ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಉದ್ಘಾಟನೆ

ಕಡಬ, ಜ.31: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ರವಿವಾರ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ ಇಂದು ಬೆಳಗ್ಗೆ ಉದ್ಘಾಟನೆಗೊಂಡಿತು.
ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಶಿಬಿರವನ್ನು ಉದ್ಘಾಟಿಸಿದರು. ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಉದ್ಘಾಟಿಸಲಾಯಿತು. ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಳ್, ಜಿಪಂ ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಹಾಗೂ ಇತರ ಅತಿಥಿಗಳನ್ನು ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಸಂಭ್ರಮದಿಂದ ಭಾಗಿಯಾಗಿರುವ ಸ್ಥಳೀಯರು
ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗ್ರತಿ ಶಿಬಿರವು ಸ್ಥಳೀಯರ ಸಂಭ್ರಮಕ್ಕೆ ಸಾಕ್ಷಿಯಾಯಿತು.
ಕಳೆದ ಕೆಲ ದಿನಗಳಿಂದ ಸಿದ್ಧತೆಗಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಕೊಂಡಿದ್ದ ಸಿರಿಬಾಗಿಲು ಮತ್ತು ಕೊಂಬಾರು ಗ್ರಾಮಸ್ಥರು ಇಂದು ಜಾತ್ರೆ ಸಮಾರಂಭದಂತೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.
ಕೊಂಬಾರಿನ ದ.ಕ.ಜಿ.ಪಂ. ಉನ್ನತ ಹಿ.ಪ್ರಾ. ಶಾಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಆರೋಗ್ಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ.
ಶಾಲೆಯ ಆವರಣದಲ್ಲಿ ಪಲ್ಸ್ ಪೋಲಿಯೊ ಕೇಂದ್ರವನ್ನು ಕೂಡ ತೆರೆಯಲಾಗಿದೆ. ಎ.ಜೆ. ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ಶಿಬಿರದಲ್ಲಿ ಗ್ರಾಮಸ್ಥರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರೆಡ್ ಕ್ರಾಸ್ ನಿಂದ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತ ದಾನದ ಮೂಲಕವೂ ಗ್ರಾಮಸ್ಥರು ಗಮನ ಸೆಳೆದರು.
ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಬಿಳಿ ವಸ್ತ್ರದ ಮೇಲೆ ಸಹಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿಲಾಗಿದೆ.
ಗ್ರಾಮ ವಾಸ್ತವ್ಯ ದ ಹಿನ್ನೆಲೆಯಲ್ಲಿ ಕೊಂಬಾರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಂಕದಕಟ್ಟೆಯಿಂದ ರಸ್ತೆಗೆ ತೇಪೆ ಕಾರ್ಯ ನಿನ್ನೆ ನಡೆಸಲಾಗಿದೆ. ಗ್ರಾಮೀಣಾಭಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವೇದಿಕೆಯಲ್ಲಿ ಆರಂಭದಲ್ಲಿ ಯೋಗಗುರು ಡಾ. ಜಗದೀಶ್ ಶೆಟ್ಟಿ ಯೋಗ ತರಬೇತಿ ನೀಡಿದರು.






.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
_0.gif)

