Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟೊಯೋಟಾ ಕಾರ್ಖಾನೆ ಕಾರ್ಮಿಕರ ಸಮಸ್ಯೆ...

ಟೊಯೋಟಾ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಪರಿಹರಿಸಲು ಸಿಎಂ ತಕ್ಷಣ ಮಧ್ಯಪ್ರವೇಶಿಸಲಿ: ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 Jan 2021 1:29 PM IST
share
ಟೊಯೋಟಾ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಪರಿಹರಿಸಲು ಸಿಎಂ ತಕ್ಷಣ ಮಧ್ಯಪ್ರವೇಶಿಸಲಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜ.31: ಟೊಯೋಟಾ ಕಾರ್ಖಾನೆಯ ಬಿಡದಿ ಘಟಕದ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಲು ಮುಖ್ಯಮಂತ್ರಿ ಕೂಡಲೇ ಮಧ್ಯೆಪ್ರವೇಶ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ  ಒತ್ತಾಯಿಸಿದ್ದಾರೆ.

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ  ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಭೇಟಿ ಮಾಡಿ ಅಹವಾಲು ಆಲಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಬಿಡದಿಗೆ ಆಗಮಿಸಿದ ಸಿದ್ದರಾಮಯ್ಯರನ್ನು ಬೈಕ್ ರ್ಯಾಲಿ ಮೂಲಕ ಬರ ಮಾಡಿಕೊಂಡರು.

ಇದೇ ವೇಳೆ ದೂರವಾಣಿ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.

ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ತನ್ನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ. ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ ಮುಖ್ಯಮಂತ್ರಿಗಳೇ ಸಭೆ ಕರೆದು ಇತ್ಯರ್ಥಪಡಿಸಬೇಕಿತ್ತು ಅವರು ಹೇಳಿದರು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ಥ ನಾರಾಯಣ ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದರು. ಸಮಸ್ಯೆ ಬಗೆಹರಿದಿದ್ದರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು, ಕಾರ್ಮಿಕರ ಸಚಿವರ ಮೇಲೆ ಒತ್ತಡ ಹೇರುತ್ತೇನೆ ಎಂದರು.

ಆಡಳಿತ ಮಂಡಳಿಯವರು ಇತ್ತೀಚೆಗೆ ನನ್ನನ್ನು ಭೇಟಿಯಾದಾಗ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೆ. ಕಾರ್ಖಾನೆಗೆ ನಮ್ಮವರು ನೀರು, ನೆಲ ಕೊಟ್ಟಿದ್ದಾರೆ. ಹೀಗಾಗಿ ನಮ್ಮ ಕಾರ್ಮಿಕರನ್ನು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು.

ಸಂಸದ ಡಿ.ಕೆ. ಸುರೇಶ್ ಅವರೂ ಸಭೆ ನಡೆಸಿದ್ದಾರೆ. ಮಾಜಿ ಶಾಸಕ ಬಾಲಕೃಷ್ಣ ಕಾರ್ಮಿಕರ ಜೊತೆಗೂಡಿ ಪಾದಯಾತ್ರೆ ಮಾಡಿದ್ದಾರೆ. ಆಡಳಿತ ಮಂಡಳಿ ಕಾರ್ಮಿಕ ಇಲಾಖೆಯ ಕಾಯ್ದೆ, ಕಾನೂನು ಗೌರವಿಸಬೇಕು.

ಕಳೆದ ಮೂರು  ವೇತನ ಇಲ್ಲದೆ ಕಾರ್ಮಿಕರು, ಅವರ ಕುಟುಂಬದವರು ಪರದಾಡುತ್ತಿದ್ದಾರೆ. ಸರಕಾರ ಕೈ ಕಟ್ಟಿ ಕೂರದೆ ಬಿಕ್ಕಟ್ಟು ನಿವಾರಣೆಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದರು.

ಶಾಸಕರಾದ ರವಿ, ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಮಾಗಡಿಯ ಬಾಲಕೃಷ್ಣ ಮತ್ತಿರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X