ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಉಡುಪಿ, ಫೆ.1: ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಚಿದೇವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಮಾಜದವರು ಉಪಸ್ಥಿತರಿದ್ದರು.
Next Story





