ಟ್ರ್ಯಾಕ್ಟರ್ ರ್‍ಯಾಲಿ: ರೈತರು, ಆಯೋಜಕರಿಗೆ ದಂಡ ವಿಧಿಸಲಾಗಿದೆ- ಹೈಕೋರ್ಟ್ ಗೆ ಮಾಹಿತಿ ನೀಡಿದ ಸರಕಾರ

ಬೆಂಗಳೂರು, ಫೆ.1: ಗಣರಾಜ್ಯೋತ್ಸವ ದಿನದಂದು ನಗರದಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ರೈತರು ಮತ್ತು ಆಯೋಜಕರಿಗೆ ದಂಡ ವಿಧಿಸಿ, ದೂರು ದಾಖಲಿಸಲಾಗಿದೆ ಎಂದು ಸರಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಈ ಕುರಿತು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸರಕಾರಿ ಪರ ವಕೀಲರು, ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ 98 ಜನರಿಗೆ ತಲಾ 250 ರೂ. ಹಾಗೂ ಆಯೋಜಕರಿಬ್ಬರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ. 27 ಮಂದಿ ವಿರುದ್ಧ ಎನ್‍ಡಿಎಂ ಕಾಯ್ದೆ ಅಡಿ ದೂರು ದಾಖಲಿಸಿದ್ದೇವೆ ಎಂದು ಪೀಠಕ್ಕೆ ವಿವರಿಸಿದರು.
ಈ ಕುರಿತ ಸಂಪೂರ್ಣ ವಿವರಗಳನ್ನು ಲಿಖಿತವಾಗಿ ಸಲ್ಲಿಸಿ ಎಂದು ಸರಕಾರದ ಪರ ವಕೀರಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಿತು.
Next Story





