Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಚೀನಾ ಸಂಬಂಧ ತೀವ್ರವಾಗಿ...

ಭಾರತ-ಚೀನಾ ಸಂಬಂಧ ತೀವ್ರವಾಗಿ ಹದಗೆಟ್ಟಿದೆ: ವಿದೇಶ ಸಚಿವ ಎಸ್ ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ28 Jan 2021 10:57 PM IST
share

ಹೊಸದಿಲ್ಲಿ, ಜ.28: ಭಾರತ-ಚೀನಾ ನಡುವಿನ ಸಂಬಂಧ ಈಗ ನಿಜವಾಗಿಯೂ ಕವಲುದಾರಿಯಲ್ಲಿದೆ. ಈ ಹಂತದಲ್ಲಿ ಕೈಗೊಳ್ಳುವ ಆಯ್ಕೆಯು ಉಭಯ ರಾಷ್ಟ್ರಗಳ ಮೇಲೆ ಮಾತ್ರವಲ್ಲ, ಇಡೀ ವಿಶ್ವದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ವಿದೇಶ ವ್ಯವಹಾರ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಭಾರತ-ಚೀನಾ ಸಂಬಂಧಗಳ ವಿಷಯದಲ್ಲಿ ಆನ್‌ಲೈನ್ ಮೂಲಕ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಪೂರ್ವ ಲಡಾಕ್‌ನಲ್ಲಿ ನಡೆದ ಘಟನೆಗಳು ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ತೀವ್ರವಾಗಿ ಹದಗೆಡಿಸಿವೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿ ಬದಲಿಸುವ ಯಾವುದೇ ಪ್ರಯತ್ನ ಖಂಡಿತಾ ಸ್ವೀಕಾರಾರ್ಹವಲ್ಲ ಎಂದರು.

ಪೂರ್ವ ಲಡಾಕ್‌ನಲ್ಲಿ ಚೀನಾದ ಕೃತ್ಯವು ಸೇನಾಬಲವನ್ನು ಕಡಿಮೆಗೊಳಿಸುವ ಬದ್ಧತೆಯ ಕಡೆಗಣನೆಯಷ್ಟೇ ಅಲ್ಲ, ಈ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಧೋರಣೆಯ ಪ್ರತೀಕವಾಗಿದೆ. ಚೀನಾದ ಬದಲಾದ ನಿಲುವು ಹಾಗೂ ಗಡಿಭಾಗದಲ್ಲಿ ಸೇನೆಯ ಜಮಾವಣೆ ಕುರಿತು ಇದುವರೆಗೂ ನಮಗೆ ಯಾವುದೇ ವಿಶ್ವಾಸಾರ್ಹ ವಿವರಣೆ ಸಿಕ್ಕಿಲ್ಲ. ವಾಸ್ತವಿಕ ನಿಯಂತ್ರಣ ರೇಖೆಯ ನಿರ್ವಹಣೆ ಕುರಿತ ಎಲ್ಲಾ ಒಪ್ಪಂದದ ಕಟ್ಟುನಿಟ್ಟಿನ ಪಾಲನೆ, ಪರಸ್ಪರ ಗೌರವ ಮತ್ತು ಸಂವೇದನಾಶೀಲತೆ, ಏಶ್ಯಾದ ಬಲಿಷ್ಟ ರಾಷ್ಟ್ರವಾಗಿ ಬೆಳೆಯಬೇಕೆಂಬ ಪರಸ್ಪರರ ಆಕಾಂಕ್ಷೆಯನ್ನು ಗೌರವಿಸುವುದೂ ಸೇರಿದಂತೆ ಎಂಟು ಪ್ರಮುಖ ಅಂಶಗಳ ಮೂಲಕ ಭಾರತ-ಚೀನಾ ನಡುವಿನ ಸಂಬಂಧವನ್ನು ಸುಧಾರಿಸಬಹುದು ಎಂದು ಜೈಶಂಕರ್ ಹೇಳಿದ್ದಾರೆ.

ಉಭಯ ದೇಶಗಳೂ ಬಹು ಧ್ರುವೀಯ ಜಗತ್ತಿಗೆ (ಸಾಮರ್ಥ್ಯ, ಅಧಿಕಾರ ಬಹು ರಾಷ್ಟ್ರಗಳಲ್ಲಿ ಸಮಾನ ಹಂಚಿಕೆಯಾಗಿರುವ ವ್ಯವಸ್ಥೆ) ಬದ್ಧವಾಗಿದ್ದರೂ, ಏಶ್ಯಾದಲ್ಲೂ ಈ ವ್ಯವಸ್ಥೆಯನ್ನು ಪರಿಗಣಿಸಬೇಕಾಗಿದೆ. ಉಭಯ ದೇಶಗಳಿಗೂ ತಮ್ಮದೇ ಆದ ಹಿತಾಸಕ್ತಿ, ಆದ್ಯತೆ, ಸಮಸ್ಯೆಗಳಿವೆ. ಸಂವೇದನಾಶೀಲತೆಯೂ ಏಕಪಕ್ಷೀಯವಾಗಿರಲು ಸಾಧ್ಯವಿಲ್ಲ. ಪ್ರಮುಖ ದೇಶಗಳ ನಡುವಿನ ಸಂಬಂಧ ಅನುರೂಪವಾಗಿರಬೇಕು. ಉಭಯ ದೇಶಗಳ ನಡುವೆ ಈಗಾಗಲೇ ಇರುವ ಭಿನ್ನಾಭಿಪ್ರಾಯಗಳನ್ನು ಉಪಶಮನಗೊಳಿಸುವುದು ಹಾಗಿರಲಿ, 2020ರಲ್ಲಿ ನಡೆದ ಘಟನಾವಳಿಗಳು ಸಂಬಂಧವನ್ನು ಮತ್ತಷ್ಟು ಬಿಗಡಾಯಿಸಿದೆ. ಗಡಿಭಾಗದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವುದು ಸಂಬಂಧ ಸುಧಾರಣೆಯ ನಿಟ್ಟಿನಲ್ಲಿ ಪ್ರಮುಖವಾಗಿದೆ. ಸಂಬಂಧ ಸುಧಾರಿಸಬೇಕಿದ್ದರೆ, ಕಳೆದ 3 ದಶಕಗಳ ಪ್ರಕ್ರಿಯೆಗಳನ್ನು ಗಣನೆಗೆ ತೆಗೆದುಕೊಂಡು ಕಾರ್ಯನೀತಿ ರೂಪಿಸುವ ಅಗತ್ಯವಿದೆ ಎಂದು ಜೈಶಂಕರ್ ಅಭಿಪ್ರಾಯ ಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X