ಉಡುಪಿ ಜಿಲ್ಲಾ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಜ.31: ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರವಿವಾರ ನಡೆದ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಲಸಿಕೆಯ ಯೋಜನಾ ನಿರ್ದೇಶಕಿ ಡಾ.ಇಂದುಮತಿ, ಡಾ.ಎಂ.ಜಿ.ರಾಮ, ಡಾ.ಪ್ರೇಮಾನಂದ್, ಡಾ. ಪ್ರಶಾಂತ್ ಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶಿಖಾ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರೋಟರಿ ಕ್ಲಬ್ ಅಧ್ಯಕ್ಷೆ ರಾಧಿಕಾ ಲಕ್ಷ್ಮಿನಾರಾಯಣ, ಕಾರ್ಯದರ್ಶಿ ದೀಪಾ ಭಂಡಾರಿ, ಲಸಿಕಾ ಉಸ್ತು ವಾರಿ ಐ.ಕೆ.ಜಯಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 0-5 ವರ್ಷದೊಳಗಿನ 74,049 ಮಕ್ಕಳಿಗೆ ಪೊಲೀಯೋ ಲಸಿಕೆ ನೀಡುವ ಗುರಿ ಹೊಂದಿದ್ದು, ಇದಕ್ಕಾಗಿ 657 ಲಸಿಕಾ ಕೇಂದ್ರಗಳು, 8 ಮೊಬೈಲ್ ಟೀಮ್ ಹಾಗೂ 37 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದೆ. 2768 ಲಸಿಕಾ ಸ್ವಯಂ ಸೇವಕರು, 133 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.





