ತೈಲ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ : ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ
ಮಂಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಮತ್ತು ಪ್ರಸಕ್ತ ನಿರಂತರ ಏರುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾ ಘಟಕವು ಫೆ. 5 ರ ಸಂಜೆ 4 ಕ್ಕೆ ಮಂಗಳೂರು ಹಂಪನಕಟ್ಟೆಯ ಮಿನಿ ವಿಧಾನಸೌಧ ಎದುರಿನಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷರಾದ ಅಡ್ವೋಕೇಟ್ ಸರ್ಫ್ ರಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಎಸ್. ಎಮ್. ಮುತ್ತಲಿಬ್ ತಮ್ಮ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ಜನ ಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಹಾಗೂ ಇದರ ಬಗ್ಗೆ ವಿರೋಧ ಪಕ್ಷಗಳು ಮೌನ ಪ್ರೇಕ್ಷಕವಾಗಿರುವ ಕಾರಣ, ಕೇಂದ್ರ ಸರಕಾರದ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ರಂಗಕ್ಕಿಳಿಯುವುದು ನಮಗೆ ಅನಿವಾರ್ಯವಾಗಿರುವುದರಿಂದಾಗಿ ಇದನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಫೆ.5ರ ಸಂಜೆ 4ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.







