Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದನವನ್ನು ಮುಂದೂಡಿ ಎಲ್ಲರೂ ಪಿಕ್‍ನಿಕ್‍...

ಸದನವನ್ನು ಮುಂದೂಡಿ ಎಲ್ಲರೂ ಪಿಕ್‍ನಿಕ್‍ ಹೋಗೋಣ ಎಂದ ಸಿದ್ದರಾಮಯ್ಯ

ಸಚಿವರು- ಅಧಿಕಾರಿಗಳ ಗೈರು ಹಾಜರಿಗೆ ತೀವ್ರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ4 Feb 2021 6:44 PM IST
share
ಸದನವನ್ನು ಮುಂದೂಡಿ ಎಲ್ಲರೂ ಪಿಕ್‍ನಿಕ್‍ ಹೋಗೋಣ ಎಂದ ಸಿದ್ದರಾಮಯ್ಯ

ಬೆಂಗಳೂರು, ಫೆ. 4: ‘ಅಧಿವೇಶನ ನಡೆಯುವ ಸಂದರ್ಭದಲ್ಲಿ ಸದನಕ್ಕೆ ಬಂದು ಕೂರುವ ವ್ಯವದಾನವೂ ಇಲ್ಲದೇ ಹೋದರೆ ಸಚಿವರು ಮತ್ತು ಶಾಸಕರಾಗಿ ಏಕೆ ಆಯ್ಕೆಯಾಗಬೇಕು' ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ಹಾಗೂ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವದ ಮೇಲೆ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ್ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, ಸದನ ಕಲಾಪದಲ್ಲಿ ಸಚಿವರು, ಅಧಿಕಾರಿಗಳು ಹಾಗೂ ಶಾಸಕರು ಇಲ್ಲದೆ ಹೋದರೆ ಸದಸ್ಯರು ಯಾರಿಗಾಗಿ ಮತ್ತು ಏಕೆ ಮಾತನಾಡಬೇಕೆಂದು ಕಿಡಿಕಾರಿದರು.

ಈ ಹಿಂದೆ ನಾನು ಸ್ಪೀಕರ್ ಆಗಿದ್ದ ವೇಳೆ ಸದಸ್ಯರ ಹಾಜರಿ ಪುಸ್ತಕ ತರಿಸಿ ಪರಿಶೀಲಿಸಿ ಅವರು ಮನೆಯಲ್ಲಿ ಇಲ್ಲದೆ, ಸದನದಲ್ಲಿ ಇಲ್ಲದಿದ್ದರೆ ಯಾರ ಮನೆಯಲ್ಲಿ ಇದ್ದಾರೆ ಎಂದು ಹುಡುಕಿ ಎಂದು ಆಯಾ ಪಕ್ಷಗಳ ಸಚೇತಕರಿಗೆ ಸೂಚನೆ ನೀಡುತ್ತಿದ್ದೆ ಎಂದು ರಮೇಶ್ ಕುಮಾರ್ ತಿಳಿಸಿದರು.

‘ನೀವು (ಕಾಗೇರಿ ಅವರನ್ನು ಕುರಿತು) ಸ್ಪೀಕರ್ ಸ್ಥಾನಕ್ಕೆ ಬಂದ ಆರಂಭದಲ್ಲಿ ಪೂರ್ಣ ಚಂದ್ರನಂತೆ ಇದ್ದಿರಿ. ಇವಾಗ ಅಮಾವಾಸ್ಯೆ ಹತ್ತಿರ ಬಂದ ಚಂದ್ರನಂತೆ ಆಗಿದ್ದೀರಿ' ಎಂದು ಮರುಕ ವ್ಯಕ್ತಪಡಿಸಿದ ರಮೇಶ್ ಕುಮಾರ್, ಸಚಿವರು, ಅಧಿಕಾರಿಗಳು ಹಾಗೂ ಶಾಸಕರು ಸದನಕ್ಕೆ ಹಾಜರಾಗುವಂತೆ ಪ್ರಯತ್ನ ನಡೆಸಬೇಕು' ಎಂದು ಸಲಹೆ ಮಾಡಿದರು.

