ಪ್ರಜಾಪ್ರಭುತ್ವ ಘನತೆ ಹರಿದೆಸೆದ ಬಿಜೆಪಿ: ಪ್ರಿಯಾಂಕಾ ಗಾಂಧಿ ಟೀಕೆ

ಹೊಸದಿಲ್ಲಿ, ಜ.30: ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ 6 ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿಯು ಪ್ರಜಾಪ್ರಭುತ್ವದ ಘನತೆಯನ್ನು ಚೂರು ಚೂರಾಗಿಸಿದೆ ಎಂದು ಹೇಳಿದ್ದಾರೆ.
ಎಫ್‌ಐಆರ್ ದಾಖಲಿಸಿ ಜನಪ್ರತಿನಿಧಿಗಳು ಹಾಗೂ ಪತ್ರಕರ್ತರನ್ನು ಬೆದರಿಸುವ ಬಿಜೆಪಿ ಸರಕಾರದ ಧೋರಣೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಪ್ರಿಯಾಂಕಾ ಹೇಳಿದ್ಧಾರೆ. ಪ್ರಜಾಪ್ರಭುತ್ವವನ್ನು ಗೌರವಿಸುವುದು ಸರಕಾರದ ವಿಶೇಷಾಧಿಕಾರವಲ್ಲ, ಜವಾಬ್ದಾರಿಯಾಗಿದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Next Story





