Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’...

‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ ಯೋಜನೆಗೆ ಉಡುಪಿಯಲ್ಲಿ ಚಾಲನೆ

ದಿನವಿಡೀ ನಾಲ್ಕೂರು ಗ್ರಾಪಂ ಜನರ ಸಮಸ್ಯೆ ಆಲಿಸಿದ ಡಿಸಿ

ವಾರ್ತಾಭಾರತಿವಾರ್ತಾಭಾರತಿ30 Jan 2021 7:20 PM IST
share
‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ ಯೋಜನೆಗೆ ಉಡುಪಿಯಲ್ಲಿ ಚಾಲನೆ

ನಾಲ್ಕೂರು, ಕುಡುಬಿ, ಸ್ಕೂಲ್-
ಉಡುಪಿ, ಜ.30: ರಾಜ್ಯ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯಾದ್ಯಂತ ಅನುಷ್ಠಾನಗೊಳಿಸುವ ಪೂರ್ವಭಾವಿಯಾಗಿ ಇಂದು ಉಡುಪಿ ಜಿಲ್ಲೆಯಲ್ಲಿ ಅದನ್ನು ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಶನಿವಾರ ದಿನವಿಡಿ ವಿವಿಧ ಕಾರ್ಯಕ್ರಮಗಳ ಮೂಲಕ ಅದಕ್ಕೆ ಚಾಲನೆ ನೀಡಿದರು.

ಉಡುಪಿಯಲ್ಲಿ ನಡೆದ ಕಾರ್ಯಕ್ರಮದ ಸಾಧಕ-ಬಾಧಕಗಳ ವರದಿಯ ಆಧಾರದಲ್ಲಿ ಮುಂದಿನ ತಿಂಗಳಿನಿಂದ ಇದನ್ನು ಪ್ರತಿ ಮೂರನೇ ಶನಿವಾರ ರಾಜ್ಯದಾದ್ಯಂತ ಜಾರಿಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ತಿಳಿಸಿದರು.

ಪ್ರಧಾನವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಕಂದಾಯ ಇಲಾಖೆಯ ನೂತನ ಕಾರ್ಯಕ್ರಮ ಇದಾಗಿದ್ದು, ಇಲ್ಲಿ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಸಾಧ್ಯವಿದ್ದರೆ ಸ್ಥಳದಲ್ಲೇ ಪರಿಹಾರ ನೀಡಿ, ಇಲ್ಲದಿದ್ದರೆ ಸಮಯ ಮಿತಿಯೊಳಗೆ ಅವುಗಳಿಗೆ ಪರಿಹಾರ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದವರು ವಿವರಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ, ತಾಲೂಕಿನ ತಹಶೀಲ್ದಾರರು ಗ್ರಾಮಕ್ಕೆ ಭೇಟಿ ನೀಡಿದ್ದು, ಇವರ ಮೂಲಕ ಜನರ ಬಹುಕಾಲದ ದೂರು, ಸಮಸ್ಯೆಗಳಿಗೆ ಸಂಬಂಧಿಸಿ ಪರಿಹಾರ ಕೋರಿ ನೀಡಿದ ಅರ್ಜಿಗಳ ವಿಚಾರಣೆ ನಡೆದು, ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ನೀಡಲಾಯಿ ತಲ್ಲದೇ ಇನ್ನುಳಿದವುಗಳಿಗೆ ಸ್ಪಷ್ಟ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದ ಮೂಲಕ ಗ್ರಾಮದ ಸಮಸ್ಯೆಗಳನ್ನು ಅರಿಯಲು, ಊರಿನ ಜನರೊಂದಿಗೆ ಬೆರೆತು ಅವರ ಸಮಸ್ಯೆ ಅರಿಯಲು ಸಾಧ್ಯವಾಗಲಿದೆ. ಕಾರ್ಯಕ್ರಮದಲ್ಲಿ ಜನರ ಅರ್ಜಿಗಳ ವಿಚಾರಣೆ ನಡೆಯುವುದು ಮಾತ್ರವಲ್ಲದೇ, ಊರಿನ ಶಾಲೆ, ವಿವಿಧ ಕಚೇರಿ, ಅಂಗನವಾಡಿ, ವಿವಿಧ ವರ್ಗಗಳ ಕಾಲನಿ ಗಳಿಗೆ ಭೇಟಿ ನೀಡಲಾಗುತ್ತದೆ. ಅಲ್ಲದೇ ಗ್ರಾಮದಲ್ಲಿ ನಡೆಯುವ ಕಾಮಗಾರಿಗಳ ಪರಿಶೀಲನೆ, ಊರಿನ ಸಶ್ಮಾನಕ್ಕೆ ಭೇಟಿ ನೀಡಿ ಪರಿಶೀಲನೆ, ಇಲ್ಲದಿದ್ದರೆ ಅದರ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗು ತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದ ಭಾಗವಾಗಿ ಮೊದಲು ನಾಲ್ಕೂರು ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಶಾಲೆಯ ಮಕ್ಕಳ ಜೊತೆ ಸಂವಾದ ನಡೆಸಿದರು. ಶಾಲೆಯಲ್ಲಿ ಹಣ್ಣಿನ ಗಿಡ ನೆಟ್ಟು ಪರಿಸರ ರಕ್ಷಣೆಯ ಅಗತ್ಯತೆಯನ್ನು ತಿಳಿ ಹೇಳಿದರು. ಎಸೆಸೆಲ್ಸಿ ಪರೀಕ್ಷೆ ಎದುರಿಸುವ ಮಕ್ಕಳಿಗೆ ಧೈರ್ಯ ತುಂಬಿ, ಭವಿಷ್ಯದ ಬಗ್ಗೆ ಕನಸು ಕಟ್ಟಲು ಸ್ಪೂರ್ತಿ ತುಂಬಿದರು.

