ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ.30: ಗಣರಾಜ್ಯೋತ್ಸವದ ಅಂಗವಾಗಿ ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್‌ಜೆಇಸಿ) ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಒಗ್ಗೂಡಿ ಕ್ಯಾಂಪಸ್‌ನಲ್ಲಿ ದೇಶಭಕ್ತಿಯ ದಿನವನ್ನು ಆಚರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನ್ಸೆಂಟ್ ಕ್ರಾಸ್ತಾ ಧ್ವಜಾರೋಹಣಗೈದರು.
ಕಾಲೇಜಿನ ನಿರ್ದೇಶಕ ವಂ. ವಿಲ್ಫ್ರೆಡ್ ಪ್ರಕಾಶ್ ಡಿಸೋಜ, ಉಪನಿರ್ದೇಶಕ ವಂ. ಆಲ್ವಿನ್ ರಿಚರ್ಡ್ ಡಿಸೋಜ, ಪ್ರಾಂಶುಪಾಲ ಡಾ.ರಿಯೊ ಡಿಸೋಜ ಹಾಗೂ ಮಾನವ ಸಂಪನ್ಮೂಲ ವ್ಯವಸ್ಥಾಪಕ ರಾಕೇಶ್ ಲೋಬೊ ಉಪಸ್ಥಿತರಿದ್ದರು.
ಕಾಲೇಜಿನ ಭದ್ರತಾ ಸಿಬ್ಬಂದಿ ರಾಷ್ಟ್ರಧ್ವಜಕ್ಕೆ ನಮಿಸಿ, ರಾಷ್ಟ್ರಗೀತೆ ಹಾಡಿದರು.
ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Next Story





