ ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಕ್ಕಿರುವ ಬಗ್ಗೆ ಖಾತ್ರಿ ಪಡಿಸಿ ಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವುದು, ಗುಡಿಸಲು ಇರುವ ವಾಸದ ಮನೆಗಳನ್ನು ಪತ್ತೆ ಹಚ್ಚಿ ಸರಕಾರದ ವಿವಿಧ ಯೋಜನೆಯಡಿ ಮನೆ ಕಟ್ಟಲು ಅನುದಾನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದು ಹಾಗೂ ಸರಕಾರದಿಂದ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸದಾಶಿವ ಪ್ರಭು ತಿಳಿಸಿದರು.

ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸಂಬಂದಪಟ್ಟ ಗ್ರಾಮದ ಪಿಡಿಓಗಳು ಮತ್ತು ಪಂಚಾಯತ್‌ಗಳ ಆಡಳಿತಾಧಿಕಾರಿಗಳು, ಕಂದಾಯ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಸಂಬಂದಪಟ್ಟ ಇಲಾಖೆಯಿಂದ ಮರಣ ಪ್ರಮಾಣ ಪತ್ರ ಪಡೆದು, ಪೌತಿ ಖಾತೆ ಬದಲಾವಣೆ ಮಾಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯಗಳಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಲ್ಲಿ ಕೂಡಲೇ ಮಾಹಿತಿ ನೀಡಿ, ಅನವಶ್ಯಕವಾಗಿ ಪಿಂಚಣಿ ಹಣ ಅನರ್ಹರಿಗೆ ತಲುಪಿ ದುರುಪಯೋಗವಾಗದಂತೆ ಎಚ್ಚರವಹಿಸಬೇಕು, ಇಲ್ಲವಾದಲ್ಲಿ ಮೃತರ ಹೆಸರಿನಲ್ಲಿ ಪಿಂಚಣಿ ಪಡೆದವರಿಂದಲೇ ಮೊತ್ತವನ್ನು ವಸೂಲಿ ಮಾಡಲಾ ಗುವುದು ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

ತಹಶೀಲ್ದಾರ್‌ಗಳಿಂದ ಗ್ರಾಮ ವಾಸ್ತವ್ಯ:  ಪ್ರತೀ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶ ಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂದಪಟ್ಟ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಜಿಲ್ಲಾಧಿಕಾರಿ ಭೇಟಿ ನೀಡುವ ತಾಲೂಕಿನ ತಹಶೀಲ್ದಾರ್ ಹೊರತುಪಡಿಸಿ, ಉಳಿದ ತಾಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲಿದ್ದು, ಬೆಳಗ್ಗೆ 10ರಿಂದ 5 ಗಂಟೆಯವರೆಗೆ ವಾಸ್ತವ್ಯ ಮಾಡಲಿದ್ದಾರೆ ಎಂದರು.

ಕುಂದಾಪುರ ಉಪವಿಬಾಗಾಧಿಕಾರಿ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಸಬೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X