Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೇ ರಾಮ್!

ಹೇ ರಾಮ್!

ಇಂದು ಹುತಾತ್ಮರ ದಿನ

ಕೋ. ಚೆನ್ನಬಸಪ್ಪಕೋ. ಚೆನ್ನಬಸಪ್ಪ30 Jan 2021 12:10 AM IST
share
ಹೇ ರಾಮ್!

ಆ ಧಾಂಡಿಗ ಅವಳನ್ನು ಬಲವಾಗಿ ಪಕ್ಕಕ್ಕೆ ದೂಡಿ ಬಲಗೈಯಲ್ಲಿ ಬಚ್ಚಿಟ್ಟುಕೊಂಡಿದ್ದ ಪಿಸ್ತೂಲಿನಿಂದ ಗಾಂಧೀಜಿಯ ಎದೆಗೆ ನೇರವಾಗಿ ಗುಂಡಿಕ್ಕಿ ಮೂರು ಸಲ ಹೊಡೆದ!
‘ಢಂ !’ ‘ಢಂ !’ ‘ಢಂ !’
ಗಾಂಧೀಜಿ ‘ಹೇ ರಾಮ್’ ಎಂದು ಕೊನೆಯ ಸಲ ತಮ್ಮ ಜೀವನದ ಉಸಿರಾಗಿದ್ದ ರಾಮನಾಮ ಜಪಿಸಿ ಕೊನೆ ಉಸಿರು ಎಳೆದು ಕುಸಿದುಬಿದ್ದರು!! ಗಾಂಧೀಜಿಯ ಊರುಗೋಲಾಗಿದ್ದ ಯುವತಿಯರಿಬ್ಬರೂ ಅವರನ್ನು ಹಿಡಿದೆತ್ತಿ ನಿಲ್ಲಿಸಲು ತಡಬಡಿಸಿದರು. ಹೆಮ್ಮರ ಉರುಳಿದರೆ ಊರುಗೋಲು ಆಸರೆಯಾದೀತೇ? ಅವರೂ ನೆಲಕ್ಕೆ ಕುಸಿದರು. ಗಾಂಧೀಜಿ ಹೊದ್ದುಕೊಂಡಿದ್ದ ಶುಭ್ರ ಧವಳ ಶ್ವೇತ ಖಾದಿ ಅಂಗವಸ್ತ್ರ ರಕ್ತಮಯವಾಯಿತು. ಯುವತಿಯರಿಬ್ಬರೂ ರಕ್ತದ ಕಣ್ಣೀರಿಟ್ಟರು.



ಅಂದು ಜನವರಿ 30, 1948. ಶುಕ್ರವಾರ ಸಂಜೆ 4 ಗಂಟೆ.

ಮಹಾತ್ಮಾ ಗಾಂಧಿ, ಗೃಹಮಂತ್ರಿ ವಲ್ಲಭಬಾಯಿ ಪಟೇಲರೊಡನೆ ಸಮಾಲೋಚನೆ ನಡೆಸುತ್ತಿದ್ದರು. ಪಟೇಲರು ಮಂತ್ರಿ ಪದವಿಗೆ ರಾಜೀನಾಮೆ ಕೊಡುವುದಾಗಿ ಭಾರತದ ಗವರ್ನರ್ ಜನರಲ್ ಲೂಯಿ  ಮೌಂಟ್ ಬ್ಯಾಟನ್ನರಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ವೌಂಟ್ ಬ್ಯಾಟನ್ ಗಾಂಧೀಜಿಯ ಗಮನಕ್ಕೆ ತಂದು-ಪಟೇಲ್ ರಾಜೀನಾಮೆ ಕೊಡದಂತೆ ಪ್ರಯತ್ನಿಸಬೇಕೆಂದು ಸೂಚಿಸಿದರು. ಆ ವಿಚಾರವಾಗಿ ಗಾಂಧೀಜಿ ತಮ್ಮ ಆಪ್ತ ಶಿಷ್ಯ ಪಟೇಲರನ್ನು ಕರೆಸಿಕೊಂಡು ಸಮಾಲೋಚನೆ ನಡೆಸಿದ್ದರು. ಸಮಯ ಎಷ್ಟಾಯಿತೆಂಬುದರ ಕಡೆಗೆ ಗಮನವಿರಲಿಲ್ಲ. ಐದು ಗಂಟೆಗೆ ಪ್ರಾರ್ಥನಾ ಸಭೆ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲೇಬೇಕಿತ್ತು. ಅದನ್ನೆಂದಿಗೂ ಗಾಂಧೀಜಿ ಅತಿಕ್ರಮಿಸಿರಲಿಲ್ಲ. ಆದರೆ ಅಂದು ಐದು ಗಂಟೆ ಮೀರಿ ಹತ್ತು ನಿಮಿಷಗಳಾಗುತ್ತಾ ಬಂದಿತ್ತು.

