Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧಿಯನ್ನು ಹತ್ಯೆಗೈದ ಕೊಲೆಗಡುಕನನ್ನು...

ಗಾಂಧಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Jan 2021 1:33 PM IST
share
ಗಾಂಧಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜ.30: ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗಾಂಧೀಜಿ ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದು ಸಿದ್ದರಾಮಯ್ಯ ನುಡಿದರು.

ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ  ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ ಎಂದರು.

ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿ ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮು ಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು. ಆದರೆ ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದವರು ಖೇದ ವ್ಯಕ್ತಪಡಿಸಿದರು.

ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ. ಪ್ರಸನ್ನವದನ ಪ್ರದಾನಿ ರೈತರು ಎರಡು ತಿಂಗಳಿನಿಂದ ದಿಲ್ಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಪ್ರದಾನಿಯವರು ಏನೂ ನಡೆದಿಲ್ಲ ಎಂಬಂತೆ ಪ್ರಸನ್ನವದನರಾಗಿದ್ದಾರೆ.  ಕಾಯ್ದೆಗಳು ರೈತರ ಪರ ಎಂದು ರಾಷ್ಟ್ರಪತಿ  ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರಕಾರ ರಾಷ್ಡ್ರಪತಿಯಿಂದ ಸುಳ್ಳು ಹೇಳಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X