ವಿಟ್ಲ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಮಹಿಳೆ ಗಂಭೀರ

ಬಂಟ್ವಾಳ, ಜ.30: ಸರಕಾರಿ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಪ್ರಯಾಣಿಕ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಕರವೀರ ಅಂಗನವಾಡಿ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರಕವೀರ ನಿವಾಸಿ ಪುಷ್ಪಾವತಿ ಗಂಭೀರ ಗಾಯಗೊಂಡ ಮಹಿಳೆ.
ಮನೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಕರವೀರ ಅಂಗನವಾಡಿ ಬಳಿಯ ತಿರುವಿನಲ್ಲಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾರೆನ್ನಲಾಗಿದೆ.
ಡಾಮಾರು ರಸ್ತೆಗೆ ಬಿದ್ದ ಪರಿಣಾಮ ಪುಷ್ಪಾವತಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story





