Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 4 ವಾರಗಳವರೆಗೆ ಚಿತ್ರಮಂದಿರಗಳ 100% ಆಸನ...

4 ವಾರಗಳವರೆಗೆ ಚಿತ್ರಮಂದಿರಗಳ 100% ಆಸನ ಭರ್ತಿಗೆ ಅವಕಾಶ: ಸಚಿವ ಡಾ.ಕೆ.ಸುಧಾಕರ್

ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ

ವಾರ್ತಾಭಾರತಿವಾರ್ತಾಭಾರತಿ3 Feb 2021 8:33 PM IST
share
4 ವಾರಗಳವರೆಗೆ ಚಿತ್ರಮಂದಿರಗಳ 100% ಆಸನ ಭರ್ತಿಗೆ ಅವಕಾಶ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ 100% ರಷ್ಟು ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ಹಿರಿಯ ನಟರು, ಫಿಲಂ ಚೇಂಬರ್ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಸಭೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯು ಕೋವಿಡ್ ನಿಯಂತ್ರಿಸಲು ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿ ಮಾಡಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು. ಕೇಂದ್ರ ಸರ್ಕಾರವು ಶೇ.100 ರಷ್ಟು ಭರ್ತಿ ಮಾಡಲು ಅವಕಾಶ ನೀಡಿದ್ದರೂ, ಕೋವಿಡ್ ಹಿನ್ನೆಲೆಯಲ್ಲಿ ಆಯಾ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿತ್ತು. ಅದರಂತೆ ಮಾರ್ಗಸೂಚಿ ರೂಪಿಸಲಾಗಿತ್ತು ಎಂದು ವಿವರಿಸಿದರು.

ಆದರೆ ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಯನ್ನು ಚಲನಚಿತ್ರ ರಂಗದವರು ವಿರೋಧಿಸಿದ್ದಾರೆ. ಕಾರ್ಮಿಕರು, ನಿರ್ಮಾಪಕರ ಹಿತದೃಷ್ಟಿಯಿಂದ ಹಾಗೂ ಚಿತ್ರರಂಗದ ಪರಿಸ್ಥಿತಿ ಶೋಚನೀಯವಾಗಿರುವುದರಿಂದ ನಿರ್ಧಾರ ಬದಲಿಸಬೇಕು ಎಂದು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ನಮ್ಮೊಂದಿಗೆ ಇರಬೇಕು ಎಂದು ಕೂಡ ಚಿತ್ರರಂಗದವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಈ ಬಗ್ಗೆ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ನಾಲ್ಕು ವಾರಗಳವರೆಗೆ 100% ರಷ್ಟು ಚಿತ್ರಮಂದಿರಗಳಲ್ಲಿ ಆಸನ ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಕಠಿಣವಾದ ಮಾರ್ಗಸೂಚಿ ರೂಪಿಸಲಿದ್ದು, ನಾಳೆಯೇ ಅದನ್ನೂ ಬಿಡುಗಡೆ ಮಾಡಲಾಗುವುದು. ಇದನ್ನು ಚಿತ್ರಮಂದಿರಗಳ ಮಾಲಕರು ಅಳವಡಿಸಿಕೊಳ್ಳಬೇಕು. ಜನರು ಕೂಡ ಯಥಾವತ್ತಾಗಿ ಪಾಲಿಸಬೇಕು. ನಾಲ್ಕು ವಾರಗಳಲ್ಲಿ ಪ್ರೇಕ್ಷಕರಿಗೆ ಸೋಂಕು ತಗುಲುವ ಅಥವಾ ಕೋವಿಡ್ ಸೋಂಕು ಹೆಚ್ಚಿದ ಪ್ರಕರಣ ಕಂಡುಬಂದರೆ, ಮತ್ತೆ ನಿರ್ಧಾರ ಬದಲಿಸಿಕೊಳ್ಳುವ ಅನಿವಾರ್ಯ ಸ್ಥಿತಿ ಬರಲಿದೆ ಎಂದು ಸ್ಪಷ್ಟಪಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X