Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕ್ಯಾನ್ಸರ್ ಗೆಲ್ಲಲು ಸಾಧ್ಯವಿದೆ

ಕ್ಯಾನ್ಸರ್ ಗೆಲ್ಲಲು ಸಾಧ್ಯವಿದೆ

ಇಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ

ಡಾ. ಮುರಲೀ ಮೋಹನ ಚೂಂತಾರುಡಾ. ಮುರಲೀ ಮೋಹನ ಚೂಂತಾರು4 Feb 2021 12:10 AM IST
share
ಕ್ಯಾನ್ಸರ್  ಗೆಲ್ಲಲು ಸಾಧ್ಯವಿದೆ

ಕ್ಯಾನ್ಸರ್‌ಗೆ ಕಾರಣಗಳು
* ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ

* ಧೂಮಪಾನ ಮತ್ತು ಮದ್ಯಪಾನ

* ಆನುವಂಶೀಯ ಕಾರಣಗಳು

* ಆರಾಮದಾಯಕ ಜೀವನ ಶೈಲಿ, ಅನಾರೋಗ್ಯಪೂರ್ಣ ಆಹಾರದ ಪದ್ಧತಿ ಮತ್ತು ಒತ್ತಡದ ಜೀವನ ಇತ್ಯಾದಿ

* ವಿಕಿರಣದ ಮುಖಾಂತರ

* ಅತಿಯಾದ ಗರ್ಭನಿರೋಧಕ ಮಾತ್ರೆಗಳು ಮತ್ತು ಕೃತಕ ರಸದೂತ ಮಾತ್ರೆಗಳ ಅನಿಯಂತ್ರಿತ ಬಳಕೆ

* ವಾತಾವರಣದ ವೈಪರೀತ್ಯ, ವಾಯು ಮಾಲಿನ್ಯ, ವೃತ್ತಿ ಸಂಬಂಧಿ ಕ್ಯಾನ್ಸರ್‌ಕಾರಕ ವಸ್ತುಗಳು ದೇಹಕ್ಕೆ ಸೇರುವುದರಿಂದ.

* ಅನಾರೋಗ್ಯಕರವಾದ ಲೈಗಿಂಕ ಜೀವನ, ಹಲವಾರು ಬಾರಿ ಗರ್ಭಧರಿಸುವುದು ಇತ್ಯಾದಿ.

* ಹೆಪಟೈಟಿಸ್ ಬಿ ಮತ್ತು ಸಿ ವೈರಸ್‌ನ ಸೋಂಕು, ಎಬ್‌ಸ್ಟೈನ್ ಬಾರ್ ವೈರಸ್, ಹ್ಯೂಮನ್ ಪಾಪಿಲೋಮ ವೈರಸ್ ಇತ್ಯಾದಿ ವೈರಸ್ ಸೋಂಕಿನಿಂದಲೂ ಕ್ಯಾನ್ಸರ್ ಬರುವ ಸಾಧ್ಯತೆ ಇದೆ.


ವಿಶ್ವಾದ್ಯಂತ ಪ್ರತಿ ವರ್ಷ ಫೆಬ್ರವರಿ 4ರಂದು ‘ಕ್ಯಾನ್ಸರ್ ಜಾಗೃತಿ ದಿನ’ ಎಂದು ಆಚರಿಸಲಾಗುತ್ತಿದೆ. ಅಂತರ್‌ರಾಷ್ಟ್ರೀಯ ಕ್ಯಾನ್ಸರ್ ತಡೆ ಒಕ್ಕೂಟ ಈ ಆಚರಣೆಯನ್ನು 2008ರಿಂದ ಜಾರಿಗೆ ತಂದಿದೆ. ದಿನೇ ದಿನೇ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ತಡೆಗಟ್ಟುವುದರ ಬಗ್ಗೆ, ಆರಂಭಿಕ ಹಂತದಲ್ಲಿ ಗುರುತಿಸುವ ಬಗ್ಗೆ ಹಾಗೂ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಮಾರ್ಗದರ್ಶನ ನೀಡಿ ಕ್ಯಾನ್ಸರ್ ರೋಗದ ಬಗೆಗಿನ ತಪ್ಪುಕಲ್ಪನೆಗಳನ್ನು ಹೋಗಲಾಡಿಸುವ ಮಹದಾಸೆಯನ್ನು ಈ ಆಚರಣೆ ಹೊಂದಿದೆ. ಬಹುತೇಕ ಹೆಚ್ಚಿನ ಎಲ್ಲಾ ಕ್ಯಾನ್ಸರ್‌ಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸುವ ಪರೀಕ್ಷೆಗಳು ಲಭ್ಯವಿದೆ ಮತ್ತು ಹಾಗೆ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಸಕಾಲದಲ್ಲಿ ನೀಡಿದಲ್ಲಿ ಕ್ಯಾನ್ಸರ್ ರೋಗವನ್ನು ಕೂಡಾ ಗೆಲ್ಲಲು ಸಾಧ್ಯವಿದೆ ಎಂಬ ಧನಾತ್ಮಕ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ಗುರುತರವಾದ ಗುರಿಯನ್ನು ಈ ವಿಶ್ವಕ್ಯಾನ್ಸರ್ ಜಾಗೃತಿ ದಿನಾಚರಣೆ ಹೊಂದಿದೆ. ವಿಪರ್ಯಾಸವೆಂದರೆ 50 ಶೇಕಡಾ ಮಂದಿ ಕ್ಯಾನ್ಸರ್ ಎಂಬ ರೋಗ ಬಂದಿದೆ ಎಂದ ಕೂಡಲೇ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಈ ನಿಟ್ಟಿನಲ್ಲಿ ಜನರ ಭಯ ನಿವಾರಿಸುವ ಮತ್ತು ಮನೋಧೈರ್ಯ ತುಂಬುವ ಗುರುತರ ಹೊಣೆಗಾರಿಕೆ ವೈದ್ಯರಿಗೆ, ಆರೋಗ್ಯ ಇಲಾಖೆಯವರಿಗೆ ಮತ್ತು ಸರಕಾರಕ್ಕೆ ಇದೆ.

