Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ್ದ...

ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ್ದ ಸ್ಫೋಟದಲ್ಲಿ ‘ಒಳಗಿನವರ ಕೈವಾಡ’ವಿರುವ ಶಂಕೆ

ದಿಲ್ಲಿ ಪೊಲೀಸ್ ವಿಶೇಷ ಘಟಕ

ವಾರ್ತಾಭಾರತಿವಾರ್ತಾಭಾರತಿ30 Jan 2021 7:24 PM IST
share
ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ್ದ ಸ್ಫೋಟದಲ್ಲಿ ‘ಒಳಗಿನವರ ಕೈವಾಡ’ವಿರುವ ಶಂಕೆ

ಹೊಸದಿಲ್ಲಿ,ಜ.30: ಇಲ್ಲಿಯ ಇಸ್ರೇಲ್ ರಾಯಭಾರ ಕಚೇರಿಯ ಹೊರಗೆ ಶುಕ್ರವಾರ ಸಂಭವಿಸಿದ್ದ ಕಡಿಮೆ ತೀವ್ರತೆಯ ಸ್ಫೋಟದ ಹಿಂದೆ ‘ಒಳಗಿನವರ ಕೈವಾಡ ’ವಿರುವ ಬಗ್ಗೆ ದಿಲ್ಲಿ ಪೊಲೀಸ್‌ನ ವಿಶೇಷ ಘಟಕವು ಶಂಕಿಸಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ. ಘಟನಾ ಸ್ಥಳದಲ್ಲಿ ಪತ್ರವೊಂದು ಪತ್ತೆಯಾಗಿದ್ದು,ಇದೊಂದು ‘ಟ್ರೇಲರ್’ ಆಗಿದೆ ಎಂದು ಅದರಲ್ಲಿ ಬಣ್ಣಿಸಲಾಗಿದೆ.

ರಾಯಭಾರ ಕಚೇರಿಯಲ್ಲಿ ನಿಯೋಜಿತ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳ ಪಟ್ಟಿಯೊಂದನ್ನು ಪೊಲೀಸರು ಸಿದ್ಧಪಡಿಸಿದ್ದು,ಅವರನ್ನು ಪ್ರಶ್ನಿಸುತ್ತಿದ್ದಾರೆ. ಒಳಗಿನವರೇ ಯಾರೋ ಈ ಸ್ಫೋಟದ ಹಿಂದಿರುವಂತಿದೆ ಮತ್ತು ಅದು ಸಾಧ್ಯವೂ ಇದೆ ಎಂದು ತಿಳಿಸಿದ ಪೊಲೀಸ್ ಮೂಲವೊಂದು,ಶುಕ್ರವಾರ ರಜೆಯಲ್ಲಿದ್ದ ವಿಭಾಗವಾರು ಸಿಬ್ಬಂದಿಗಳ ವಿವರಗಳನ್ನು ಸಂಗ್ರಹಿಸಿದ್ದೇವೆ ಮತ್ತು ಕಚೇರಿಯಿಂದ ಬೇಗನೆ ಹೊರಬಿದ್ದಿದ್ದ ಸಿಬ್ಬಂದಿಗಳ ಬಗ್ಗೆ ತಿಳಿದುಕೊಳ್ಳಲು ಹಾಜರಿ ರಿಜಿಸ್ಟರ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿಯ ಸಿಸಿಟಿವಿ ಪೂಟೇಜ್‌ಗಳನ್ನೂ ಪರಿಶೀಲಿಸಲಾಗುತ್ತದೆ ಎಂದು ಹೇಳಿದೆ.