ಗಾಂಧೀಜಿ ತಮ್ಮ ‘ಸಮಯ ಸೂಚಕರು’ (Time Keepers) ಎಂದೇ ಪ್ರೀತಿಯಿಂದ ಕರೆಯುತ್ತಿದ್ದ ತಮ್ಮ ಮೊಮ್ಮಕ್ಕಳು ಆಭಾ ಮತ್ತು ಮನು ಎಂಬ ಯುವತಿಯರು ಸಂಕೋಚದಿಂದಲೇ ಗಾಂಧೀಜಿಗೆ ಗಡಿಯಾರ ತೋರಿಸಿದರು. ಗಾಂಧೀಜಿ ಒಂದೆರಡು ನಿಮಿಷಗಳಲ್ಲಿ ಮಾತು ನಿಲ್ಲಿಸಿದರು. ‘ಪ್ರಾರ್ಥನೆಗೆ ಹೊತ್ತಾಯಿತು’ ಎಂದರು. ಪಟೇಲರು ಕೊಠಡಿಯಿಂದ ಹೊರ ನಡೆದರು. ಗಾಂಧೀಜಿ ಪ್ರಾರ್ಥನಾ ಸಭೆಗೆ ಹೊರಟು ನಿಂತರು. ತಮ್ಮ ಊರುಗೋಲುಗಳೆಂದೇ ಗಾಂಧೀಜಿ ಕರೆಯುತ್ತಿದ್ದ ಆಭಾ ಮತ್ತು ಮನು ಗಾಂಧೀಜಿಯ ಎಡಬಲಗಳಲ್ಲಿ ನಿಂತರು. ಅವರ ಹೆಗಲ ಮೇಲೆ ಕೈ ಊರಿ ಗಾಂಧೀಜಿ ಪ್ರಾರ್ಥನಾ ಸಭೆಯ ಕಡೆ ನಿಧಾನವಾಗಿ ಹೆಜ್ಜೆ ಹಾಕಿದರು. ಜನವರಿ 12ರಿಂದ ಪ್ರಾರಂಭಿಸಿದ್ದ ಆಮರಣ ಉಪವಾಸವನ್ನು ನಿಲ್ಲಿಸಿ ಕೆಲವೇ ದಿನಗಳಾಗಿತ್ತು. ನಿಶ್ಯಕ್ತಿಯಿಂದ ಬಳಲಿದ್ದರು.

