ಕೃಷಿ ಕಾಯ್ದೆ ವಿರುದ್ಧದ ಉಪವಾಸ ಸತ್ಯಾಗ್ರಹವನ್ನು ರದ್ದುಗೊಳಿಸಿದ ಅಣ್ಣಾ ಹಝಾರೆ
ಬಿಜೆಪಿ ನಾಯಕರ ಭೇಟಿಯ ನಂತರದ ಬೆಳವಣಿಗೆ

ಪುಣೆ,ಜ.29: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯ ಕುರಿತಾದಂತೆ ಲಕ್ಷಾಂತರ ಸಂಖ್ಯೆಯ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ ಎಂದು ಹಳಿಕೆ ನೀಡಿದ್ದರು. ಇದೀಗ ಬಿಜೆಪಿ ನಾಯಕರು ಭೇಟಿಯಾಗಿ ಹಝಾರೆ ಜೊತೆ ಮಾತುಕತೆ ನಡೆಸಿದ ಬಳಿಕ, ತಾನು ಸತ್ಯಾಗ್ರಹದಿಂದ ಹಿಂದೆ ಸರಿದಿರುವುದಾಗಿ ಹೇಳಿಕೆ ನೀಡಿದ್ದಾರೆ.
ಇಂದು ಮಧ್ಯಾಹ್ನ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಇತರ ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಳಿಕ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಹಝಾರೆ, "ಸರಕಾರವು ನಾನು ನೀಡಿದ್ದ 15 ಅಂಶಗಳನ್ನು ಒಪ್ಪಿಕೊಂಡಿದೆ. ಈ ಕಾರಣದಿಂದ ನಾನು ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
"ನಾನು ಈ ಹಿಂದೆಯೂ ಹಲವು ಬಾರಿ ರೈತರ ಸಮಸ್ಯೆಗಳ ಕುರಿತಾದಂತೆ ಸತ್ಯಾಗ್ರಹಗಳನ್ನು ನಡೆಸಿದ್ದೇನೆ. ಅದು ಯಶಸ್ವಿಯೂ ಆಗಿದೆ. ಆದರೆ ಈಗ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯುʼಪ್ರಜಾಪ್ರಭುತ್ವ ಮೌಲ್ಯಗಳಿಗೆʼ ಬದ್ಧವಾಗಿಲ್ಲ ಎಂದು ಅಣ್ಣಾ ಹಜಾರೆ ಹೇಳಿಕೆ ನೀಡಿದ್ದಾಗಿ ndtv.com ವರದಿ ಮಾಡಿದೆ.
Interacting with Media after meeting Shri Anna Hazare at Ralegan Siddhi https://t.co/4c17H36Giu
— Devendra Fadnavis (@Dev_Fadnavis) January 29, 2021







