ಸೇತುವೆಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು

ಬ್ರಹ್ಮಾವರ, ಫೆ.1: ಸ್ಕೂಟರೊಂದು ಉಪ್ಪೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಜ.31ರಂದು ರಾತ್ರಿ 11.15ರ ಸುಮಾರಿಗೆ ನಡೆದಿದೆ.
ಮೃತರನ್ನು ಆಸೀಫ್(19) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ಸವಾರನ ನಿಯಂತ್ರಣ ತಪ್ಪಿ ಸೇತುವೆಯ ಪಿಲ್ಲರ್ ಕಂಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





