ಚಾರ್ಮಾಡಿ ಘಾಟಿಯಲ್ಲಿ ಘನ ವಾಹನ ಸಂಚಾರಕ್ಕೆ ಒತ್ತಾಯ
ಮಂಗಳೂರು, ಫೆ.1: ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುವಾರ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಚಾರ್ಮಾಡಿ ಘಾಟಿ ರಸ್ತೆ ದ.ಕ. ಜಿಲ್ಲೆಯ ಜನರ ಜೀವನಾಡಿಯಾಗಿದೆ. ಮಳೆಗಾಲದಲ್ಲಿ ಗುಡ್ಡ ಕುಸಿತ ಹಾಗೂ ರಸ್ತೆ ಕುಸಿತದಿಂದ ಹಾನಿಗೊಳ ಗಾಗಿದ್ದ ಕಾರಣ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶಿಸಿತ್ತು. ಪ್ರಸ್ತುತ ಲಘು ವಾಹನಗಳು ಸಂಚರಿಸುತ್ತಿವೆ. ಇದೀಗ ರಸ್ತೆ ನವೀಕರಣಗೊಂಡು ಸುರಕ್ಷಿತವಾಗಿದ್ದರೂ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾ ನೀಡಿಲ್ಲ. ಅದರಿಂದಾಗಿ ಈ ಮಾರ್ಗ ವಾಗಿ ಬರುತ್ತಿದ್ದ ಹಣ್ಣು, ತರಕಾರಿ, ಆಹಾರ ಸಾಮಗ್ರಿಗಳು ಹಾಗೂ ಜೀವನೋಪಯೋಗಿ ವಸ್ತುಗಳು ಸೂಕ್ತ ಸಮಯಕ್ಕೆ ಸರಬರಾಜು ಆಗುತ್ತಿಲ್ಲ. ಹಾಗಾಗಿ 10 ಟನ್ ಸಾಮರ್ಥ್ಯವುಳ್ಳ 6 ಚಕ್ರಗಳ ಸರಕು ಸಾಗಾಟದ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಈ ಮಾರ್ಗದಲ್ಲಿ ಸಂಚಾರಕ್ಕ ಅವಕಾಶ ನೀಡಬೇಕು ಎಂದು ಹರೀಶ್ ಕುವಾರ್ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದಾರೆ.





