Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್ಸಾರ್ಟಿಸಿ ನಿಗಮಗಳ ವಿಲೀನ ಇಲ್ಲ:...

ಕೆಎಸ್ಸಾರ್ಟಿಸಿ ನಿಗಮಗಳ ವಿಲೀನ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ವಾರ್ತಾಭಾರತಿವಾರ್ತಾಭಾರತಿ30 Jan 2021 3:51 PM IST
share
ಕೆಎಸ್ಸಾರ್ಟಿಸಿ ನಿಗಮಗಳ ವಿಲೀನ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಮಂಗಳೂರು, ಜ.30: ಕೆಎಸ್ಸಾರ್ಟಿಸಿ ನಾಲ್ಕು ನಿಗಮಗಳ ವಿಲೀನ ಕುರಿತು ಯಾವುದೇ ಪ್ರಸ್ತಾಪ ಇಲ್ಲ ಎಂದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಸಾರಿಗೆಯ ನೌಕರರಿಗೆ ಒಟಿ(ಓವರ್ ಟೈಮ್) ಭತ್ತೆ ನೀಡಲು ಸೂಚನೆ ನೀಡಲಾಗಿದೆ ಎಂದರು.

ಮಂಗಳೂರಿನಲ್ಲಿ ಸಂಚಾರಕ್ಕೆ ಬಾಕಿ ಇರುವ 26 ನರ್ಮ್ ನಗರ ಸಾರಿಗೆ ಓಡಾಟ ಆರಂಭಿಸುವ ಬಗ್ಗೆ ಕೋರ್ಟ್ ತಡೆ ತೆರವಿಗೆ ಪ್ರಯತ್ನ ನಡೆಸಲಾಗುವುದು. ವಿವಿಧ ಸಾರಿಗೆ ಸಮಸ್ಯೆಗಳ ಇತ್ಯರ್ಥಕ್ಕೆ ಸಾರಿಗೆ ಇಲಾಖೆ, ಖಾಸಗಿ ಬಸ್ ಮಾಲಕರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ತ್ವರಿತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ಕೆಎಸ್ಸಾರ್ಟಿಸಿ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿಗೆ ಬಾಕಿಯುಳಿದ ಅರ್ಧ ವೇತನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು. ಅಲ್ಲದೆ ಜನವರಿ ತಿಂಗಳ ವೇತನವನ್ನೂ ಇಷ್ಟರಲ್ಲೇ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೊರೋನ ಲಾಕ್‌ಡೌನ್ ವೇಳೆ 2 ತಿಂಗಳ ಕಾಲ ಸಾರಿಗೆ ಸಂಚಾರ ಸ್ಥಗಿತವಾಗಿತ್ತು. ಆದರೂ ಸರಕಾರ ಸಾರಿಗೆ ನೌಕರರಿಗೆ 2 ತಿಂಗಳ 650 ಕೋಟಿ ರೂ. ವೇತನ ಪಾವತಿಸಿದೆ. ನಂತರ ಹಂತ ಹಂತವಾಗಿ ಸಾರಿಗೆ ಸಂಚಾರ ಆರಂಭವಾದ ಬಳಿಕ 7 ತಿಂಗಳ ವೇತನವನ್ನು ಶೇ.75 ಸರಕಾರ ಹಾಗೂ ಶೇ.25 ನಿಗಮ ಸೇರಿಸಿ ನೀಡಿದೆ. ಇಲ್ಲಿವರೆಗೆ 1,760 ಕೋಟಿ ರೂ. ಮೊತ್ತವನ್ನು ಸರಕಾರದಿಂದ ಪಡೆದು 1.30 ಲಕ್ಷ ಸಾರಿಗೆ ಸಿಬ್ಬಂದಿಗೆ ವೇತನ ನೀಡಲಾಗಿದೆ. ಡಿಸೆಂಬರ್‌ನಲ್ಲಿ ಅರ್ಧ ಸಂಬಳ ಮಾತ್ರ ನೀಡಲಾಗಿದೆ. ಅದನ್ನು ಕೂಡ ಮೂರ್ನಾಲ್ಕು ದಿನಗಳಲ್ಲಿ ಭರ್ತಿಯಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಾಲ್ಕು ದಿನಗಳ ಕಾಲ ಸಾರಿಗೆ ಸಿಬ್ಬಂದಿ ನಡೆಸಿದ ಮುಷ್ಕರ ಬಳಿಕ ಅವರ 10 ಬೇಡಿಕೆಗಳಲ್ಲಿ 9 ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಕೆಲವೇ ದಿನಗಳಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X