ಸ್ಫೋಟ ಸಂಭವಿಸಿದ್ದ ಸಮಯದ ಆಸುಪಾಸಿನಲ್ಲಿ ತಾನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ರಾಯಭಾರ ಕಚೇರಿಯ ಬಳಿಗೆ ಇಳಿಸಿದ್ದೆ ಎಂದು ಕ್ಯಾಬ್ ಚಾಲಕನೋರ್ವ ಶುಕ್ರವಾರ ರಾತಿ ವಿಶೇಷ ಘಟಕಕ್ಕೆ ಕರೆ ಮಾಡಿ ತಿಳಿಸಿದ್ದ. ಪೊಲೀಸರ ಬಳಿಯಲ್ಲಿರುವ ಸೆಕ್ಯುರಿಟಿ ಕ್ಯಾಮರಾದ ಫೂಟೇಜ್ ಸ್ಫೋಟ ಸಂಭವಿಸುವುದಕ್ಕೆ ಕೆಲವೇ ಕ್ಷಣಗಳ ಮುನ್ನ ರಾಯಭಾರ ಕಚೇರಿಯ ಬಳಿ ಕ್ಯಾಬ್‌ವೊಂದರ ಇರುವಿಕೆಯನ್ನು ತೋರಿಸಿದೆ. ಆದರೆ ಚಾಲಕ ಮತ್ತು ಇಬ್ಬರು ಪ್ರಯಾಣಿಕರನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಯಾವುದೇ ದೃಢವಾದ ಸಾಕ್ಷ ಲಭಸಿಲ್ಲ,ಹೀಗಾಗಿ ಅದೊಂದು ಹುಸಿಕರೆಯಾಗಿತ್ತು ಎಂದು ಪರಿಗಣಿಸಲಾಗಿದೆ.

ಸ್ಫೋಟದಿಂದಾಗಿ ಯಾರೂ ಗಾಯಗೊಂಡಿಲ್ಲ.

ಇಸ್ರೇಲ್ ರಾಯಭಾರಿ ಕಚೇರಿ ಮತ್ತು ರಾಜತಾಂತ್ರಿಕರಿಗೆ ಪೂರ್ಣ ರಕ್ಷಣೆಯನ್ನು ಒದಗಿಸಲಾಗುವುದು ಮತ್ತು ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ ಅವರು ಟ್ವೀಟಿಸಿದ್ದಾರೆ.

 ತಮ್ಮ ಎಲ್ಲ ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ಸುರಕ್ಷಿತವಾಗಿದ್ದಾರೆ ಮತ್ತು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 29ನೇ ವರ್ಷಾಚರಣೆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಇಸ್ರೇಲ್ ರಾಯಭಾರಿ ರಾನ್ ಮಲ್ಕಾ ಅವರು ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

 ಪೊಲೀಸರು ಘಟನಾ ಸ್ಥಳದಿಂದ ಸಹಿಯಿಲ್ಲದ ಪತ್ರವೊಂದನ್ನು ವಶಪಡಿಸಿಕೊಂಡಿದ್ದು,ಅದರ ಅಧಿಕೃತತೆಯನ್ನು ಪರಿಶೀಲಿಸುತ್ತಿದ್ದಾರೆ. ಸ್ಫೋಟವನ್ನು ಕೇವಲ ಟ್ರೇಲರ್ ಎಂದು ಬಣ್ಣಿಸಿರುವ ಪತ್ರವಿದ್ದ ಲಕೋಟೆಯ ಮೇಲೆ ಇಸ್ರೇಲ್ ರಾಯಭಾರಿಯನ್ನು ಉಲ್ಲೇಖಿಸಲಾಗಿದೆ. ಇರಾನಿನ ಜನರಲ್ ಕಾಸಿಂ ಸೊಲೈಮಾನಿ ಮತ್ತು ಪರಮಾಣು ವಿಜ್ಞಾನಿ ಮೊಹ್ಸೀನ್ ಫಕೀರಝಾದೆ ಅವರನ್ನು ‘ಹುತಾತ್ಮರು ’ಎಂದು ಬಣ್ಣಿಸಿದೆ. ಈ ಇಬ್ಬರು ಇರಾನಿಗಳು ಕಳೆದ ವರ್ಷ ಸಂಭವಿಸಿದ್ದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕೊಲ್ಲಲ್ಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X