Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸಂವಿಧಾನದ ಆಶಯವನ್ನು ಉಳಿಸುವುದು ನಮ್ಮ...

ಸಂವಿಧಾನದ ಆಶಯವನ್ನು ಉಳಿಸುವುದು ನಮ್ಮ ಪ್ರತಿಜ್ಞೆಯಾಗಬೇಕು: ಡಾ. ಝೈನಿ ಕಾಮಿಲ್

ಕತರ್ ಕೆಸಿಎಫ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ31 Jan 2021 11:54 PM IST
share
ಸಂವಿಧಾನದ ಆಶಯವನ್ನು ಉಳಿಸುವುದು ನಮ್ಮ ಪ್ರತಿಜ್ಞೆಯಾಗಬೇಕು: ಡಾ. ಝೈನಿ ಕಾಮಿಲ್

ಕತರ್: ಭಾರತವು 72ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಜಾತಿ, ಮತ, ಪಥ, ವರ್ಗ, ವರ್ಣಗಳಿಗತೀತವಾಗಿ ಭಾರತೀಯರೆಲ್ಲಾ ಒಂದು ಎಂಬ ಆಶಯದೊಂದಿಗೆ ನಮ್ಮ ಸಂವಿಧಾನದ ನೈಜ ಆಶಯವನ್ನು ಉಳಿಸುವ ಬಗ್ಗೆ ಭಾರತೀಯರು ಪ್ರತಿಜ್ಞಾ ಭದ್ಧರಾಗಬೇಕು. ಸಂವಿಧಾನವು ಘೋಷಿಸುವಂತಹ ಸಾರ್ವಭೌಮತೆ, ಸಹೋದರತ್ವ ಮತ್ತು ಸಮಾನತೆಯನ್ನು ಎತ್ತಿಹಿಡಿದು ಬಲಿಷ್ಠ ಭಾರತದ ನಿರ್ಮಾಣ ನಮ್ಮ ಧ್ಯೇಯವಾಗಬೇಕು ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರರಾಷ್ಟ್ರೀಯ ಸಮಿತಿ ನಾಯಕರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿಯವರು ಹೇಳಿದರು.

ಕತರ್ ಕೆಸಿಎಫ್ ಸಾಮಾಜಿಕ ಮಾಧ್ಯಮ ಝೂಮ್ ಮೂಲಕ ಆಯೋಜಿಸಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಎಂಬ ಸುಂದರ ಆಶಯವು ನಮ್ಮ ಕನಸಾಗಿದೆ ಎಂದರು.

ಗಣ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕತರ್ ಇಂಡಿಯನ್ ಕಲ್ಚರಲ್ ಸೆಂಟರ್ ನ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಮಾತನಾಡಿ, ಅನಿವಾಸಿ ಕನ್ನಡಿಗರೆಡೆಯಲ್ಲಿ ಕೆಸಿಎಫ್ ನಡೆಸುತ್ತಿರುವ ಸಮಾಜಮುಖಿ ಚಟುವಟಿಕೆಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಸಂಘಟನೆಯ ಕಾರ್ಯಕರ್ತರನ್ನು ಅಭಿನಂದಿಸಿದರು.

ಹಾಫಿಲ್ ಉಮರುಲ್ ಫಾರೂಕ್ ಸಖಾಫಿಯವರ ದುಆದೊಂದಿಗೆ ಪ್ರಾರಂಭಗೊಂಡ  ಕಾರ್ಯಕ್ರಮವನ್ನು ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಕಮರುದ್ದೀನ್ ಗೂಡಿನಬಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿವಿಧ ಜಾತಿ, ಮತ, ವರ್ಣ ವರ್ಗಗಳಾಗಿದ್ದರೂ ನಾವೆಲ್ಲರೂ ಭಾರತೀಯರು ಮತ್ತು ಸಹೋದರರಾಗಿದ್ದು, ಈ ಆಶಯವನ್ನು ಮುಂದಿನ ಎಲ್ಲಾ ತಲೆಮಾರುಗಳು ಅನುಭವಿಸುವಂತಾಗಬೇಕು ಎಂದರು.
 
ಇದೇ ಸಂದರ್ಭದಲ್ಲಿ ಕತರ್ ರಾಯಭಾರಿ ಕಚೇರಿ ಅಧೀನದಲ್ಲಿರುವ ವಿವಿಧ ಸಂಸ್ಥೆಗಳ ಎಂ.ಸಿ (ಮ್ಯಾನೇಜ್ಮೆಂಟ್ ಕಮಿಟಿ) ಸದಸ್ಯರುಗಳಾಗಿ ಆಯ್ಗೆಯಾದ ಕನ್ನಡಿಗರನ್ನು ಕೆಸಿಎಫ್ ವತಿಯಿಂದ ಅಭಿನಂದಿಸಲಾಯ್ತು. ಐಸಿಸಿ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ಐಸಿಬಿಎಫ್ ನಿರ್ವಹಣಾ ಸಮಿತಿ ಸದಸ್ಯರಾದ ದಿನೇಶ್ ಗೌಡ ಹಾಗೂ ಐಎಸ್ ಸಿ ನಿರ್ವಹಣಾ ಸದಸ್ಯರಾದ ಟಿ ಶ್ರೀನಿವಾಸ ಅವರನ್ನು ಕೆಸಿಎಫ್ ಕತರ್ ಸಂಘಟನಾಧ್ಯಕ್ಷರಾದ ಹನೀಫ್ ಪಾತೂರು ಅಭಿನಂದಿಸಿದರು.

ಕೆಸಿಎಫ್ ಕತರ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ಯೂಸುಫ್ ಸಖಾಫಿ ಅಯ್ಯಂಗೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಝಾಕಿರ್ ಚಿಕ್ಕಮಗಳೂರು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಹಂಡುಗುಳಿಯವರು ಸ್ವಾಗತಿಸಿದರು. ರಿಶಾದ್ ಮಧುವನ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X