Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : 12ನೇ ಶತಮಾನದ ಭಗ್ನ...

ಉಡುಪಿ : 12ನೇ ಶತಮಾನದ ಭಗ್ನ ವಿಷ್ಣುಮೂರ್ತಿ ಶಿಲ್ಪ ಪತ್ತೆ

ವಾರ್ತಾಭಾರತಿವಾರ್ತಾಭಾರತಿ3 Feb 2021 8:32 PM IST
share
ಉಡುಪಿ : 12ನೇ ಶತಮಾನದ ಭಗ್ನ ವಿಷ್ಣುಮೂರ್ತಿ ಶಿಲ್ಪ ಪತ್ತೆ

ಉಡುಪಿ, ಫೆ.3: ಶಿರ್ವದ ಮುಲ್ಕಿ ಸುಂದರ್ ರಾವ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯಲ್ಲಿ ಸುಮಾರು 12ನೇ ಶತಮಾನಕ್ಕೆ ಸೇರಿದ ಅತ್ಯಾಕರ್ಷಕ ಭಗ್ನ ಜನಾರ್ದನ/ವಿಷ್ಣುಮೂರ್ತಿ ಶಿಲ್ಪ ಪತ್ತೆಯಾಗಿದೆ ಎಂದು ವಿಭಾಗ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಉಡುಪಿ ತಾಲೂಕಿನ 80 ಬಡಗಬೆಟ್ಟು ಪಂಚಾಯಿತಿಯ ಹಿಂಭಾಗದಲ್ಲಿರುವ ಕಾಡಿನಲ್ಲಿ ಪಾಳು ಬಿದ್ದ ದೇಗುಲವೊಂದಿದ್ದು, ದೇವಾಲಯದ ಪಕ್ಕದಲ್ಲಿ ಇರುವ ಒಂದು ಹಾಳು ಬಾವಿಯಲ್ಲಿ ಸತತ ಪುರಾತತ್ವ ಅನ್ವೇಷಣೆಯಿಂದಾಗಿ ಈ ಸುಂದರವಾದ ಶಿಲ್ಪ ಪತ್ತೆಯಾಗಿದೆ ಎಂದವರು ತಿಳಿಸಿದ್ದಾರೆ.

ಶಿಲ್ಪದ ಮುಂದಿನ ಬಲಗೈಯಲ್ಲಿ ಪಿಂಡ, ಎಡಗೈ ಸೊಂಟದ ಮೇಲಿದ್ದು ತುಂಡಾದ ಗದೆ ದೊರೆತಿದೆ. ಬಲ ಹಿಂಬದಿಯ ಕೈ ಭಾಗ ಸಹ ತುಂಡಾಗಿದ್ದು ಅದು ಇನ್ನು ದೊರೆತಿಲ್ಲ. ಎಡ ಹಿಂಬದಿಯ ಕೈಯಲ್ಲಿ ಆಕರ್ಷಕ ಶಂಖವಿದೆ. ಕಿವಿಯಲ್ಲಿ ಮಕರ ಕುಂಡಲವಿದೆ. ಕೊರಳಲ್ಲಿ ಕಂಠಾಭರಣ, ಆಕರ್ಷಕ ಉಪವೀತ, ಉದರಾಭರಣ, ಹಾಗು ಮೊಳಕಾಲಿನವರೆಗೆ ಇಳಿಬಿದ್ದ ಕೌಸ್ತುಭ ಹಾರವಿದೆ.

ಚಿತ್ತಾಕರ್ಷಕವಾದ ಈ ಶಿಲ್ಪ ಕರಂಡ ಮುಕಟಧಾರಿಯಾಗಿದ್ದು, ತೋಳಲ್ಲಿ ತೋಳ್ಬಂದಿ, ಕಡಗಗಳಿಂದ ಸಿಂಗರಿಸಲ್ಪಟ್ಟಿದೆ. ಸೊಂಟಪಟ್ಟಿ, ಸೊಂಟದ ಕೆಳಭಾಗ ದಲ್ಲಿ ವಸ್ತ್ರ, ವಡ್ಯಾಣಗಳಿವೆ. ಪಾದಗಳು ತುಂಡಾಗಿದ್ದು, ತುಂಡಾದ ಪಾದದ ಭಾಗಗಳು ಪಾಳು ಬಿದ್ದ ದೇವಾಲಯದ ಗರ್ಭಗುಡಿಯಲ್ಲಿ ಪಾಣಿ ಪೀಠದಲ್ಲಿವೆ. ಮುಕುದ ಹಿಂಭಾಗದಲ್ಲಿ ಪ್ರಭಾವಳಿಯಿದೆ. ಇಡೀ ಶಿಲ್ಪ 4 ಅಡಿ ಎತ್ತರವಿದೆ. ಶಿಲ್ಪದ ಶೈಲಿ ಮತ್ತು ಲಕ್ಷಣದ ಆಧಾರದ ಮೇಲೆ ಈ ಶಿಲ್ಪವನ್ನು 12-13ನೇ ಶತಮಾನದ ಶಿಲ್ಪವೆಂದು ನಿರ್ಧರಿಸಲಾಗಿದೆ. ಆಚಾರ್ಯ ಮಧ್ವರಿಗಿಂತ ಮೊದಲೇ ಭಾಗವತ ಪಂಥ ತುಳುನಾಡಿನಲ್ಲಿ ಜನಪ್ರಿಯವಾಗಿತ್ತು ಎಂಬುದಕ್ಕೆ ಈ ಶಿಲ್ಪ ಸಾಕ್ಷಿಯಾಗಿದೆ. ಅತೀವ ಸೌಂದರ್ಯ ದಿಂದ ಕಂಗೊಳಿಸುವ ಈ ಶಿಲ್ಪ, ಕರ್ನಾಟಕ ಕರಾವಳಿಯ ಒಂದು ಮಾಸ್ಟರ್ ಪೀಸ್ ಎಂಬುದರಲ್ಲಿ ಸಂಶಯವಿಲ್ಲ. ಅನ್ವೇಷಣೆ ಇನ್ನೂ ಮುಂದುವರಿದಿದೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.

ಪ್ರೊ.ಮುರುಗೇಶಿ ಅವರ ಈ ಸಂಶೋಧನೆಯಲ್ಲಿ ಕಾಲೇಜಿನ ಅಂತಿಮ ಬಿ.ಎ. ಪುರಾತತ್ವ ವಿಭಾಗದ ಕಾವ್ಯ, ಭವ್ಯಾ, ಶ್ರೇಯಸ್, ನಾಗರಾಜ, ರಾಜೇಶ್, ಗೌತಮ್ ಹಾಗೂ ಸ್ಥಳೀಯರಾದ ಗಣೇಶ್ ಆಚಾರ್ಯ ಮತ್ತು ಗಣೇಶ್ ಸರಳೇಬೆಟ್ಟು ಸಹಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X