ಕಲ್ಲಡ್ಕ : ಅನಿಲ ಟ್ಯಾಂಕರ್ - ಕಂಟೈನರ್ ಮುಖಾಮುಖಿ ಢಿಕ್ಕಿ; ಆತಂಕದ ವಾತಾವರಣ

ಬಂಟ್ವಾಳ : ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.







.jpeg)


