ದ.ಕ.: ಕೋವಿಡ್‌ಗೆ ವ್ಯಕ್ತಿ ಬಲಿ, 16 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಫೆ.1: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೋರ್ವ ಬಲಿಯಾಗಿದ್ದು, 16 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಮವಾರ 18 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,804 ಸೋಂಕಿತರ ಪೈಕಿ 32,778 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ 740 ಮಂದಿ ಮೃತಪಟ್ಟಿದ್ದು, 286 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ 29,202 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 30,44,370 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story





