ಕೃಷಿ ವಲಯಕ್ಕೆ ಪ್ರತ್ಯೇಕ ಬಜೆಟ್ ಬೇಕು ಎಂದ ರೈತ ನಾಯಕ ರಾಕೇಶ್ ಟಿಕಾಯತ್

ಹೊಸದಿಲ್ಲಿ: ರೈತ ಸಮುದಾಯದ ಹಲವು ಸಮಸ್ಯೆಗಳನ್ನು ನಿವಾರಿಸಲು ಸರಕಾರವು ಕೃಷಿ ವಲಯಕ್ಕೆ ಪ್ರತ್ಯೇಕ ಬಜೆಟ್ ಒದಗಿಸಬೇಕು ಎಂದು ಕೇಂದ್ರ ಬಜೆಟ್ ದಿನವಾದ ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಒತ್ತಾಯಿಸಿದರು.
ನೂತನ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ 2 ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ಘಾಝಿಪುರ ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಟಿಕಾಯತ್, ಕೃಷಿ ವಲಯಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಬೇಕು. ರೈತರು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಸರಕಾರವು ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ರೈತರಿಗೆ ಉಚಿತ ವಿದ್ಯುತ್ ಒದಗಿಸಲು ಯೋಜನೆ ರೂಪಿಸಬೇಕು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾಯ್ದೆ ಅಡಿ ಕೃಷಿ ಕಾರ್ಯಕ್ಕೆ ಪ್ರತ್ಯೇಕ ನಿಧಿಯ ಮೂಲಕ ಕೃಷಿ ಕಾರ್ಮಿಕರಿಗೆ ಪ್ರತಿನಿತ್ಯ ವೇತನ ನೀಡಬೇಕೆಂದು ಟಿಕಾಯತ್ ಬೇಡಿಕೆ ಇಟ್ಟಿದ್ದಾರೆ.
Next Story





