Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರ ಗ್ರಾಮ ವಾಸ್ತವ್ಯ ನನ್ನ ಕಣ್ಣು...

ಪತ್ರಕರ್ತರ ಗ್ರಾಮ ವಾಸ್ತವ್ಯ ನನ್ನ ಕಣ್ಣು ತೆರೆಸಿದೆ: ಸಚಿವ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ31 Jan 2021 5:18 PM IST
share
ಪತ್ರಕರ್ತರ ಗ್ರಾಮ ವಾಸ್ತವ್ಯ ನನ್ನ ಕಣ್ಣು ತೆರೆಸಿದೆ: ಸಚಿವ ಈಶ್ವರಪ್ಪ

ಸುಳ್ಯ: ಕುಟುಂಬದ ರೀತಿಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅಭಿವೃದ್ಧಿಗೆ ಪೂರಕವಾದ ಈ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮ ವಾಸ್ತವ್ಯ  ಎಲ್ಲಾ ಜಿಲ್ಲೆಗಳಲ್ಲಿ ನಡೆಯುವಂತಾಗಲಿ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ರವಿವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮ ನನ್ನ ಕಣ್ಣು ತೆರೆಸಿದೆ. ಇದರಿಂದ ಗ್ರಾಮಗಳ ಸಮಸ್ಯೆಗಳು ಬಗೆ ಹರಿಯಲಿದೆ. ಇಲಾಖೆಗಳು ಚುರುಕು ಪಡೆಯುತ್ತವೆ ಎಂದು ಅವರು ಹೇಳಿದರು. ಸಚಿವ ಅಂಗಾರರನ್ನು ಮುಕ್ತ ಕಂಠದಿಂದ ಹೊಗಳಿದ ಈಶ್ವರಪ್ಪ, ಅಂಗಾರ ಅವರೊಬ್ಬ ನಿಷ್ಠಾವಂತ ಕಾರ್ಯಕರ್ತ ಮಾತ್ರವಲ್ಲದೆ ರಾಜ್ಯದ ಮಾದರಿ ರಾಜಕಾರಣಿ ಎಂದರು. 

ಕೊಂಬಾರು ಗ್ರಾಮದ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ಬದ್ಧ
ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದ ಹಿಂದುಳಿದ ಪ್ರದೇಶವಾದ ಕೊಂಬಾರು ಗ್ರಾಮದ ಜನರ ಬಹು ಬೇಡಿಕೆಯಾದ ನಾಲ್ಕು ರಸ್ತೆಗಳನ್ನು ಅಭಿವೃದ್ಧಿ ಮಾಡಲು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಗ್ರಾಮ ವಾಸ್ತವ್ಯವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಡಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ದ ಕೈಪಿಡಿಯನ್ನು ಸಚಿವ ಈಶ್ವರಪ್ಪ ಬಿಡುಗಡೆಗೊಳಿಸಿದರು. ಬಂದರು, ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ಸುಳ್ಯ ವಿಧಾನಸಭೆ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗವನ್ನು ಹೊಂದಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಪ್ರಮುಖ ಬೇಡಿಕೆಯಾಗಿದೆ. ಅನುದಾನದ ಲಭ್ಯತೆ ನೋಡಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.

ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸ್ಥಳೀಯ ಅನುದಾನಗಳು ಸಾಕಾಗುವುದಿಲ್ಲ. ಅದಕ್ಕಾಗಿ ಗ್ರಾಮೀಣ ರಸ್ತೆಗಳನ್ನು ಲೋಕೋಪಯೋಗಿ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿ ಹೆಚ್ಚು ಅನುದಾನ ತರಿಸಿ ಸರ್ವಋತು ರಸ್ತೆಗಳನ್ನಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಪತ್ರಕರ್ತರ ಗ್ರಾಮ ವಾಸ್ತವ್ಯ ಪರಿಕಲ್ಪನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗೃತಿ ಮೂಡಿಸುವ ಕಾಯ್ರಕ್ರಮ ಆಗಲಿದೆ. ಇಂತಹ ಕಾರ್ಯಕ್ರಮ ಹೆಚ್ಚು ಹೆಚ್ಚಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶಿಲ್ದಾರ್ ಅನಂತ ಶಂಕರ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರ್ನಾಟಕ  ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ  ಆರ್. ರವಿಕುಮಾರ್,  ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X