ಕೈರಂಗಳ: ಮೂಗಿ ಯುವತಿಯ ಅತ್ಯಾಚಾರ

ಕೊಣಾಜೆ, ಫೆ.1: ಯಾರು ಇಲ್ಲದ ವೇಳೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮೂಗಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿರುವುದು ವರದಿಯಾಗಿದೆ,
ಕೈರಂಗಳ ಗ್ರಾಮದಲ್ಲಿ ಹದಿನೆಂಟರ ಹರೆಯದ ಮೂಗಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಮನೆ ಮಂದಿ ರವಿವಾರ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