ಆಗಲೇ ಬಿರ್ಲಾ ಭವನದ ಹುಲ್ಲು ಮೈದಾನದಲ್ಲಿ ಜನ ಸೇರಿದ್ದರು. ಗಾಂಧೀಜಿ ಬಂದೊಡನೆ ದೂರ ನಿಂತಿದ್ದವರೆಲ್ಲರೂ ಪ್ರಾರ್ಥನಾ ಜಗಲಿಯ ಕಡೆ ನುಗ್ಗಿಬಂದರು. ಆ ಜನರ ಗುಂಪು ಬದಿಗೆ ಸರಿದು ಇಬ್ಭಾಗವಾಗಿ ಗಾಂಧೀಜಿಗೆ ದಾರಿಬಿಟ್ಟಿತು. ಕೆಲವರು ಕೈ ಮುಗಿದು ನಿಂತಿದ್ದರು. ಆಗ ಒಬ್ಬ ಖಾಕಿ ವಸ್ತ್ರಧಾರಿ ಧಾಂಡಿಗ ಯುವಕ ಗಾಂಧೀಜಿ ಕಡೆಗೆ ನುಗ್ಗಿ ಪಾದಕ್ಕೆ ನಮಸ್ಕರಿಸುವಂತೆ ನಟಿಸುತ್ತ ಮುಗಿದ ಕೈಗಳಿಂದ ಬಾಗಿದ. ಗಾಂಧೀಜಿಯ ಪಕ್ಕದಲ್ಲಿದ್ದ ಮನು ಗಾಂಧಿ ಬೇಡ ಬೇಡ ಎಂದು ಅವನನ್ನು ಮೆಲ್ಲನೆ ತಡೆಯಲು ಹೋದಳು. ಆ ಧಾಂಡಿಗ ಅವಳನ್ನು ಬಲವಾಗಿ ಪಕ್ಕಕ್ಕೆ ದೂಡಿ ಬಲಗೈಯಲ್ಲಿ ಬಚ್ಚಿಟ್ಟುಕೊಂಡಿದ್ದ ಪಿಸ್ತೂಲಿನಿಂದ ಗಾಂಧೀಜಿಯ ಎದೆಗೆ ನೇರವಾಗಿ ಗುಂಡಿಕ್ಕಿ ಮೂರು ಸಲ ಹೊಡೆದ!
‘ಢಂ !’
‘ಢಂ !’
‘ಢಂ !’

ಗಾಂಧೀಜಿ ‘ಹೇ ರಾಮ್’ ಎಂದು ಕೊನೆಯ ಸಲ ತಮ್ಮ ಜೀವನದ ಉಸಿರಾಗಿದ್ದ ರಾಮನಾಮ ಜಪಿಸಿ ಕೊನೆ ಉಸಿರು ಎಳೆದು ಕುಸಿದುಬಿದ್ದರು!! ಗಾಂಧೀಜಿಯ ಊರುಗೋಲಾಗಿದ್ದ ಯುವತಿಯರಿಬ್ಬರೂ ಅವರನ್ನು ಹಿಡಿದೆತ್ತಿ ನಿಲ್ಲಿಸಲು ತಡಬಡಿಸಿದರು. ಹೆಮ್ಮರ ಉರುಳಿದರೆ ಊರುಗೋಲು ಆಸರೆ ಯಾದೀತೇ? ಅವರೂ ನೆಲಕ್ಕೆ ಕುಸಿದರು. ಗಾಂಧೀಜಿ ಹೊದ್ದುಕೊಂಡಿದ್ದ ಶುಭ್ರ ಧವಳ ಶ್ವೇತ ಖಾದಿ ಅಂಗವಸ್ತ್ರ ರಕ್ತಮಯವಾಯಿತು. ಯುವತಿಯರಿಬ್ಬರೂ ರಕ್ತದ ಕಣ್ಣೀರಿಟ್ಟರು. ಆಗ ಸಂಜೆ ಐದು ಗಂಟೆ ಹದಿನೇಳು ನಿಮಿಷ. ಕೂಡಿದ್ದ ಜನ ಗಾಂಧೀಜಿ ಬಿದ್ದ ಸ್ಥಳದತ್ತ ನುಗ್ಗಿದರು. ಕೆಲವರು ಕಂಗೆಟ್ಟು, ದಿಕ್ಕೆಟ್ಟು ದಿಕ್ಕಾಪಾಲಾದರು! ಗುಂಡಿಕ್ಕಿ ಕೊಂದ ಆ ಧಾಂಡಿಗನನ್ನು ಬಿರ್ಲಾ ಭವನದ ಮಾಲಿ ರಘುಮಾಲಿ ಹಿಡಿದುಕೊಂಡ. ಪೊಲೀಸರು ಬಂದು ಅವನನ್ನು ವಶಕ್ಕೆ ತೆಗೆದುಕೊಂಡರು. ಇಲ್ಲದಿದ್ದರೆ ಅವನನ್ನು ಜನರೇ ಮುಗಿಸುತ್ತಿದ್ದರು! ಕಗ್ಗೊಲೆಯ ಸುದ್ದಿ ಕೆಲವೇ ಸೆಕೆಂಡುಗಳಲ್ಲಿ-ನಿಮಿಷಗಳಲ್ಲ -ಕೇವಲ ಕೆಲವೇ ಕ್ಷಣಗಳಲ್ಲಿ ದಿಲ್ಲಿಯಲ್ಲೆಲ್ಲಾ ಕಾಡ್ಗಿಚ್ಚಿನಂತೆ ಹಬ್ಬಿತು. ನಿಮಿಷಾರ್ಧದಲ್ಲಿ ನೆಹರೂ ಬಂದರು ಪಟೇಲ್ ಬಂದರು ಗವರ್ನರ್ ಜನರಲ್ ವೌಂಟ್ ಬ್ಯಾಟನ್ ಆಗತಾನೇ ಮದ್ರಾಸಿನಿಂದ ಹಿಂದಿರುಗಿದ್ದವರು ಕೂಡಲೇ ಧಾವಿಸಿಬಂದರು. ಅಬುಲ್ ಕಲಾಂ ಆಝಾದ್ ಬಂದರು. ದೌಲತ್‌ರಾಮ್, ರಾಜಕುಮಾರಿ ಅಮೃತಕೌರ್, ಆಚಾರ್ಯ ಕೃಪಲಾನಿ, ಕೆ.ಎಂ. ಮುನ್ಷಿ ಬಂದರು. ದಿಲ್ಲಿಯ ಲಕ್ಷೋಪಲಕ್ಷ ಜನ ಬಿರ್ಲಾ ಭವನಕ್ಕೆ ನುಗ್ಗಿ ಬಂದರು. ಸಾಗರದ ಹೆದ್ದರೆಗಳಂತೆ ಭೋರ್ಗರೆದು ದುಃಖಿ ಸುತ್ತ ಬಂದರು. ಗೋಳಿಟ್ಟು ಬಂದರು!

