Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೌನ್ಸೆಲಿಂಗ್ ಮೂಲಕ ಉಪನ್ಯಾಸಕರ...

ಕೌನ್ಸೆಲಿಂಗ್ ಮೂಲಕ ಉಪನ್ಯಾಸಕರ ವರ್ಗಾವಣೆ: ಡಿಸಿಎಂ ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ31 Jan 2021 10:06 PM IST
share
ಕೌನ್ಸೆಲಿಂಗ್ ಮೂಲಕ ಉಪನ್ಯಾಸಕರ ವರ್ಗಾವಣೆ: ಡಿಸಿಎಂ ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಜ.31: ಸರಕಾರಿ ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.15ರಷ್ಟು ಮೀರದಂತೆ ವರ್ಗಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಪದವಿ ಹಾಗೂ ತಾಂತ್ರಿಕ ಕಾಲೇಜುಗಳ ಬೋಧನಾ ಸಿಬ್ಬಂದಿ ವರ್ಗಕ್ಕೆ ಹೊಸ ನಿಯಮಾವಳಿ ರೂಪಿಸಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒಂದೇ ಕಡೆ 4 ವರ್ಷ ಕೆಲಸ ಮಾಡಿರುವ ಬೋಧಕರು ವರ್ಗಾವಣೆಗೆ ಅರ್ಹರಾಗಿದ್ದು, ಈ ಅಂಶವನ್ನು ಆಧಾರವಾಗಿಟ್ಟುಕೊಂಡು ವರ್ಗಾವಣೆ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕರಿಗೆ ಇದು ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಆದಷ್ಟು ಬೇಗ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು. ಎಲ್ಲರಿಗೂ ಇಷ್ಟವಾಗುವ ಹಾಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ವಿವರಿಸಿದರು.

ಐದು ವಲಯ: ರಾಜ್ಯವನ್ನು ಎ, ಬಿ, ಸಿ, ಡಿ ಮತ್ತು ಇ ವಲಯ ಎಂದು ಐದು ವಿಭಾಗ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯನ್ನು ‘ಎ' ವಲಯವನ್ನಾಗಿ ಮಾಡಲಾಗಿದೆ. ಬಿಡಿಎ ಮತ್ತು ಬೆಂಗಳೂರು ಹೊರತುಪಡಿಸಿದ ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯನ್ನು ‘ಬಿ' ವಲಯವಾಗಿ ಮಾಡಲಾಗಿದೆ.  ಜಿಲ್ಲಾ ಕೇಂದ್ರ ಹಾಗೂ ನಗರಸಭೆಗಳ ವ್ಯಾಪ್ತಿಯನ್ನು ‘ಸಿ' ವಲಯವನ್ನಾಗಿ ಮಾಡಲಾಗಿದೆ. ತಾಲೂಕು ಕೇಂದ್ರ ಹಾಗೂ ಪಟ್ಟಣ ಪಂಚಾಯತಿಗಳನ್ನು ‘ಡಿ' ವಲಯ ಹಾಗೂ ಮೇಲಿನ ಎಲ್ಲ ವಲಯಗಳ ವ್ಯಾಪ್ತಿಯನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಕಾಲೇಜುಗಳನ್ನು ‘ಇ' ವಲಯಗಳೆಂದು ವಿಂಗಡಿಸಲಾಗಿದೆ. ಯಾರು ಯಾವ ವಲಯದಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಾರೊ ಅವರು ಬೇರೊಂದು ವಲಯಕ್ಕೆ ವರ್ಗವಾಗಲು ಅರ್ಹತೆ ಪಡೆಯುತ್ತಾರೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

ಶೇ.15ರಷ್ಟು ವರ್ಗಾವಣೆ ವಿವರ: ರಾಜ್ಯದ ಐದೂ ಶೈಕ್ಷಣಿಕ ವಿಭಾಗಗಳ ವ್ಯಾಪ್ತಿಯ ಪದವಿ, ಡಿಪ್ಲೋಮ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.9ರಷ್ಟು ಬೋಧಕರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯವಾಗಿ ವರ್ಗ ಮಾಡಲಾಗುವುದು. ಪತಿ-ಪತ್ನಿಯರ ಪ್ರಕರಣಗಳಲ್ಲಿ ಶೇ.3ರಷ್ಟು ಸಿಬ್ಬಂದಿಯನ್ನು ಮಾತ್ರ ವರ್ಗ ಮಾಡಲಾಗುವುದು. ವಿಧವೆಯರು, ಡಿವೋರ್ಸ್ ಪಡೆದ ಬೋಧಕಿಯರು, ವಿಕಲಚೇತನರ ಹೊಣೆಗಾರಿಕೆ ಇರುವವರು, ಸೇನೆ ಅಥವಾ ಅರೆ ಸೇನಾಪಡೆಯಲ್ಲಿ ಕೆಲಸ ಮಾಡುತ್ತಿರುವವರ ಪ್ರಕರಣಗಳಲ್ಲಿ ಶೇ.1ರಷ್ಟು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಯ ಶೇ.1ರಷ್ಟು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳು ಇರುವವರ ಪೈಕಿ ಶೇ.1ರಷ್ಟು ಬೋಧಕರನ್ನು ವರ್ಗಾವಣೆಗೆ ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ವರ್ಗಾವಣೆಯಲ್ಲಿ ಪಾರದರ್ಶಕತೆ: ವರ್ಗಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. 4 ವರ್ಷಗಳಿಗೂ ಹೆಚ್ಚು ಕಾಲದಿಂದ ಒಂದೇ ಕಡೆ ಠಿಕಾಣೆ ಹೂಡಿರುವ ಬೋಧನಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ವರ್ಗ ಮಾಡಲಾಗುವುದು. ಇದಕ್ಕೆ ಸಂಬಂಧಿತ ಎಲ್ಲ ನಿಯಮಗಳನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

ಈ ಹಿಂದೆ ವರ್ಗಾವಣೆ ಎಂದರೆ ದೊಡ್ಡ ಪ್ರಹಸನದಂತೆ ನಡೆಯುತ್ತಿತ್ತು. ಆದರೆ, ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಣೆಗೊಳಪಡಿಸಿ ಎಲ್ಲವೂ ಆನ್‍ಲೈನ್ ಮೂಲಕವೇ ನಡೆಸಲಾಗುತ್ತಿದೆ. ವೈಜ್ಞಾನಿಕವಾಗಿ ಎಲ್ಲವೂ ನಡೆಯಲಿದೆ. ಉಪನ್ಯಾಸಕರು ಇನ್ನು ಮುಂದೆ ಸಚಿವರು, ಅಧಿಕಾರಿಗಳ ಕಚೇರಿಗಳ ಸುತ್ತ ಅಲೆಯುವ ಅವ್ಯವಸ್ಥೆ ಇರುವುದಿಲ್ಲ. ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X