ಮಂಗಳೂರು ಏರ್‌ಪೋರ್ಟ್‌ನಲ್ಲಿ 29 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು, ಜ.30: ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ 587 ಗ್ರಾಂ ತೂಕದ, 29.41 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಕಾಸರಗೋಡಿನ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





