Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಮಂಡಲದಲ್ಲಿ ಕಾಯ್ದೆಗೆ ತಿದ್ದುಪಡಿ...

ವಿಧಾನಮಂಡಲದಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ: ಎಸ್.ಆರ್.ವಿಶ್ವನಾಥ್

‘ಬಿಡಿಎ ಸಿಬ್ಬಂದಿಗೆ ವರ್ಗಾವಣೆ ಬಿಸಿ’

ವಾರ್ತಾಭಾರತಿವಾರ್ತಾಭಾರತಿ31 Jan 2021 12:05 AM IST
share

ಬೆಂಗಳೂರು, ಜ.30: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಹಲವಾರು ವರ್ಷಗಳಿಂದ ಜಡ್ಡುಗಟ್ಟಿ ಕುಳಿತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮಹತ್ವದ ನಿರ್ಧಾರವನ್ನು ಶನಿವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರದ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಸ್.ಆರ್.ವಿಶ್ವನಾಥ್, ನೌಕರರು ಮತ್ತು ಕೆಲವು ಅಧಿಕಾರಿಗಳು ಬಿಡಿಎದಲ್ಲಿ ನೇಮಕಾತಿ ಆಗಿ ಇಲ್ಲಿಯೆ ನಿವೃತ್ತಿ ಹೊಂದುತ್ತಿದ್ದಾರೆ. ಇವರಲ್ಲಿ ಕೆಲವರು ಜಡ್ಡುಗಟ್ಟಿದಂತಾಗಿದ್ದು, ಹಲವಾರು ಅಕ್ರಮಗಳನ್ನು ಎಸಗುವ ಮೂಲಕ ಸಂಸ್ಥೆಗೆ ಕಪ್ಪು ಚುಕ್ಕೆ ತರುತ್ತಿದ್ದಾರೆ. ಇದರಿಂದ ಸಂಸ್ಥೆಗೆ ನಷ್ಟವಾಗುತ್ತಿದೆ. ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಪ್ರತಿಪಾದಿಸಿದರು.

ಇಂತಹ ನೌಕರರು ಮತ್ತು ಅಧಿಕಾರಿಗಳನ್ನು ಬೇರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲು ಬಿಡಿಎ ಕಾಯ್ದೆಯಲ್ಲಿ ಇದುವರೆಗೆ ಅವಕಾಶವಿರಲಿಲ್ಲ. ಆದುದರಿಂದ, ವರ್ಗಾವಣೆಗೆ ಅನುವು ಆಗುವ ರೀತಿಯಲ್ಲಿ ಬಿಡಿಎ ಕಾಯ್ದೆ 1976ರ ಕಲಂ 50 ಕ್ಕೆ ಉಪ ಕಲಂ 3 ಅನ್ನು ಹೊಸದಾಗಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ: ಈ ಕಾಯ್ದೆಗೆ ತಿದ್ದುಪಡಿ ತರಲು ವಿಧಾನಮಂಡಲದ ಅನುಮತಿ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಅಂಗೀಕಾರ ಪಡೆಯುವುದಾಗಿ ವಿಶ್ವನಾಥ್ ತಿಳಿಸಿದರು.

ಕಾಯ್ದೆಗೆ ತಿದ್ದುಪಡಿ ತಂದ ನಂತರ ಜಡ್ಡುಗಟ್ಟಿದ ಅಧಿಕಾರಿಗಳು ಮತ್ತು ನೌಕರರನ್ನು ಕನಿಷ್ಠ ಒಂದು ವರ್ಷ ಮತ್ತು ಗರಿಷ್ಠ ಮೂರು ವರ್ಷಗಳವರೆಗೆ ರಾಜ್ಯದ ಇತರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ ಅವರು, ಮೂರು ವರ್ಷಗಳ ನಂತರ ಮತ್ತೆ ಬಿಡಿಎಗೆ ವರ್ಗಾವಣೆ ಆಗಬೇಕಾದರೆ ಆ ಬಗ್ಗೆ ಪ್ರಾಧಿಕಾರದ ಮಂಡಳಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

ಕೆಂಪೇಗೌಡ ಬಡಾವಣೆ ಮೂಲಸೌಕರ್ಯಕ್ಕೆ 650 ಕೋಟಿ ರೂಪಾಯಿ: ಉದ್ದೇಶಿತ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 650 ಕೋಟಿ ರೂಪಾಯಿಗಳನ್ನು ಸಭೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಇದುವರೆಗೆ ಬಡಾವಣೆಯಲ್ಲಿ ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ವಿಸ್ತೃತ ವರದಿಯನ್ನು ಒಂದು ತಿಂಗಳೊಳಗೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ರೆರಾ ಒಪ್ಪಂದದ ಪ್ರಕಾರ ಈ ವರ್ಷದ ಡಿಸೆಂಬರ್ ವೇಳೆಗೆ ಕೆಂಪೇಗೌಡ ಬಡಾವಣೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಬದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಹಳೆಯ ಬಡಾವಣೆಗಳಲ್ಲಿ ಒಂದಾಗಿರುವ ಬನಶಂಕರಿ 6ನೆ ಹಂತ ಬಡಾವಣೆಗೆ ಕಾವೇರಿ ನೀರು ಪೂರೈಸುವುದು ವಿಳಂಬವಾಗಿತ್ತು ಎಂದು ಅವರು ಹೇಳಿದರು.

ಈ ಬಗ್ಗೆ ಅಲ್ಲಿನ ನಾಗರಿಕರು ಹಲವು ಬಾರಿ ಮನವಿಗಳನ್ನೂ ಸಲ್ಲಿಸಿದ್ದರು. ಈ ಭಾಗಕ್ಕೆ ಕುಡಿಯುವ ನೀರು ಪೂರೈಸಲು 168 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಪೈಕಿ ಬಿಡಿಎ ಮೂರನೇ ಒಂದು ಭಾಗದಷ್ಟು ಹಣವನ್ನು ಬೆಂಗಳೂರು ಜಲಮಂಡಳಿಗೆ ನೀಡಲಿದ್ದು, ತಕ್ಷಣವೇ ನೀರು ಪೂರೈಕೆ ಕಾಮಗಾರಿಯನ್ನು ಕೈಗೊಳ್ಳುವಂತೆ ಜಲಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಶಿವರಾಮ ಕಾರಂತ ಬಡಾವಣೆಗೆ ಡಿಪಿಆರ್‍ಗೆ ನಿರ್ಧಾರ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ಬಡಾವಣೆಯ ಸಾಧಕ ಬಾಧಕಗಳನ್ನು ಪರಿಶೀಲಿಸಿ ವರದಿ ನೀಡಲು ಮೂವರು ನಿವೃತ್ತ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಅದರಂತೆ ಸಮಿತಿಯು ಕಾರ್ಯಪ್ರವೃತ್ತವಾಗಿದೆ. ಮತ್ತೊಂದೆಡೆ ಬಿಡಿಎ ಬಡಾವಣೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದೆ. ಇದಕ್ಕೆ ಪೂರಕವಾಗಿ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಕನ್ಸಲ್ಟೆನ್ಸಿಯನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ವಿಶ್ವನಾಥ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X