ಕೊಂದವರು ಯಾರು? ಇದು ಜಗತ್ತಿನ, ತತ್ರಾಪಿ ಭಾರತದ ಜನಮನದಲ್ಲಿ ಭುಗಿಲೆದ್ದ ಪ್ರಶ್ನೆ. ಅವನೇನಾದರೂ ಮುಸ್ಲಿಮನಾಗಿದ್ದರೆ? ಆಗಬಹುದಾದ ಭೀಕರ ಪರಿಣಾಮವನ್ನು ಊಹಿಸುವುದೂ ಅಸಾಧ್ಯ! ಆ ಸಂಜೆ ಆರು ಗಂಟೆಗೆ ಆಕಾಶವಾಣಿ ವಾರ್ತೆಯಲ್ಲಿ ಸಾರಲಾಯಿತು. ‘ಈಗ ಸ್ವಲ್ಪ ಹೊತ್ತಿನ ಮುಂಚಿ ಮಹಾತ್ಮಾ ಗಾಂಧಿಯವನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಕೊಂದವನು ಒಬ್ಬ ಹಿಂದೂ’! ಈ ಒಂದು ಸಾಲಿನ, ಎರಡು ವಾಕ್ಯದ ಸುದ್ದಿ ಭೀಕರ ಹಾಗೂ ವ್ಯಾಪಕ ಹಿಂಸಾಚಾರಗಳಿಂದ ಈ ದೇಶವನ್ನು ಉಳಿಸಿತು. ಮುಖಂಡರು ನಿಟ್ಟುಸಿರುಬಿಟ್ಟು ಇದ್ದದ್ದರಲ್ಲಿಯೇ ಸಮಾಧಾನಪಟ್ಟರು. ಒಂದು ವೇಳೆ ಗಾಂಧೀಜಿ ಹಂತಕ ಮುಸ್ಲಿಮನಾಗಿದ್ದಿದ್ದರೆ ಈ ದೇಶದದಲ್ಲಿ ಘನಘೋರ - ಹಿಂದೆ ಎಂದೆಂದೂ ಕಾಣದಿದ್ದ, ಮುಂದೆ ಎಂದೆಂದೂ ಕಾಣಲಾಗದ ಹಿಂದೂ - ಮುಸ್ಲಿಂ ಮಾರಣಹೋಮ ನಿಸ್ಸಂಶಯವಾಗಿ ನಡೆದುಹೋಗುತ್ತಿತ್ತು. ಇಲ್ಲಿ ಆಗಬಹುದಾಗಿದ್ದ ಮುಸ್ಲಿಮರ ಹತ್ಯಾಕಾಂಡದಿಂದ ಪಾಕಿಸ್ತಾನ ಮತ್ತಿತರ ದೇಶಗಳಲ್ಲಿದ್ದ ಹಿಂದೂ, ಸಿಖ್ ಮುಂತಾದವರ ಹೆಣಗಳ ಬೆಟ್ಟದ ರಾಶಿಗಳೇ ಬೆಳೆಯುತ್ತಿದ್ದವು! ಇದು ನಿರಾಧಾರ ಎಂದು ಯಾರೂ ಹೇಳುವಂತಿರಲಿಲ್ಲ.