ಏನಿದು ಕ್ಯಾನ್ಸರ್? 

ಕ್ಯಾನ್ಸರ್ ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಷ್ಯಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ಅರ್ಬುದ ರೋಗ ಎಂದು ಕರೆಯಲಾಗುತ್ತದೆ.

ಕ್ಯಾನ್ಸರ್ ರೋಗ ಅಂದ ಕೂಡಲೇ ನಾವೆಲ್ಲಾ ಒಮ್ಮೆಲೇ ದಿಗಿಲುಗೊಳ್ಳುತ್ತೇವೆ. ಹಿಂದಿನ ಕಾಲದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಣಿತ ವೈದ್ಯರ ಸೇವೆ ದುರ್ಲಭವಾಗಿತ್ತು. ಬಡತನ, ಅನಕ್ಷರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗವನ್ನು ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗಿರುತ್ತಿತ್ತು. ಆ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸಲಾಗದ ಕಾಯಿಲೆ ಎಂಬ ಹಣೆಪಟ್ಟಿ ಪಡೆದುಕೊಂಡಿತು. ಆದರೆ ತಂತ್ರಜ್ಞಾನ, ಪರಿಣಿತ ವೈದ್ಯರ ಲಭ್ಯತೆ ಮತ್ತು ಜನರ ತಿಳುವಳಿಕೆಯ ಮಟ್ಟ ಏರಿದಂತೆ ಜನರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಅರಿವು ಮೂಡತೊಡಗಿದೆ ಮತ್ತು ಈಗಿನ ಕಾಲಘಟ್ಟದಲ್ಲಿ ಕ್ಯಾನ್ಸರ್ ಖಂಡಿತವಾಗಿಯೂ ಗುಣಪಡಿಸಲಾಗದ ಕಾಯಿಲೆಯಲ್ಲ.

