Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಯನ್ನು...

ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಯನ್ನು ಸುಧಾರಿಸಲು ವಿಚಾರ ಸಂಕಿರಣ: ಸಚಿವ ಆರ್.ಶಂಕರ್

ವಾರ್ತಾಭಾರತಿವಾರ್ತಾಭಾರತಿ30 Jan 2021 6:49 PM IST
share
ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಯನ್ನು ಸುಧಾರಿಸಲು ವಿಚಾರ ಸಂಕಿರಣ: ಸಚಿವ ಆರ್.ಶಂಕರ್

ರಾಮನಗರ, ಜ.30: ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಗಳ ಸುಧಾರಿಸಿ ರೈತರಿಗೆ ಲಾಭದಾಯಕ ಬೆಳೆಗಳಾಗಿ ಮಾಡಲು ತಿಂಗಳಿಗೆ ಒಂದು ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್.ಶಂಕರ್ ತಿಳಿಸಿದರು.

ತೆಂಗು ಹಾಗೂ ರೇಷ್ಮೆ ಬೆಳೆಗಳಲ್ಲಿ ಉಂಟಾಗುವ ರೋಗಗಳು ಹಾಗೂ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಯಲು ಶನಿವಾರ ವಿಜ್ಞಾನಿಗಳು ಹಾಗೂ ಅಧಿಕಾರಿಗಳೊಂದಿಗೆ ಇಲ್ಲಿನ ಭೈರಮಂಗಲದ ಚಿನ್ನಸ್ವಾಮಿ ಅವರ ತೆಂಗಿನ ತೋಟಕ್ಕೆ ಹಾಗೂ ಮಧು ಅವರು ಬೆಳೆದಿರುವ ರೇಷ್ಮೆ ಬೆಳೆಯನ್ನು ಪರಿಶೀಲಿಸಿದರು.

ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ರಾಜೇಂದ್ರ ಪ್ರಸಾದ್ ಅವರು ತೆಂಗಿನಲ್ಲಿ 4 ವಿವಿಧ ಬಿಳಿ ನೊಣದ ಪ್ರಭೇದಗಳಿಂದ ಬಾಧೆ ಉಂಟಾಗಿ ಇಳುವರಿಗೆ ತೊಂದರೆಯಾಗುತ್ತಿದೆ. ಈ ರೋಗ ನಿವಾರಿಸಲು ರಾಸಾಯನಿಕ ಕೀಟನಾಶಕ ಸಿಂಪಡಿಸಬಾರದು. ಈ ರೋಗ ನಿವಾರಿಸಲು ಶಿಲೀಂದ್ರನಾಶಕ ಐಸೈಡಿಯಾ ಸಿಂಪಡಿಸಬೇಕು ಹಾಗೂ ಪರತಂತ್ರ ಜೀವಿಗಳನ್ನು ಉಪಯೋಗಿಸಬೇಕು ಎಂದರು.

ಸಚಿವರು ಸ್ಥಳದಲ್ಲಿಯೇ ಐಸೈಡಿಯಾ ಸಿಂಪಡಣೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ಪಡೆದರು. ರೈತರು ಇವುಗಳ ಸಿಂಪರಣೆಗೆ ಬೇಕಿರುವ ಯಂತ್ರೋಪಕರಣಗಳನ್ನು ಯಂತ್ರಧಾರೆ ಯೋಜನೆಯಡಿ ಬಾಡಿಗೆಗೆ ಒದಗಿಸಿಕೊಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಯಿಸಿದ ಶಂಕರ್, ಅಧಿಕಾರಿಗಳಿಗೆ ತೆಂಗು ಬೆಳೆಗಾರರ ಸಂಖ್ಯೆ, ತೆಂಗು ಬೆಳೆಯ ವಿಸ್ತೀರ್ಣ ಹಾಗೂ ಬೇಕಿರುವ ಸಲಕರಣೆಗಳ ವಿವರ ನೀಡಿದರೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ತಿಳಿಸಿದರು.

ವಿಚಾರ ಸಂಕಿರಣ: ಪ್ರತಿ ತಿಂಗಳು ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಗಳ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲು ಚಿಂತಿಸಲಾಗುತ್ತಿದೆ. ವಿಚಾರ ಸಂಕಿರಣದಲ್ಲಿ ಬೆಳೆಯಲ್ಲಿ ಲಾಭದಾಯಕ ಹಾಗೂ ಸಂಕಷ್ಟದಲ್ಲಿರುವ ರೈತರು ಭಾಗವಹಿಸಿ ತಮ್ಮ ಅನಿಸಿಕೆ ಹಾಗೂ ಸರಕಾರದಿಂದ ಬೇಕಿರುವ ಸಹಾಯಗಳ ಬಗ್ಗೆ ಚರ್ಚಿಸಬೇಕು ಎಂದ ಅವರು, ತೋಟಗಾರಿಕೆ ಬೆಳೆ ಹಾಗೂ ರೈತರ ತೊಂದರೆಗಳ ಬಗ್ಗೆ ತಿಳಿದುಕೊಳ್ಳಲು ಜಿಲ್ಲೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಎ.ಮಂಜುನಾಥ್, ರೇಷ್ಮೆ ಇಲಾಖೆ ಉಪನಿರ್ದೇಶಕ ಬಿ.ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ  ಜಂಟಿ ನಿರ್ದೇಶಕ ಡಾ.ಬಿ.ಎನ್. ಪ್ರಸಾದ್, ಹಿರಿಯ ಸಹಾಯಕ ನಿರ್ದೇಶಕ ಶಂಕರ್, ಪ್ರಕಾಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X