Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಪೂರ್ಣ ಕನ್ನಡ ಭಾಷೆಯ ಅನುಷ್ಠಾನಕ್ಕೆ...

ಸಂಪೂರ್ಣ ಕನ್ನಡ ಭಾಷೆಯ ಅನುಷ್ಠಾನಕ್ಕೆ ಇಡೀ ಸಮುದಾಯ ಜಾಗೃತಗೊಳ್ಳಬೇಕು: ಡಾ. ವಿಜಯಾದೇವಿ

ಶಿವಮೊಗ್ಗ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 Feb 2021 11:18 PM IST
share
ಸಂಪೂರ್ಣ ಕನ್ನಡ ಭಾಷೆಯ ಅನುಷ್ಠಾನಕ್ಕೆ ಇಡೀ ಸಮುದಾಯ ಜಾಗೃತಗೊಳ್ಳಬೇಕು: ಡಾ. ವಿಜಯಾದೇವಿ

ಶಿವಮೊಗ್ಗ, ಫೆ.01: ರಾಜ್ಯದಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆಯ ಅನುಷ್ಠಾನಗೊಳಿಸುವ ಬಗ್ಗೆ ಕನ್ನಡದ ಇಡೀ ಸಮುದಾಯ ಜಾಗೃತಗೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಿವಮೊಗ್ಗ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ. ವಿಜಯಾದೇವಿ ಹೇಳಿದರು.

ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಜತೆ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ಸೂಚನಾ ಪತ್ರ, ನ್ಯಾಯಾಲಯದ ಆದೇಶಗಳು ಆಂಗ್ಲ ಭಾಷೆಯಲ್ಲಿ ಬರುತ್ತವೆ. ನ್ಯಾಯಾಲಯದ ಆದೇಶ ಕನ್ನಡದಲ್ಲಿ ಬರಬೇಕೆಂದು ಹೇಳುವ ಹಕ್ಕು ಸಾಹಿತಿಗಳಿಗಿಲ್ಲ. ಆದರೆ ಆದೇಶ ಪ್ರತಿ ಸ್ವೀಕರಿಸುವವರಿಗೆ ಅರ್ಥವಾಗುವ ಭಾಷೆಯಲ್ಲಿ ಇರಬೇಕು ಎಂಬುದು ಅನಿಸಿಕೆ ಎಂದರು.

ಕನ್ನಡ ಸಮುದಾಯ ಜಾಗೃತಗೊಂಡು ರಾಜ್ಯದ ಎಲ್ಲ ಆಡಳಿತಾತ್ಮಕ ವಿಷಯ, ಕಚೇರಿಗಳಲ್ಲಿ ಹಾಗೂ ಸಂವಹನ ನಡೆಸಲು ಎಲ್ಲೆಲ್ಲಿ ಕನ್ನಡ ಭಾಷೆ ಬಳಸಲು ಸಾಧ್ಯವೋ ಅಲ್ಲೆಲ್ಲಾ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಬೇಕಾಗಿರುವುದು ಕನ್ನಡಿಗರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಟ್ಟರು.

ಕುವೆಂಪು ಅವರು ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಲ್ಲಿಯೂ ಆಯಾ ವಿಷಯದ ಪಠ್ಯಕ್ರಮಗಳನ್ನು ಮಕ್ಕಳಿಗೆ ಕನ್ನಡದಲ್ಲಿಯೂ ಬೋಧನೆ ಮಾಡುವಂತೆ ಹಾಗೂ ವಿಷಯದ ಪಠ್ಯಗಳು ಕನ್ನಡದಲ್ಲಿ ಸಿಗುವಂತಾಗಬೇಕು ಎಂದಿದ್ದರು. ವಿಶ್ವವಿದ್ಯಾಲಯದ ಪ್ರತಿ ವಿಭಾಗ ಹಾಗೂ ಅದರ ಕಚೇರಿಗಳಲ್ಲಿ ಕನ್ನಡ ಬಳಸುವ ಬಗ್ಗೆ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಕನ್ನಡ ಭಾಷಾ ಸಾಹಿತ್ಯವೇ ನನ್ನ ಜೀವನದ ಸಾಧನೆಗೆ ಪ್ರೇರಣೆ. ಕನ್ನಡ ಸಾಹಿತ್ಯವು ಕಲಿಸಿದ ಜೀವನ ಮಾರ್ಗದಲ್ಲಿ ಸಾಗಿ ಬಂದು ಈವರೆಗಿನ ಕಾರ್ಯಗಳನ್ನು ಮಾಡಿದ್ದೇನೆ. ಎಲ್ಲ ಸಾಧನೆಗೂ ಕನ್ನಡ ಭಾಷೆಯೇ ಪ್ರೇರಕ ಶಕ್ತಿಯಾಗಿದೆ. ಮಕ್ಕಳಿಗೆ ಕನ್ನಡದ ಶ್ರೇಷ್ಠ ಸಾಹಿತ್ಯದ ಬಗ್ಗೆ ಪರಿಚಯಿಸುವ ಕೆಲಸ ಆಗಬೇಕು. ಎಲ್ಲ ಅಂತರಾಳದಲ್ಲಿ ಭಾಷೆ ಸೇರಿಕೊಂಡು ಅತ್ಯದ್ಭುತ ಶಕ್ತಿಯಾಗಿ ಬೆಳೆಯುವಂತೆ ಮಾಡುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಕಾರ್ಯದರ್ಶಿ ರುದ್ರಮುನಿ ಸಜ್ಜನ್ ಸಮ್ಮೇಳನಾಧ್ಯಕ್ಷರ ಜತೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಚ್.ಎನ್.ಮಹಾರುದ್ರ ಆಶಯ ನುಡಿಗಳನ್ನಾಡಿದರು. ಮಮತಾ ಹೆಗ್ಡೆ, ಡಾ.ಎನ್.ಆರ್.ಮಂಜುಳಾ, ಲಕ್ಷ್ಮೀಶಾಸ್ತ್ರಿ, ರುಕ್ಮಿಣಿ ಆನಂದ್, ಶಾಲಿನಿ ರಾಮಸ್ವಾಮಿ, ವಿನೋದ ಆನಂದ, ಜಿ.ಎಸ್.ಸರೋಜಾ, ಶೀಲಾ ಸುರೇಶ್, ಕೆ.ವೈ.ರಾಮಚಂದ್ರಪ್ಪ, ಶ್ರೀರಂಜಿನಿ ದತ್ತಾತ್ರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಚಾಲುಕ್ಯನಗರದ ಗೋಪಿಶೆಟ್ಟಿಕೊಪ್ಪ ಬಡಾವಣೆಯ ಸಾಹಿತ್ಯಗ್ರಾಮದಲ್ಲಿರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಸಾಹಿತ್ಯ ಭವನ ನವೀಕರಣಕ್ಕೆ ಸಹಕಾರ ನೀಡಿದವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಸಣ್ಣ ಕೈಗಾರಿಕೆ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ವಿಪಕ್ಷ ನಾಯಕ ಎಚ್.ಸಿ.ಯೋಗೀಶ್ ‌ಅವರಿಗೆ ಅಭಿನಂದಿಸಲಾಯಿತು. ಅಪೇಕ್ಷಾ ಮಂಜುನಾಥ್ ಮತ್ತು ತಂಡ, ಹೊಸನಗರ ಕಳೂರು ಯುವತಿ ಮಂಡಳಿಯವರಿಂದ ಸಾಂಸ್ಕೃತಿಕ ಸಂಜೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X