ಗೋಡ್ಸೆ ಸಂತಾನದ ಆಳ್ವಿಕೆಯಿಂದ ಸಂವಿಧಾನದ ಹತ್ಯೆ: ದೇವನೂರ ಮಹಾದೇವ

ಮೈಸೂರು, ಜ.30: ದೇಶದಲ್ಲಿ ಗೋಡ್ಸೆ ಸಂತಾನವೇ ಆಳ್ವಿಕೆ ಮಾಡುತ್ತಾ ಇದೆ. ಒಂದೆಡೆ ಎಲ್ಲರನ್ನೂ ಹತ್ಯೆ ಮಾಡುತ್ತಾ ಬರುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನ, ಕಾರ್ಯಾಂಗ, ಚುನಾವಣಾ ಆಯೋಗ ಮತ್ತು ನ್ಯಾಯಾಂಗದ ಹತ್ಯೆ ಆಗುತ್ತಿದೆ ಎಂದು ಖ್ಯಾತ ಸಾಹಿತಿ ದೇವನೂರ ಮಹಾದೇವ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಗಾಂಧಿವೃತ್ತದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ, ಸಂವಿಧಾನ ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳೊಡಗೂಡಿ ಕೃಷಿ ಕಾಯ್ದೆ ಜಾರಿ ವಿರೋಧಿಸಿ, ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ನಡೆದ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಸಾರ್ವಜನಿಕ ಸಂಸ್ಥೆಗಳು, ಮಾಧ್ಯಮಗಳು, ಸಾರ್ವಜನಿಕ ಆಸ್ತಿ ಪಾಸ್ತಿ, ಎಲ್ಲವೂ ಹತ್ಯೆಯಾಗುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಹಿರಿಯ ಸಮಾಜವಾದಿ ಪ.ಮಲ್ಲೇಶ್, ರೈತ ಮುಖಂಡ ಹೊಸಕೋಟೆ ಬಸವ ರಾಜು, ಪಿ.ಮರಂಕಯ್ಯ, ಬೊಕ್ಕಳ್ಳಿ ನಂಜುಂಡಸ್ವಾಮಿ, ಹೆಜ್ಜಿಗೆ ಪ್ರಕಾಶ್, ಸಿದ್ದಪ್ಪ, ದಸಂಸ ಮುಖಂಡರಾದ ಬೆಟ್ಟಯ್ಯ ಕೋಟೆ, ಶಂಭುಲಿಂಗಸ್ವಾಮಿ, ಚೋರನಹಳ್ಳಿ ಶಿವಣ್ಣ, ಕೆ.ವಿ.ದೇವೇಂದ್ರ, ಆಲಗೂಡು ಶಿವಕುಮಾರ್, ಕಲ್ಲಹಳ್ಳಿ ಕುಮಾರ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ, ಅಭಿರುಚಿ ಗಣೇಶ್, ಪುನೀತ್, ಕಾರ್ಮಿಕ ಮುಖಂಡರಾದ ಚಂದ್ರಶೇಖರ ಮೇಟಿ, ರವಿ, ಉಮಾದೇವಿ, ಪ್ರಗತಿಪರ ಚಿಂತಕರಾದ ಲಕ್ಷ್ಮೀನಾರಾಯಣ್, ರತಿರಾವ್, ಜೆ.ಪಿ.ಬಸವರಾಜು, ನಾ.ದಿವಾಕರ, ಕುಡ್ಲಾಪುರ ಕುಮಾರಸ್ವಾಮಿ, ಗೋವಿಂದರಾಜು ಇನ್ನಿತರರು ಉಪಸ್ಥಿತರಿದ್ದರು.