ದೇಶ ಇಬ್ಭಾಗವಾದಾಗ ಭಾರತ ಪಾಕಿಸ್ತಾನಗಳಲ್ಲಿ ಅದಕ್ಕಿಂತ ಮೊದಲು 1946ರಲ್ಲಿ ಅವಿಭಾಜ್ಯ ಭಾರತದಲ್ಲಿ ಆದ ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ದೊಂಬಿಗಳಲ್ಲಿ ಅದರಲ್ಲೂ ನವಖಾಲಿ ಮತ್ತು ಬಿಹಾರ್ ಪ್ರಾಂತಗಳಲ್ಲಿ ಹರಿದ ರಕ್ತದ ಕಾಲುವೆ, ಈ ಸಂದರ್ಭದಲ್ಲಿ ಪ್ರತಿಯೊಂದು ಊರು, ನಗರ, ಶಹರಗಳಲ್ಲಿ ಹರಿಯುತ್ತಿತ್ತು! ದೇಶ ವಿಭಜನೆಯಾದೊಡನೆ ನಿಸ್ಸಂದೇಹವಾಗಿ ಲಾಹೋರ್ ಶಹರದಲ್ಲಿ ಮಕ್ಕಳು, ಮರಿಗಳು, ಹೆಂಗಸರು, ಮುದುಕರು, ಭಿಕ್ಷುಕರು, ಶ್ರೀಮಂತರು, ಬಡವ ಬಲ್ಲಿದರು, ಆಪ್ತರು - ಮಿತ್ರರು ಎಂಬ ಭೇದವಿಲ್ಲದೆ ಹಿಂದೂ -ಸಿಖ್, ಪಾರ್ಸಿ, ಕ್ರಿಶ್ಚಿಯನ್ ಜನರನ್ನು ಭರ್ಜಿ, ಈಟಿ, ಬಡಿಗೆ, ಬಂದೂಕು, ಕೊಡಲಿ, ಮಚ್ಚು, ಕತ್ತಿ...ಗಳಿಂದ ಕೊಚ್ಚಿ ಹಾಕಿದ್ದರು! ರುಂಡ ಮುಂಡ ಚೆಂಡಾಡಿದ್ದರು.

