Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಹೆಸರಿನ ಹೋರಾಟದಲ್ಲಿ ಅಂತರ್...

ರೈತರ ಹೆಸರಿನ ಹೋರಾಟದಲ್ಲಿ ಅಂತರ್ ರಾಷ್ಟ್ರೀಯ ಪಿತೂರಿ: ಸದಾನಂದಗೌಡ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Feb 2021 4:08 PM IST
share
ರೈತರ ಹೆಸರಿನ ಹೋರಾಟದಲ್ಲಿ ಅಂತರ್ ರಾಷ್ಟ್ರೀಯ ಪಿತೂರಿ: ಸದಾನಂದಗೌಡ ಆರೋಪ

ಮಡಿಕೇರಿ, ಫೆ.4: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಒಂದು ದೇಶ, ಒಂದು ಕಾನೂನು ವ್ಯವಸ್ಥೆಯನ್ನು ವಿಭಜಿಸುವ ಅಂತರರಾಷ್ಟ್ರೀಯ ಮಟ್ಟದ ಪಿತೂರಿ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ರೈತರ ಹೆಸರಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತನ್ನ ಸ್ವಂತ ಭೂಮಿ, ಹಣ, ಶ್ರಮದಿಂದ ಬೆಳೆ ಬೆಳೆದ ರೈತನಿಗೆ ಬೆಳೆ ಮಾರಾಟ ಮಾಡುವ ಸಂದರ್ಭ ಮಧ್ಯವರ್ತಿಗಳು ಹಾಗೂ ಸರ್ಕಾರದಿಂದ ತೊಂದರೆಯಾಗಬಾರದು ಮತ್ತು ಸ್ವತಂತ್ರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕೆನ್ನುವ ಉದ್ದೇಶದಿಂದ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಎಪಿಎಂಸಿ ಯಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ, ಆದರೆ ದರ ಮತ್ತು ಕರ ನಿಗಧಿ ಮಾಡುವಾಗ ಮಾತ್ರ ನಿಗಾವಹಿಸುತ್ತದೆ ಎಂದರು. ರೈತರನ್ನು ಮಾತುಕತೆಗೆ ಕರೆದಿದ್ದೇವೆ, ಆದರೆ ಯಾರೂ ಬರುತ್ತಿಲ್ಲ. ಯಾಕೆ ಬರುತ್ತಿಲ್ಲವೆಂದು ತಿಳಿದಿಲ್ಲ. ಹೋರಾಟದಲ್ಲಿ ತೊಡಗಿರುವವರೆಲ್ಲರೂ ರೈತರಲ್ಲ, ಇದೊಂದು ರಾಜಕೀಯ ಪ್ರೇರಿತ ಪ್ರತಿಭಟನೆಯಾಗಿದೆ. 

ಅಲ್ಲದೆ ಈ ವಿಚಾರದಲ್ಲಿ ಅಂತರರಾಷ್ಟ್ರೀಯ ಸಿನಿಮಾ ಮಂದಿ ಮಧ್ಯ ಪ್ರವೇಶ ಮಾಡುತ್ತಿರುವುದು ಯಾಕೆ, ಅವರಿಗೆ ರೈತ ಕಾನೂನು ಗೊತ್ತಿದೆಯೇ ಎಂದು ಪ್ರಶ್ನಿಸಿದ ಸದಾನಂದಗೌಡ ಅವರು, ಕಾಶ್ಮೀರ ಸಮಸ್ಯೆ ಬಗೆಹರಿದು ಒಂದು ದೇಶ, ಒಂದು ಕಾನೂನು ಜಾರಿಯಾದ ನಂತರದ ಅಂತರರಾಷ್ಟ್ರೀಯ ಕುತಂತ್ರ ಇದಾಗಿದೆ ಎಂದು ಆರೋಪಿಸಿದರು. 

ರೈತರ ಸಮಸ್ಯೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಒದಗಿಸಲು ಸರ್ಕಾರ ಇಂದಿಗೂ ಸಿದ್ಧವಿದೆ ಎಂದರು.

ಸೆಸ್ ಮತ್ತು ಟ್ಯಾಕ್ಸ್ ವಿಭಿನ್ನ
ಸೆಸ್ ಮತ್ತು ಟ್ಯಾಕ್ಸ್ ವಿಭಿನ್ನವಾಗಿದ್ದು, ಇದರ ವ್ಯತ್ಯಾಸವನ್ನು ಜನರು ಮೊದಲು ಅರ್ಥ ಮಾಡಿಕೊಳ್ಳಬೇಕು. ಸೆಸ್‌ನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗುವುದೋ ಆ ಉದ್ದೇಶಕ್ಕಾಗಿ ಮಾತ್ರ ಬಳಸಲಾಗುತ್ತದೆ. ಆದರೆ ಟ್ಯಾಕ್ಸ್ ನ್ನು ಯಾವುದಕ್ಕೆ ಬೇಕಾದರೂ ಬಳಸಬಹುದಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಕೃಷಿ ಸೆಸ್‌ನ್ನು ಕೃಷಿಗೇ ಬಳಸಲಾಗುತ್ತದೆ ಎಂದು ಸದಾನಂದಗೌಡ ಇದೇ ಸಂದರ್ಭ ಸ್ಪಷ್ಟಪಡಿಸಿದರು.

ಈ ರೀತಿಯ ವ್ಯವಸ್ಥೆಗಳಿಂದಲೇ ಇಂದು ಸುಮಾರು 8 ಕೋಟಿ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ನೀಡಲು ಸಾಧ್ಯವಾಗಿದೆ ಎಂದರು.

ಶಬ್ಧ ಪ್ರಯೋಗ ಗೊತ್ತಿಲ್ಲ
ಸುಮಾರು 10 ಬಾರಿ ಬಜೆಟ್ ಮಂಡಿಸಿ, 5 ವರ್ಷ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರಿಗೆ ಶಬ್ಧ ಪ್ರಯೋಗವೇ ಗೊತ್ತಿಲ್ಲ. ಅವರು ಮಾಡಿದ ಟೀಕೆಗೆ ನಾನು ಉತ್ತರ ನೀಡುವುದಿಲ್ಲ, ಜನರೇ ನೀಡುತ್ತಾರೆ ಎಂದು ಬಜೆಟ್ ಬಗೆಗಿನ ಟೀಕೆಗೆ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X