Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ...

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್‍ ಚಂದ್ರ ಶೆಟ್ಟಿ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ4 Feb 2021 8:35 PM IST
share
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್‍ ಚಂದ್ರ ಶೆಟ್ಟಿ ರಾಜೀನಾಮೆ

ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್‍ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ವಿಧಾನ ಪರಿಷತ್‍ನಲ್ಲಿ ವಿದಾಯ ಭಾಷಣ ಮಾಡಿದ ಸಭಾಪತಿ ಅವರು, ಸಂಖ್ಯಾ ಬಲಾಬಲದ ಆಧಾರದ ಮೇಲೆ ಸಭಾಪತಿ ಆಯ್ಕೆ ನಡೆಯುತ್ತದೆ. ತಾಂತ್ರಿಕವಾಗಿ ನಾನು ಸಭಾಪತಿಯಾಗಿ ಮುಂದುವರಿಯಲು ಅವಕಾಶವಿದೆ. ಆದರೆ, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವುದರಿಂದ ಸದನದ ನಿಯಮದಂತೆ ಪೀಠಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಸದನದ ಘನತೆ, ಚ್ಯುತಿ ಬಾರದಂತೆ ನಡೆದುಕೊಳ್ಳುವ ಅನಿವಾರ್ಯತೆ ವಿಧಾನ ಪರಿಷತ್‍ನ ಎಲ್ಲ ಸದಸ್ಯರಿಗೆ ಇದೆ. ಕೆಲವೊಮ್ಮೆ ಸದನದ ಸದಸ್ಯರ ಬದಲಾದಂತೆ ನಿಲುವುಗಳು ಬದಲಾಗುತ್ತವೆ. ಅಂಥ ನಿಲುವುಗಳಿಗೆ ಹಿಡಿತದಲ್ಲಿದ್ದರೂ ಗೌರವ ಸಲ್ಲಿಸಬೇಕಾಗುತ್ತದೆ. ಇದಕ್ಕೆ ನಾನು ಕೂಡ ಹೊರತಾಗಿಲ್ಲ. ನನ್ನ ಮೇಲಿನ ನಂಬಿಕೆ ಕಡಿಮೆಯಾಗಿದೆ ಎಂಬ ವಿಚಾರ ಅರಿತು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಮುಂದಿನ ಬಜೆಟ್ ಅಧಿವೇಶನದವರೆಗೂ ಈ ಸ್ಥಾನದಲ್ಲಿ ಇರುವ ಅವಕಾಶ ನನಗಿತ್ತು. ಆದರೆ ಎಲ್ಲರ ಬಯಕೆ ಬೇರೆಯದೇ ಆಗಿರುವ ಹಿನ್ನೆಲೆ ಈ ಸ್ಥಾನದಲ್ಲಿ ಇನ್ನೂ ಹೆಚ್ಚು ಸಮಯ ಮುಂದುವರಿಯದಿರಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು. 

ವಿಧಾನ ಪರಿಷತ್‍ಗೆ ಭವ್ಯ ಇತಿಹಾಸವಿದೆ. ಚಿಂತಕರ ಚಾವಡಿ ಎಂದು ಜನ ಬಣ್ಣಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಪೀಠವು ಜವಾಬ್ದಾರಿಯುತ ಸ್ಥಾನವಾಗಿದೆ. ಜವಾಬ್ದಾರಿಯುತ ಸ್ಥಾನದ ಗೌರವ ಎತ್ತಿ ಹಿಡಿಯಬೇಕಿದೆ. 37 ವರ್ಷ ಜನಪ್ರತಿನಿಧಿಯಾಗಿ ನಡೆ, ನುಡಿಯಲ್ಲಿ ಬದಲಾಗದೇ ಸಾಗಿ ಬಂದಿದ್ದೇನೆ. ಜನ ಸಾಮಾನ್ಯರಲ್ಲಿ ನಂಬಿಕೆ ಬದಲಾಗುವ ವಾತಾವರಣ ಗಮನಿಸಿದ್ದೇನೆ. ನಾವೆಲ್ಲಾ ಒಳ್ಳೆಯವರು, ಜವಾಬ್ದಾರಿ ನಿಭಾಯಿಸುವಾಗ, ಪಕ್ಷ ಬದಲಾವಣೆ ಇತ್ಯಾದಿ. ಇಷ್ಟವಿಲ್ಲದಿದ್ದರೂ 2018ರ ಡಿ.12ರಂದು ಬೆಳಗಾವಿಯಲ್ಲಿ ನನ್ನನ್ನು ಸಭಾಪತಿಯಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ಭಾವನೆಗೆ ಧಕ್ಕೆ ಆಗದಂತೆ ನಡೆದುಕೊಂಡಿದ್ದೇನೆ. ಸ್ಥಾನಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ.

