Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೊ...

ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೊ ಲಸಿಕೆ: ಕಡ್ಡಾಯವಾಗಿ ಲಸಿಕೆ ಹಾಕಿಸಲು ಆರೋಗ್ಯ ಸಚಿವರ ಮನವಿ

ವಾರ್ತಾಭಾರತಿವಾರ್ತಾಭಾರತಿ29 Jan 2021 8:37 PM IST
share
ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೊ ಲಸಿಕೆ: ಕಡ್ಡಾಯವಾಗಿ ಲಸಿಕೆ ಹಾಕಿಸಲು ಆರೋಗ್ಯ ಸಚಿವರ ಮನವಿ

ಬೆಂಗಳೂರು, ಜ.29: ರಾಜ್ಯಾದ್ಯಂತ ಜನವರಿ 31ರಂದು ಪೋಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.17 ರಂದು ಪೋಲಿಯೊ ಲಸಿಕೆ ನೀಡಬೇಕಿತ್ತು. ಕೊರೋನ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೇ ತಿಂಗಳು 31 ರಂದು 0-5 ವರ್ಷದ 64,07,930 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುವುದು ಎಂದರು.

ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ. ಪೋಷಕರು ಈ ಹಿಂದೆ ತಮ್ಮ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೊಲೀಯೊ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದು ಅವರು ಹೇಳಿದರು.

ನಮ್ಮಲ್ಲಿ ಒಟ್ಟು 85,05,060 ಡೋಸ್ ಪೋಲಿಯೊ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್ ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್‍ಗಳನ್ನು ಸಿದ್ಧಪಡಿಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.

ರಾಜ್ಯದಲ್ಲಿ 2,90,533 ಮಂದಿಗೆ ಕೋವಿಡ್ ಲಸಿಕೆ ನೀಡಿದ್ದು, ಇವತ್ತಿನವರೆಗೆ ಶೇ.49ರಷ್ಟು ಸಾಧನೆಯಾಗಿದೆ. ಲಸಿಕೆ ಪಡೆದಿರುವುದರಿಂದ ಯಾವುದೇ ಸಾವು ಆಗಿಲ್ಲ. ಈ ಬಗ್ಗೆ ತಪ್ಪು ತಿಳುವಳಿಕೆ ಬೇಡ. ಕೆಲವೆಡೆ ಅಡ್ಡ ಪರಿಣಾಮವಾಗಿದ್ದು, ಅದು ಕೂಡ ನಂತರ ಪರಿಹಾರವಾಗಿದೆ. ಇಂತಹ ಲಸಿಕೆಯ ರಾಮಬಾಣವನ್ನು ಬಳಸದಿದ್ದರೆ ವ್ಯರ್ಥವಾಗುತ್ತದೆ ಎಂದು ಎಂದು ಅವರು ಹೇಳಿದರು.

ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕ್ರಮ ವಹಿಸಿದೆ ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X