ಲಾಹೋರಿನ ಚರಂಡಿಗಳಲ್ಲಿ ಗಟಾರಗಳಲ್ಲಿ ರಕ್ತವೇ ಹರಿಯಿತು. ಬಾಗಿಲು ಮುಚ್ಚಿಕೊಂಡು ಅಡಗಿ ಕುಳಿತಿದ್ದವರ ಮನೆಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಿದರು. ಈ ಚಿತ್ರಹಿಂಸೆ, ಹತ್ಯಾಕಾಂಡದಿಂದ ತಪ್ಪಿಸಿಕೊಳ್ಳಲು ರೈಲು, ಮೋಟಾರು, ಸೈಕಲ್, ಗಾಡಿ, ಕಾಲ್ನಡಿಗೆಯಲ್ಲಿ ಓಡಿ ಹೋಗುತ್ತಿದ್ದವರನ್ನು ಬೆನ್ನಟ್ಟಿ ಮೃಗ ಬೇಟೆ ಆಡಿದಂತೆ ತುಂಡರಿಸಿದ್ದರು! ಇದಕ್ಕಿಂತಲೂ ಹೇಯವಾಗಿ ಹೆಂಗಸರ ಮಾನಹಾನಿ ಮಾಡಿದ್ದರು! ಇಲ್ಲಿ ದಿಲ್ಲಿಯಲ್ಲಿ ಲಾಹೋರಿನಲ್ಲಿ ನಡೆದಂತೆಯೇ ಪ್ರತೀಕಾರಾರ್ಥವಾಗಿ ಕಗ್ಗೊಲೆ, ಸ್ತ್ರೀ ಮಾನಭಂಗ, ಸಜೀವ ದಹನ, ಅವ್ಯಾಹತವಾಗಿ ನಡೆಯಿತು. ಅಲ್ಲಿ ಹಿಂದೂ, ಸಿಖ್, ಈಸಾಯಿ, ಪಾರ್ಸಿ ಅವರ ಆಸ್ತಿಹರಣ ಮಾಡಿದಂತೆ, ಇಲ್ಲಿಯೂ ಮುಸ್ಲಿಮರ ಮನೆ, ಅಂಗಡಿ ಆಸ್ತಿ ಲೂಟಿ ಮಾಡಿದರು. ಬಲತ್ಕಾರವಾಗಿ ಆಕ್ರಮಣ ಮಾಡಿದರು. ದಿಲ್ಲಿಯ ಗಟಾರಗಳಲ್ಲಿ, ಚರಂಡಿಗಳಲ್ಲಿ ರಕ್ತ ಹೊಳೆಯಂತೆ ವಾರಗಟ್ಟಲೆ ಹರಿಯಿತು. ಇದನ್ನು ಕಣ್ಣಾರೆ ಕಂಡ ನೆಹರೂ: ‘ಣ್ಠ್ಟ ಛಿಟ್ಝಛಿ ಛಿ ಜಟ್ಞಛಿ ಞ’ ಎಂದು ನಿರಾಸೆಯ ನಿಟ್ಟುಸಿರುಬಿಟ್ಟರು. ಈ ದೊಂಬಿ, ಲೂಟಿ, ಹತ್ಯಾಕಾಂಡವನ್ನು ನಿಯಂತ್ರಿಸಲು ಸೈನ್ಯಕ್ಕೂ ಸಾಧ್ಯವಾಗಲಿಲ್ಲ. ಅನೇಕ ಸಂದರ್ಭಗಳಲ್ಲಿ ಸೈನಿಕರು, ಪೊಲೀಸರು, ಜನರ ಈ ಕಿರಾತ ಮೃಗೀಯ ವರ್ತನೆಯನ್ನು ಮೂಕಪ್ರೇಕ್ಷಕರಾಗಿ ಬಹುಶಃ ಅದನ್ನು ಸಮ್ಮತಿಸುವಂತೆ, ಪ್ರೋತ್ಸಾಹಿಸುವಂತೆ ನೋಡುತ್ತಿದ್ದರು! ಅಂದ ಮೇಲೆ ಈಗ ಗಾಂಧಿ ಹಂತಕ ಮುಸ್ಲಿಂ ಯುವಕನಾಗಿದ್ದಿದ್ದರೆ ಭಾರತದ ಹಳ್ಳಿ, ನಗರ, ಶಹರ, ಹೊಲ ಗದ್ದೆ, ಮನೆ ಮಠ... ಎಲ್ಲೆಲ್ಲೂ ಹತ್ಯಾಕಾಂಡ, ರಕ್ತದ ಹೊಳೆ ನಿಸ್ಸಂದೇಹವಾಗಿ ಹರಿಯುತ್ತಿತ್ತು! ಹೀಗೆಯೇ ಇದಕ್ಕಿಂತ ಹೆಚ್ಚು ಹಾನಿ ಆಗಬಹುದಿತ್ತು ಎಂಬುದಕ್ಕೆ ನಮ್ಮ ಕಣ್ಣೆದುರಿನಲ್ಲಿಯೇ 2002ರಲ್ಲಿ ಗುಜರಾತ್‌ನಲ್ಲಿ ನಡೆದ ನರಮೇಧವೇ ಪ್ರತ್ಯಕ್ಷ ನಿದರ್ಶನ!