‘ಸಂಪುಟ ದರ್ಜೆಯ ಸಚಿವರಿಗೆ ಅನುಭವ ಇರಬೇಕು, ನಿಯಮಾವಳಿಗಳ ಬಗ್ಗೆ ಮಾಹಿತಿ ಇರಬೇಕು. ಆದರೆ, ನಮ್ಮಲ್ಲಿ ಎಲ್ಲರೂ ಸಂಪುಟ ಸಚಿವರೇ? ಈ ಸಂಪುಟ ದರ್ಜೆ ಸಚಿವರು ಗ್ರಂಥಾಲಯಕ್ಕೂ ಹೋಗುವುದಿಲ್ಲ, ಇಲಾಖಾ ಮಾಹಿತಿಯೂ ಹೊಂದಿರುವುದಿಲ್ಲ, ನಿಯಮಾವಳಿಯೂ ತಿಳಿದಿಲ್ಲ, ಸಂವಿಧಾನ, ನಿಯಮಾವಳಿಗಳ ಅರಿವೂ ಇವರಿಗೆ ಇರುವುದಿಲ್ಲ' ಎಂದು ರಮೇಶ್ ಕುಮಾರ್ ಟೀಕಿಸಿದರು.

ಅನಿರ್ದಿಷ್ಟಾವಧಿಗೆ ಮುಂದೂಡಿ: ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ‘ಸದನದಲ್ಲಿ ಸಚಿವರು ಮತ್ತು ಅಧಿಕಾರಿಗಳು ಹಾಜರಿರಬೇಕು. ಆದರೆ, ಕಾರಜೋಳ ಅವರನ್ನು ಹೊರತುಪಡಿಸಿದರೆ ಉಳಿದ ಸಚಿವರು ಇಲ್ಲ. ಅಧಿಕಾರಿಗಳ ಗ್ಯಾಲರಿಯೂ ಖಾಲಿಯಾಗಿದೆ. ಹೀಗಾದರೆ ಇವರೆಲ್ಲ ಏಕೆ ಸಚಿವರಾಗುತ್ತಾರೆ, ಇದೇನು ಹುಡುಗಾಟವೇ?' ಎಂದು ವಾಗ್ದಾಳಿ ನಡೆಸಿದರು.

‘ಕಾರಜೋಳ ಅವರೇ ನೀವೊಬ್ಬರು ಇದ್ದರೆ ಎಲ್ಲರೂ ಇದ್ದ ಹಾಗಲ್ಲ, ನೀವೊಬ್ಬರೇ ಎಲ್ಲ ಇಲಾಖೆ ನಿರ್ವಹಣೆ ಮಾಡಲು, ಎಲ್ಲ ಸದಸ್ಯರ ಮಾತುಗಳನ್ನು ನೀವು ಕೇಳಿಸಿಕೊಂಡು ಎಲ್ಲ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಸಾಧ್ಯವೇ? ಸ್ಪೀಕರ್ ಅವರೇ ಕೂಡಲೇ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಲ್ಲರೂ ಎಲ್ಲಾದರೂ ಪಿಕ್‍ನಿಕ್‍ ಹೋಗೊಣ' ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸಚಿವರು ಸದನಕ್ಕೆ ಬಂದರೆ ಅವರ ಕೊಠಡಿಗಳಲ್ಲಿರುವ ಶಾಸಕರೂ, ಅಧಿಕಾರಿಗಳು ಸದನಕ್ಕೆ ಬರುತ್ತಾರೆ. ಹೀಗಾಗಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರು ಸದನದಲ್ಲಿ ಹಾಜರಿರಬೇಕು. ಅಲ್ಲದೆ, ಅಧಿಕಾರಿಗಳು ಇರಬೇಕು ಎಂದು ತಾಕೀತು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X