ಇಂಥ ಸ್ಥಾನ ಕತ್ತಿಯ ಮೇಲಿನ ಅಲುಗಿನ ಮೇಲಿನ ನಡಿಗೆಯಾಗಿದೆ ಎಂಬ ಅರಿವಿದೆ. ಪಕ್ಷಗಳ ಸ್ಥಾನ ಬದಲಾದಾಗ ಸಭಾಪತಿ ಪೀಠದ ನಿಭಾಯಿಸುವ ವ್ಯಕ್ತಿಗಳು ಬದಲಾಗುತ್ತಾರೆ. ಸಹವರ್ತಿಗಳು ಹಲವರು ನನ್ನ ಆತ್ಮೀಯರು. ಇಂದಿನ ಬದಲಾದ ವ್ಯವಸ್ಥೆಗೆ ಬಲಿಯಾಗಿ ಹಲವರು ಇಂದು ನನ್ನ ವಿಚಾರದಲ್ಲಿ ಪೂರ್ಣ ಮನಸ್ಸಿನಿಂದ ಕೈಗೊಂಡಿದ್ದು ಅಲ್ಲ ಎನ್ನುವುದು ನನಗೆ ಗೊತ್ತಿದೆ. ಇಲ್ಲಿ ಸ್ಥಾನಗಳ ಬಲಾಬಲದ ಮೇಲೆ ಸಭಾಪತಿಗಳು ಬದಲಾದರೆ ನೈಜ ಗೌರವ ಉಳಿಯುವುದಿಲ್ಲ. ಅಂಕೆ ಸಂಖ್ಯೆಗಳ ಆಧಾರದಲ್ಲಿ ನನ್ನ ಅವಧಿಯಲ್ಲಿ ಒಂದು ಅಹಿತಕರ ಘಟನೆ ಕೂಡ ನಡೆದಿದೆ. ನೈತಿಕತೆಯ ಅರಿವು ನನಗಿದೆ. ರಾಜ್ಯಪಾಲರಿಗೆ ನನ್ನ ಅವಧಿಯ ಎಲ್ಲ ಮಾಹಿತಿ ನೀಡಿದ್ದೇನೆ. ಇಲ್ಲಿನ ಅಹಿತಕರ ಘಟನೆ ಸವಿಸ್ತಾರ, ನ್ಯಾಯಯುತ ತನಿಖೆ ನಡೆಸುವ ಕಾರ್ಯ ಮಾಡಿದ್ದೇನೆ. ಸಮಿತಿ ರಚನೆ ಮಾಡಿದ್ದು ಅದು ಮಧ್ಯಂತರ ವರದಿ ಕೂಡ ಸಲ್ಲಿಸಿದ್ದು ಪರಿಷತ್ತಿನಲ್ಲಿ ಅದನ್ನು ಮಂಡಿಸಲಾಗಿದೆ. ಸಮಿತಿ ಮನವಿ ಮೇರೆಗೆ ಮೂರು ತಿಂಗಳ ಕಾಲಾವಧಿಯನ್ನು ವಿಸ್ತರಿಸಲಾಗಿದೆ. ನನ್ನ ಕಾಲಾವಧಿಯಲ್ಲಿ ಯಾವುದೇ ರೀತಿ ಪೀಠಕ್ಕೆ ಬಾರದ ರೀತಿ ನಡೆದುಕೊಂಡಿದ್ದೇನೆ. ಪಕ್ಷಭೇದ ತೋರದೆ ನ್ಯಾಯಯುತವಾಗಿ ನಡೆದುಕೊಂಡಿದ್ದೇನೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಅಂತಿಮವಾಗಿ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿ ಪೀಠದಿಂದ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X