ದೇಶ ವಿಭಜನೆಗಿಂತ ಮೊದಲು ಕಲ್ಕತ್ತಾ, ನವಖಾಲಿಯಲ್ಲಿ ಆದ ಮಾರಣಹೋಮವಂತೂ ಇದರಷ್ಟೇ ಭಯಾನಕವಾಗಿತ್ತು. ಆಗ ಅವಿಭಾಜ್ಯ ಬಂಗಾಲದಲ್ಲಿ ಸುಹ್ರವರ್ದಿ ಮುಸ್ಲಿಂ ಲೀಗ್ ಮಂತ್ರಿಮಂಡಲವೇ ಇದ್ದುದರಿಂದ ಕಲ್ಕತ್ತಾದಲ್ಲಿಯೇ ರಕ್ತದ ಹೊಳೆ ಹರಿಯಿತು!! ಅರೆಜೀವ ಇದ್ದ ಗಾಯಾಳುಗಳನ್ನು ರಣಹದ್ದುಗಳು, ಕಾಗೆ, ನಾಯಿಗಳು ಹರಿದು ತಿಂದವು! ಖಡ್ಗದಿಂದ ರುಂಡವನ್ನು ತುಂಡರಿಸಿದಾಗ ಚಿಮ್ಮಿದ ರಕ್ತ ಬೀದಿಯ ಗೋಡೆಗಳ ಮೇಲೆ ಚೀರ್ಕೊಳೆಯಿಂದ ಸಿಂಪಡಿಸಿದಂತೆ ಮೆತ್ತಿಕೊಂಡಿತು!! ನವಖಾಲಿಯಲ್ಲಿ ಇದಕ್ಕಿಂತಲೂ ಭೀಕರ ಮಾನವ ಕತ್ಯಾಕಾಂಡವಾಗಿತ್ತು! ಗಂಡಂದಿರನ್ನು ಮರಕ್ಕೆ, ಕಂಬಕ್ಕೆ ಕಟ್ಟಿಹಾಕಿ ಅವರ ಹೆಂಡತಿಯರನ್ನು ಅವರ ಕಣ್ಣೇದುರಿನಲ್ಲಿ ಮಾನಭಂಗ ಮಾಡಿದರು!! ಆ ರಕ್ಕಸ ಕೃತ್ಯ ಮಾಡಿದ ಮೇಲೆ ಆ ಮಹಿಳೆಯರ, ಕಣ್ಣೆದುರಿಗೇ ಗಂಡಂದಿರನ್ನು ಖಡ್ಗದಿಂದ ತುಂಡರಿಸಿದರು. ಗುಂಡಿಕ್ಕಿ ಕೊಂದರು.