ಪ್ರಾರಂಭಿಕ ಹಂತದಲ್ಲಿ ಗುರುತಿಸಿ, ಪರಿಣಾಮಕಾರಿ ಔಷಧಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣಮುಖವಾಗಬಹುದು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗವನ್ನು ಗೆದ್ದು ಸುಖ ಜೀವನ ನಡೆಸುವವರ ಸಂಖ್ಯೆ ಹೆಚ್ಚುತ್ತಿದೆ ಎನ್ನುವುದು ಸಮಾಧಾನಕರ ಅಂಶ. ಸಾಕ್ಷರತೆ, ಬಡತನ ನಿರ್ಮೂಲನ, ಗುಣಮಟ್ಟದ ವೈಜ್ಞಾನಿಕ ಸುಧಾರಣೆಗಳು ಮತ್ತು ತಾಂತ್ರಿಕ ಹಾಗೂ ವೈಜ್ಞಾನಿಕ ಕೌಶಲತೆಗಳಿಂದಾಗಿ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ರೋಗ ಗುರುತಿಸಿ ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಜನರಲ್ಲಿ ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದು ಎಂಬ ಭಾವನೆ ಮೂಡಿಸುವಲ್ಲಿ ವೈದ್ಯಕೀಯ ಜಗತ್ತು ಯಶಸ್ಸು ಕಂಡಿದೆ ಎಂದರೂ ತಪ್ಪಲ್ಲ. ಆದರೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮತ್ತು ಅರಿವು ಮೂಡಿಸುವ ಪ್ರಯತ್ನ ನಡೆಯಬೇಕಾಗಿದೆ. ಯಾಕೆಂದರೆ ಹಿಂದಿನ ಕಾಲದಲ್ಲಿ ಕ್ಯಾನ್ಸರ್ ಇಳಿ ವಯಸ್ಸಿನ ರೋಗವಾಗಿತ್ತು. 60-70ರ ಹರೆಯದಲ್ಲಿ ಕಾಣಿಸಿಕೊಳ್ಳುತ್ತಿದ ರೋಗ, ಈಗೀಗ 30-40ರ ಹರೆಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. ವಾತಾವರಣದಲ್ಲಿ ವ್ಯತ್ಯಾಸ, ಹವಾಮಾನ ವೈಪರೀತ್ಯ, ಆಹಾರ ಪದ್ಧತಿಯಲ್ಲಿನ ಬದಲಾವಣೆ, ಕಲುಷಿತಗೊಂಡ ನೀರು, ಗಾಳಿ, ಆಹಾರ ಮತ್ತು ವಿಪರೀತ ಒತ್ತಡದ ಜೀವನದಿಂದಾಗಿ ಸಣ್ಣ ವಯಸ್ಸಿನಲ್ಲಿಯೇ ಬೀಡಿ, ಸಿಗರೇಟು, ಗುಟ್ಕಾ ಮುಂತಾದ ದುಶ್ಚಟಗಳ ಸಹವಾಸದಿಂದಾಗಿ ಹೆಚ್ಚು ಹೆಚ್ಚು ಯುವಜನತೆ 30-40ರ ಆಸುಪಾಸಿನಲ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುವುದು ಆತಂಕಕಾರಿ ವಿಚಾರವೇ ಸರಿ.

ತಡೆಗಟ್ಟುವುದು ಹೇಗೆ?
* ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ವರ್ಜಿಸಬೇಕು. ಗುಟ್ಕಾ ಇತ್ಯಾದಿ ತಂಬಾಕು ಉತ್ಪನ್ನಗಳು ಮನುಕುಲದ ದೊಡ್ಡ ವೈರಿ ಮತ್ತು ಕ್ಯಾನ್ಸರ್ ಕಾರಕ ವಸ್ತುಗಳು. ತಂಬಾಕನ್ನು ಯಾವುದೇ ರೂಪದಲ್ಲಿ ಉಪಯೋಗಿಸುವಂತಿಲ್ಲ.

* ಧೂಮಪಾನ ಖಂಡಿತವಾಗಿಯೂ ಕ್ಯಾನ್ಸರ್ ರೋಗಕ್ಕೆ ಪೂರಕ. ಧೂಮಪಾನ ಮಾಡುವ ಶೇಕಡಾ 70 ಮಂದಿ ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ.

* ಮದ್ಯಪಾನ ವರ್ಜಿಸಬೇಕು. ಧೂಮಪಾನ, ಮದ್ಯಪಾನ ಮತ್ತು ತಂಬಾಕು ಮೂರು ಕೂಡ ಮನುಕುಲದ ಬಹುದೊಡ್ಡ ವೈರಿ. ಇವು ಮೂರು ಚಟಗಳು ಒಟ್ಟು ಸೇರಿದಲ್ಲಿ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ.

* ಕೆಲವೊಂದು ಕ್ಯಾನ್ಸರ್ (ವೃಷಣದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ಆನುವಂಶೀಯವಾಗಿ ಬರುತ್ತದೆ. ಈ ರೀತಿಯ ಚರಿತ್ರೆಯುಳ್ಳವರು ಕಾಲಕಾಲಕ್ಕೆ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು.

* ಅತಿಯಾದ ರಸದೂತಗಳ ಬಳಕೆ ಮತ್ತು ಅತಿಯಾದ ಗರ್ಭನಿರೋಧಕಗಳ ಬಳಕೆಯಿಂದ ಕ್ಯಾನ್ಸರ್ ಬರಲೂಬಹುದು. ಅದೇ ರೀತಿ ಅನಾರೋಗ್ಯಕರ ಲೈಂಗಿಕ ಪ್ರಕ್ರಿಯೆಗಳು ಮತ್ತು ಸಂಬಂಧಗಳಿಗೆ ಕಡಿವಾಣ ಹಾಕಲೇಬೇಕು. ಇಲ್ಲವಾದಲ್ಲಿ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ.