ಬಳಿಕ ನಾಲ್ಕೂರು ಗ್ರಾಮ ಪಂಚಾಯತ್‌ನ ಸಮುದಾಯ ಭವನದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೊದಲು ಸ್ವೀಕರಿಸಿದ 57 ಅರ್ಜಿಗಳು ಹಾಗೂ ಇಂದು ಸ್ವೀಕರಿಸಿದ ಅರ್ಜಿಗಳೊಂದಿಗೆ ಗ್ರಾಮಸ್ಥರ ಒಟ್ಟು 147 ಅರ್ಜಿಗಳ ವಿಚಾರಣೆ ನಡೆಸಿದರು. ಮಹಿಳೆಯರು, ಯುವಕ-ಯುವತಿಯರು ಸೇರಿದಂತೆ ಗ್ರಾಮದ ನೂರಾರು ಮಂದಿ ಅಲ್ಲಿ ಸೇರಿ ತಮ್ಮ ಹಾಗೂ ಗ್ರಾಮದ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಹೇಳಿಕೊಂಡರು.

ಮಧ್ಯಾಹ್ನದ ಬಳಿಕ ಕಜ್ಕೆಯಲ್ಲಿರುವ ಕುಡುಬಿ ಜನಾಂಗದ ಕಾಲನಿಗೆ ಭೇಟಿ ನೀಡಿ ಗುಂಪು ಚರ್ಚೆ ನಡೆಸಿದರಲ್ಲದೇ ಅವರ ಸಮಸ್ಯೆಗಳನ್ನು ಅರಿತುಕೊಳ್ಳುವ ಅದಕ್ಕೆ ಪರಿಹಾರ ನೀಡುವ ಪ್ರಯತ್ನ ನಡೆಸಿದರು. ಬಳಿಕ ಮಾರಾಳಿ ದಲಿತ ಕಾಲನಿಗೆ ಭೇಟಿ ನೀಡಿ ಅಲ್ಲೂ ಜನರ ಸಮಸ್ಯೆ ಆಲಿಸಿದರು. ಹೆಸ್ಕುಂದದ ಬೊಂಬೈ ನಾಯ್ಕರ ಮನೆ ಆವರಣದಲ್ಲಿ ಪರಿಸರದ ಜನರ ಸಮಸ್ಯೆ ಆಲಿಸಿದರೆ, ನಾಲ್ಕೂರಿನ ಸ್ಮಶಾನಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಖುದ್ದಾಗಿ ಅರಿತು ಕೊಂಡರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು, ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಬ್ರಹ್ಮಾವರ ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ವಿ. ಇಬ್ರಾಹಿಂಪುರ, ಬ್ರಹ್ಮಾವರ ಆರ್‌ಐ ಲಕ್ಷ್ಮೀನಾರಾಯಣ ಭಟ್, ಕೋಟ ಆರ್‌ಐ ರಾಜು, ಗ್ರಾಮ ಕರಣಿಕರಾದ ಚೆಲುವರಾಜ್, ರಾಜಾ ಸಾಬ್, ಶಿವರಾಜ ಕಟ್ಟಗಿ, ರಾಘವೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X