ಆಗ ಅಲ್ಲಿ ಯಾವ ಸರಕಾರಿ ನೌಕರರೂ ಅವರಿಗೆ ರಕ್ಷಣೆ ಕೊಡಲಿಲ್ಲ. ಅಂತಹ ಸಂದರ್ಭದಲ್ಲಿ ಗಾಂಧೀಜಿ ಒಬ್ಬಂಟಿಗರಾಗಿ, ಹಗಲು ರಾತ್ರಿ ಎನ್ನದೆ, ಕತ್ತಲಲ್ಲಿ ಲಾಟೀನು ಹಿಡಿದುಕೊಂಡು ಬರಿಗಾಲಲ್ಲಿ ಮನೆ ಮನೆಗೆ ಹೋಗಿ ಸಾಂತ್ವನ ಹೇಳಿದರು. ಆ ಹತ್ಯಾಕಾಂಡವನ್ನು ನಿಲ್ಲಿಸಿದರು. ಕಲ್ಕತ್ತೆಯ ರಕ್ತದ ಕೆಸರಿನಲ್ಲಿ ಕೋಲೂರಿಕೊಂಡು ಜೊತೆಗೆ ಯಾವ ಅಂಗರಕ್ಷಕರೂ ಇಲ್ಲದೆ ಬೀದಿ ಬೀದಿಯಲ್ಲಿ ನಡೆದು ಜನರಿಗೆ ಹಿಂದೂ-ಮುಸ್ಲಿಂ ಮೈತ್ರಿ ಸಂದೇಶವನ್ನು ಸಾರಿದರು. ಸೌಹಾರ್ದ ಉಂಟು ಮಾಡಿದರು! ಖಡ್ಗಗಳನ್ನು ಕಳಚಿ ಬದಿಗಿಟ್ಟು ಹಿಂದೂ-ಮುಸ್ಲಿಮರು ಅನೋನ್ಯ ಪ್ರೀತಿ ವಿಶ್ವಾಸದಿಂದ ಬಾಳಲು ಪಣತೊಟ್ಟರು. ಹಿಂದೆ ಯಾವ ಬುದ್ಧನೂ, ಜೀಸಸ್ ಕ್ರೈಸ್ತನೂ ಮಾಡದಿದ್ದ ಪವಾಡವನ್ನು ಗಾಂಧಿ ಬಂಗಾಳದಲ್ಲಿ ಮಾಡಿ ತೋರಿಸಿದ್ದರು! ಯಾವ ಸೈನ್ಯದಿಂದಲೂ ಆಗದಿದ್ದ ಕೆಲಸವನ್ನು ಈ ಅರೆಬತ್ತಲೆ ಫಕೀರ ಏಕಾಂಗಿಯಾಗಿ ಸಾಧಿಸಿದ್ದ. ಇದನ್ನು ಕಂಡ ಬಂಗಾಳದ ಅಂದಿನ ಗವರ್ನರ್ ಮಿ. ಆರ್.ಜೆ. ಕೇಸಿ ‘ಗಾಂಧಿ ಈಸ್ ಮೈ ಒನ್ ಮ್ಯಾನ್ ಆರ್ಮಿ ಆಫ್ ಫೀಸ್’ ( ಗಾಂಧಿ ನನ್ನ ಏಕವ್ಯಕ್ತಿ ಶಾಂತಿ ಸೈನ್ಯ) ಎಂದಿದ್ದರು! ಅಂಥದೇ ಪವಾಡವನ್ನು ಗಾಂಧೀಜಿ ಜನವರಿ 1948ರಲ್ಲಿ ದಿಲ್ಲಿಯಲ್ಲೂ ಮಾಡಿದ್ದರು.

ಹಿಂದೂ-ಮುಸ್ಲಿಂ ಸೌಹಾರ್ದ ಸ್ಥಾಪನೆಗಾಗಿಯೇ ದಿಲ್ಲಿಯಲ್ಲಿ ಜನವರಿ 12ರಿಂದ ಆಮರಣ ಉಪವಾಸ ಕೈಗೊಂಡು ನರಮೇಧ ನಿಲ್ಲಿಸಿದ್ದರು!! ಕೊಮು ಸೌಹಾದರ್ ನೆಲೆಸಿದ ಮೇಲೆ ಉಪವಾಸ ನಿಲ್ಲಿಸಿದ್ದರು! ಇಂಥ ಶಾಂತಿದೂತನನ್ನು, ಅಹಿಂಸಾಮೂರ್ತಿಯನ್ನು ಕೋಮು ಸೌಹಾರ್ದದ ಹರಿಕಾರನನ್ನು, ಸಕಲ ಜೀವಾತ್ಮರಿಗೆ ಲೇಸನ್ನು ಬಯಸುವ ಧರ್ಮಾತ್ಮನನ್ನು, ಪ್ರೇಮ ಸಂದೇಶ ವಾಹಕನನ್ನು ಇಂದು ಓರ್ವ ಹಿಂದೂ ದ್ವೇಷ ತುಂಬಿದ ವಿಷಜಂತು ಹತ್ಯೆ ಮಾಡಿತು. ಅದೂ ಹಿಂದೂ ಧರ್ಮ ರಕ್ಷಣೆ ಹೆಸರಿನಲ್ಲಿ! ಹಿಂದುತ್ವದ ಸ್ಥಾಪನೆಗಾಗಿ!!

share
ಕೋ. ಚೆನ್ನಬಸಪ್ಪ
ಕೋ. ಚೆನ್ನಬಸಪ್ಪ
Next Story
X