* ಆರೋಗ್ಯಕರವಾದ ಜೀವನ ಕ್ರಮ, ಪರಿಪೂರ್ಣವಾದ ಸಮತೋಲಿತ ಆಹಾರ, ಶಿಸ್ತು ಬದ್ಧವಾದ ನಿರಂತರವಾದ ದೈಹಿಕ ವ್ಯಾಯಾಮಗಳಿಂದ ಕೂಡಿದ ಜೀವನಶೈಲಿ ಮತ್ತು ಒತ್ತಡ ರಹಿತ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು. ವಿಕಿರಣ ಸೂಸುವ ವಾತಾವರಣ ಮತ್ತು ವೃತ್ತಿ ಸಂಬಂಧಿ ಕ್ಯಾನ್ಸರ್‌ಕಾರಕ (ಸೀಸದ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ) ವಾತಾವರಣವಿದ್ದಲ್ಲಿ ವೃತ್ತಿಯನ್ನು ಬದಲಿಸಿ, ಕ್ಯಾನ್ಸರ್ ಬರದಂತೆ ಎಚ್ಚರ ವಹಿಸಬೇಕು.

* ಕಾಲ ಕಾಲಕ್ಕೆ ವೈದ್ಯರ ಬಳಿ ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಂಡಲ್ಲಿ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಸರ್ವಿಕ್ಸ್ ಕ್ಯಾನ್ಸರ್ ಮತ್ತು ಇನ್ನಾವುದೇ ಕ್ಯಾನ್ಸರನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಬಹುದು. ಕ್ಯಾನ್ಸರ್ ರೋಗದ ವಿಚಾರದಲ್ಲಿ ರೋಗದ ಚಿಕಿತ್ಸೆಗಿಂತ ರೋಗವನ್ನು ತಡೆಗಟ್ಟುವಂತೆ ಮುನ್ನೆಚ್ಚರಿಕೆ ವಹಿಸುವುದರಲ್ಲಿಯೇ ಜಾಣತನ ಅಡಗಿದೆ.

ಚಿಕಿತ್ಸೆ ಹೇಗೆ?

 ಕ್ಯಾನ್ಸರ್ ರೋಗಕ್ಕೆ ಮೂಲಭೂತ ಚಿಕಿತ್ಸೆ ಎಂದರೆ ಕ್ಯಾನ್ಸರ್ ಪೀಡಿತ ಗಡ್ಡೆಯನ್ನು ಸರ್ಜರಿ ಮುಖಾಂತರ ತೆಗೆಯುವುದು. ಪ್ರಾರಂಭಿಕ ಹಂತದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತದೆ. ಮುಂದುವರಿದ ಹಂತದಲ್ಲಿ ಸರ್ಜರಿ ಜೊತೆಗೆ ವಿಕಿರಣ ಚಿಕಿತ್ಸೆ ಹಾಗೂ ಕಿಮೋಥೆರಫಿಯ ಅವಶ್ಯಕತೆ ಇರುತ್ತದೆ. ಕೆಲವೊಂದು ಕ್ಯಾನ್ಸರ್‌ಗಳನ್ನು ಕಿಮೋಥೆರಫಿಯಿಂದಲೇ ಗುಣಪಡಿಸಲಾಗುತ್ತದೆ. (ಉದಾಹರಣೆ ಲಿಂಫೋಮ ಎನ್ನುವ ಕ್ಯಾನ್ಸರ್) ಮುಂದುವರಿದ ಹಂತದಲ್ಲಿ ಎಲ್ಲಾ ಮೂರು ರೀತಿಯ ಚಿಕಿತ್ಸೆಯೂ ಬೇಕಾಗಬಹುದು ಮತ್ತು ಚಿಕಿತ್ಸೆಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದೇ ಇರಬಹುದು. ಚಿಕಿತ್ಸೆಯ ವಿಧಾನ, ಪ್ರಮಾಣ ಮತ್ತು ಚಿಕಿತ್ಸೆಯ ಸಮಯ ಎಲ್ಲವನ್ನು ವೈದ್ಯರೇ ನಿರ್ಧರಿಸುತ್ತಾರೆ. ವೈದ್ಯರ ಸೂಕ್ತ ಮಾರ್ಗದರ್ಶದಂತೆ ಚಿಕಿತ್ಸೆ ಪಡೆದಲ್ಲಿ ಕ್ಯಾನ್ಸರ್ ರೋಗವನ್ನು ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಗುಣಪಡಿಸಬಹುದು ಮತ್ತು ಇತರರಂತೆ ನೆಮ್ಮದಿಯ ಜೀವನ ನಡೆಸಬಹುದು ಮತ್ತು ನಡೆಸಿದ ನಿದರ್ಶನಗಳು ನಮ್ಮ ಮುಂದೆಯೇ ಹಲವಾರು ಇವೆ.

share
ಡಾ. ಮುರಲೀ ಮೋಹನ ಚೂಂತಾರು
ಡಾ. ಮುರಲೀ ಮೋಹನ ಚೂಂತಾರು
Next Story
X